Jeremias 29

Kannada Bible (GL_KANNADA) vs ACF

Sair da comparação
ACF Almeida Corrigida Fiel
1 ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ
1 E Estas são as palavras da carta que Jeremias, o profeta, enviou de Jerusalém, aos que restaram dos anciãos do cativeiro, como também aos sacerdotes, e aos profetas, e a todo o povo que Nabucodonosor havia deportado de Jerusalém para babilônia
2 ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ
2 (Depois que saíram de Jerusalém o rei Jeconias, e a rainha, e os eunucos, e os príncipes de Judá e Jerusalém, e os carpinteiros e ferreiros),
3 ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--
3 Pela mão de Elasa, filho de Safã, e de Gemarias, filho de Hilquias (os quais Zedequias, rei de Judá, tinha enviado a babilônia, a Nabucodonosor, rei de babilônia), dizendo:
4 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಯೆರೂಸಲೇಮಿನಿಂದ ಬಾಬೆಲಿಗೆ ತಾನು ಸೆರೆಯಾಗಿ ಸಾಗಿಸಿದವರಿಗೆ ಹೇಳುವದೇನಂದರೆ--
4 Assim diz o SENHOR dos Exércitos, o Deus de Israel, a todos os do cativeiro, os quais fiz transportar de Jerusalém para babilônia:
5 ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ;
5 Edificai casas e habitai-as; e plantai jardins, e comei o seu fruto.
6 ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
6 Tomai mulheres e gerai filhos e filhas, e tomai mulheres para vossos filhos, e dai vossas filhas a maridos, para que tenham filhos e filhas; e multiplicai-vos ali, e não vos diminuais.
7 ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.
7 E procurai a paz da cidade, para onde vos fiz transportar em cativeiro, e orai por ela ao Senhor; porque na sua paz vós tereis paz.
8 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
8 Porque assim diz o Senhor dos Exércitos, o Deus de Israel: Não vos enganem os vossos profetas que estão no meio de vós, nem os vossos adivinhos, nem deis ouvidos aos vossos sonhos, que sonhais;
9 ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
9 Porque eles vos profetizam falsamente em meu nome; não os enviei, diz o Senhor.
10 ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
10 Porque assim diz o SENHOR: Certamente que passados setenta anos em babilônia, vos visitarei, e cumprirei sobre vós a minha boa palavra, tornando a trazer-vos a este lugar.
11 ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
11 Porque eu bem sei os pensamentos que tenho a vosso respeito, diz o Senhor; pensamentos de paz, e não de mal, para vos dar o fim que esperais.
12 ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
12 Então me invocareis, e ireis, e orareis a mim, e eu vos ouvirei.
13 ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
13 E buscar-me-eis, e me achareis, quando me buscardes com todo o vosso coração.
14 ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
14 E serei achado de vós, diz o Senhor, e farei voltar os vossos cativos e congregar-vos-ei de todas as nações, e de todos os lugares para onde vos lancei, diz o Senhor, e tornarei a trazer-vos ao lugar de onde vos transportei.
15 ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
15 Porque dizeis: O SENHOR nos levantou profetas em babilônia.
16 ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
16 Porque assim diz o Senhor acerca do rei que se assenta no trono de Davi, e de todo o povo que habita nesta cidade, vossos irmãos, que não saíram conosco para o cativeiro.
17 ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.
17 Assim diz o Senhor dos Exércitos: Eis que enviarei entre eles a espada, a fome e a peste, e fá-los-ei como a figos podres que não se podem comer, de ruins que são.
18 ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
18 E persegui-los-ei com a espada, com a fome, e com a peste; e dá-los-ei para deslocarem-se por todos os reinos da terra, para serem uma maldição, e um espanto, e um assobio, e um opróbrio entre todas as nações para onde os tiver lançado.
19 ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ.
19 Porquanto não deram ouvidos às minhas palavras, diz o Senhor, mandando-lhes eu os meus servos, os profetas, madrugando e enviando; mas vós não escutastes, diz o Senhor.
20 ಆದದ ರಿಂದ ನಾನು ಯೆರೂಸಲೇಮಿ ನಿಂದ ಬಾಬೆಲಿಗೆ ಕಳುಹಿಸಿದ ಸೆರೆಯವರೆಲ್ಲರೇ,
20 Vós, pois, ouvi a palavra do SENHOR, todos os do cativeiro que enviei de Jerusalém a babilônia.
21 ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು.
21 Assim diz o SENHOR dos Exércitos, o Deus de Israel, acerca de Acabe, filho de Colaías, e de Zedequias, filho de Maaséias, que vos profetizam falsamente em meu nome: Eis que os entregarei na mão de Nabucodonosor, rei de babilônia, e ele os ferirá diante dos vossos olhos.
22 ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
22 E todos os transportados de Judá, que estão em babilônia, tomarão deles uma maldição, dizendo: O SENHOR te faça como Zedequias, e como Acabe, os quais o rei de babilônia assou no fogo;
23 ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
23 Porquanto fizeram loucura em Israel, e cometeram adultério com as mulheres dos seus vizinhos, e anunciaram falsamente, em meu nome uma palavra, que não lhes mandei, e eu o sei e sou testemunha disso, diz o Senhor.
24 ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು--
24 E a Semaías, o neelamita, falarás, dizendo:
25 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
25 Assim fala o Senhor dos Exércitos, o Deus de Israel, dizendo: Porquanto tu enviaste no teu nome cartas a todo o povo que está em Jerusalém, como também a Sofonias, filho de Maaséias, o sacerdote, e a todos os sacerdotes, dizendo:
26 ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
26 O Senhor te pôs por sacerdote em lugar de Joiada, o sacerdote, para que sejas encarregado da casa do Senhor sobre todo o homem fanático, e que profetiza, para o lançares na prisão e no tronco.
27 ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ?
27 Agora, pois, por que não repreendeste a Jeremias, o anatotita, que vos profetiza?
28 ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.
28 Porque até nos mandou dizer em babilônia: Ainda o cativeiro muito há de durar; edificai casas, e habitai nelas; e plantai pomares, e comei o seu fruto.
29 ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
29 E leu Sofonias, o sacerdote, esta carta aos ouvidos de Jeremias, o profeta.
30 ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--
30 E veio a palavra do Senhor a Jeremias, dizendo:
31 ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣ
31 Manda a todos os do cativeiro, dizendo: Assim diz o Senhor acerca de Semaías, o neelamita: Porquanto Semaías vos profetizou, e eu não o enviei, e vos fez confiar em mentiras,
32 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
32 Portanto assim diz o Senhor: Eis que castigarei a Semaías, o neelamita, e a sua descendência; ele não terá ninguém que habite entre este povo, e não verá o bem que hei de fazer ao meu povo, diz o Senhor, porque falou em rebeldia contra o Senhor.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Jeremias 29, comparar traduções ou montar um estudo — tudo direto pelo WhatsApp.