Jeremias 2

Kannada Bible (GL_KANNADA) vs VC

Sair da comparação
VC Versão Católica
1 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
1 A palavra do Senhor foi-me dirigida nestes termos:
2 ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
2 Vai e clama aos ouvidos de Jerusalém estas palavras - oráculo do Senhor: Lembro-me de tua afeição quando eras jovem, de teu amor de noivado, no tempo em que me seguias ao deserto, à terra sem sementeiras.
3 ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
3 Era, então, Israel propriedade sagrada do Senhor. As primícias de sua colheita, todos quantos dela comiam, carregavam-lhe a culpa, e o mal lhes advinha - oráculo do Senhor.
4 ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.
4 Escutai a palavra do Senhor, casa de Jacó, e vós, famílias todas que sois da casa de Israel -
5 ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
5 oráculo do Senhor: Que injustiça em mim encontraram vossos pais para que de mim se afastassem correndo após o que é nada, e tornando-se a si mesmos vãos;
6 ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
6 por haverem cessado de dizer: Onde está o Senhor que nos fez sair do Egito, guiando-nos através do deserto, terra de desolação e de abismos, terra de aridez e de trevas, terra por onde nenhum homem atravessa, onde homem algum habita?
7 ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
7 Encaminhei-vos a uma terra de vergéis, para lhe comerdes os frutos e saborear-lhe os bens; tão logo chegastes, maculastes-me a terra; e transformastes minha herança em lugar que me causa horror.
8 ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
8 Não haviam dito os sacerdotes: Onde está o Senhor? Os depositários da lei não me conheceram; revoltaram-se contra mim os pastores, e os profetas proferiram oráculos em nome de Baal. Puseram-se a seguir aqueles {deuses} que nenhum socorro lhes dão.
9 ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.
9 Por isso - oráculo do Senhor -, entro agora em juízo contra vós e contra os filhos de vossos filhos.
10 ಕಿತ್ತೀಮ್‌ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.
10 Passai, portanto, às ilhas de Cetim e olhai: enviai homens a Cedar e observai bem, vede se lá existe algo semelhante.
11 ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
11 Troca uma nação seus deuses? {Os quais nem são deuses!} Meu povo, contudo, trocou {aquele que é} sua glória por aquele que nada é.
12 ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.
12 Ó céus, pasmai, tremei de espanto e horror - oráculo do Senhor.
13 ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
13 Porque meu povo cometeu uma dupla perversidade: abandonou-me, a mim, fonte de água viva, para cavar cisternas, cisternas fendidas que não retêm a água.
14 ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು?
14 Israel é servo, porventura? É escravo nascido na própria casa? Por que foi entregue à pilhagem?
15 ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
15 Rugiram contra ele os leões enfurecidos; transformando a região em deserto, as cidades foram entregues às chamas, e já não possuem habitantes.
16 ನೋಫ್‌ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
16 Até os homens de Mênfis e de Táfnis te raparam a cabeça.
17 ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
17 Não te aconteceu tudo isso por haveres abandonado o Senhor teu Deus, quando te guiava pelo caminho?
18 ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
18 E agora, por que tomas a rota do Egito para ir beber a água do Nilo? Para que tomas o caminho da Assíria a fim de beber a água do Eufrates?
19 ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
19 Valeu-te este castigo tua malícia, e tuas infidelidades atraíram sobre ti a punição. Sabe, portanto, e vê quanto te foi funesto e amargo abandonar o Senhor teu Deus e não ter tido mais temor algum de mim - oráculo do Senhor JAVÉ dos exércitos.
20 ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
20 Há muito rompeste o jugo e quebraste os laços; disseste, então: Não quero mais ser dominado. Sobre todas as colinas elevadas, debaixo de todas as árvores verdejantes, qual cortesã te reclinavas.
21 ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
21 E eu que te havia plantado de vides escolhidas, todas de boa cepa; como te transformaste em sarmentos bastardos de uma videira estranha?
22 ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.
22 Ainda que te lavasses com potassa, e usasses muito sabão, continuaria teu pecado a macular-te a meus olhos - oráculo do Senhor JAVÉ.
23 ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
23 Como podes dizer: Não me profanei nem andei atrás dos Baal? Olha para os sinais de teus passos no vale, vê tudo o que fizeste. Dromedária leviana, a correr sem rumo,
24 ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
24 jumenta selvagem habituada ao deserto, aspirando o vento no calor da paixão, quem a deterá em seus ardores? Aqueles que a procuram não se afadigarão, pois que a encontrarão no mês {do seu cio}.
25 ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.
25 Toma cuidado que teu pé se não descalce e tua garganta não se resseque: Não vale a pena, dizes. Não! Amo os estrangeiros e quero segui-los.
26 ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
26 Assim como se embaraça o ladrão ao ser pego em flagrante, assim também serão confundidos os homens da casa de Israel, eles, seus reis e seus chefes, seus sacerdotes e profetas
27 ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
27 que dizem à madeira: Tu és meu pai, e à pedra: Foste tu que me geraste. Voltam-me as costas, e não o semblante. E depois exclamam, no dia da calamidade: Salvai-nos, Senhor.
28 ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
28 Onde estão os deuses que havias feito? Que se levantem, se podem salvar-te no dia da desgraça. Pois que tens tantos deuses quantas cidades, ó Judá.
29 ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರು ನನಗೆ ವಿರೋಧವಾಗಿ ದ್ರೋಹಮಾಡಿ ದ್ದೀರಿ ಎಂದು ಕರ್ತನು ಅನ್ನುತ್ತಾನೆ.
29 Por que discutis comigo? Vós todos me fostes infiéis - oráculo do Senhor.
30 ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
30 Em vão castiguei vossos filhos, nem deram atenção à reprimenda. A espada dizimou vossos profetas qual leão devastador.
31 ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
31 Que raça que sois! Considerai o que diz o Senhor: Tenho eu sido para Israel um deserto, ou terra envolta em trevas? Por que clama o meu povo: Eis que somos nossos senhores, e não voltaremos mais para vós?
32 ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
32 Esquece a jovem seus ornatos, ou a noiva seu cinto? Meu povo, porém, esqueceu-me, desde dias sem conta.
33 ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.
33 Bem sabes encontrar o caminho a fim de procurar o que amas! Assim foi que ensinaste a teus pés o caminho do crime.
34 ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
34 Até na orla de tua veste vê-se o sangue dos pobres inocentes, que, entretanto, não havias surpreendido em falta.
35 ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
35 E ainda dizes: Sou inocente; por isso afastou-se de mim a sua cólera. Eis, porém, que te vou processar, já que dizes: Não pequei!
36 ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.
36 Com que pressa mudas de caminho! Serás desiludida pelo Egito, como o foste pela Assíria.
37 ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
37 De lá sairás também com a cabeça entre as mãos, porquanto o Senhor repele aqueles em quem confias, e seu apoio não te trará bom êxito.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Jeremias 2, comparar traduções ou montar um estudo — tudo direto pelo WhatsApp.