Jeremias 33

Kannada Bible (GL_KANNADA) vs ARC

Sair da comparação
ARC Almeida Revista e Corrigida 2009
1 ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
1 E veio a palavra do Senhor a Jeremias, segunda vez, estando ele ainda encerrado no pátio da guarda, dizendo:
2 ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
2 Assim diz o Senhor que faz isto, o Senhor que forma isto, para o estabelecer ( o seu nome): é Senhor .
3 ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
3 Clama a mim, e responder-te-ei e anunciar-te-ei coisas grandes e firmes, que não sabes.
4 ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಈ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
4 Porque assim diz o Senhor , o Deus de Israel, sobre as casas desta cidade e sobre as casas dos reis de Judá, que foram derribadas com os trabucos e à espada.
5 ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
5 Eles entraram a pelejar contra os caldeus, mas para que os encha de cadáveres de homens, que feri na minha ira e no meu furor, porquanto escondi o rosto desta cidade, por causa de toda a sua maldade.
6 ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
6 Eis que eu farei vir sobre ela saúde e cura, e os sararei, e lhes manifestarei abundância de paz e de verdade.
7 ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
7 E removerei o cativeiro de Judá e o cativeiro de Israel e os edificarei como no princípio;
8 ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
8 e os purificarei de toda a sua maldade com que pecaram contra mim e perdoarei todas as suas iniquidades com que pecaram contra mim e com que transgrediram contra mim.
9 ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
9 E esta cidade me servirá de nome de alegria, de louvor e de glória, entre todas as nações da terra que ouvirem todo o bem que eu lhe faço; e espantar-se-ão e perturbar-se-ão por causa de todo o bem e por causa de toda a paz que eu lhe dou.
10 ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
10 Assim diz o Senhor : Neste lugar (de que vós dizeis que está deserto, sem homens nem animais), nas cidades de Judá e nas ruas de Jerusalém, que estão assoladas, sem homens, sem moradores e sem animais, ainda se ouvirá
11 ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
11 a voz de gozo, e a voz de alegria, e a voz de noivo, e a voz de esposa, e a voz dos que dizem: Louvai ao Senhor dos Exércitos, porque bom é o Senhor , porque a sua benignidade é para sempre; e a voz dos que trazem louvor à Casa do Senhor ; pois farei que torne o cativeiro da terra como no princípio, diz o Senhor .
12 ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
12 Assim diz o Senhor dos Exércitos: Ainda neste lugar que está deserto, sem homens e sem animais e em todas as suas cidades haverá uma morada de pastores que façam repousar o gado.
13 ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
13 Nas cidades das montanhas, e nas cidades das planícies, e nas cidades do Sul, e na terra de Benjamim, e nos contornos de Jerusalém, e nas cidades de Judá, ainda passará o gado pelas mãos dos contadores, diz o Senhor .
14 ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು.
14 Eis que vêm dias, diz o Senhor , em que cumprirei a palavra boa que falei à casa de Israel e à casa de Judá.
15 ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.
15 Naqueles dias e naquele tempo, farei que brote a Davi um Renovo de justiça, e ele fará juízo e justiça na terra.
16 ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
16 Naqueles dias, Judá será salvo, e Jerusalém habitará seguramente; e este é o nome que lhe chamarão: O Senhor É Nossa Justiça.
17 ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
17 Porque assim diz o Senhor : Nunca faltará a Davi varão que se assente sobre o trono da casa de Israel,
18 ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
18 nem aos sacerdotes levíticos faltará varão diante de mim, para que ofereça holocausto, e queime oferta de manjares, e faça sacrifício todos os dias.
19 ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
19 E veio a palavra do Senhor a Jeremias, dizendo:
20 ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
20 Assim diz o Senhor : Se puderdes invalidar o meu concerto do dia, e o meu concerto da noite, de tal modo que não haja dia e noite a seu tempo,
21 ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
21 também se poderá invalidar o meu concerto com Davi, meu servo, para que não tenha filho que reine no seu trono, como também com os levitas sacerdotes, meus ministros.
22 ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
22 Como não se pode contar o exército dos céus, nem medir-se a areia do mar, assim multiplicarei a descendência de Davi, meu servo, e os levitas que ministram diante de mim.
23 ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
23 E veio ainda a palavra do Senhor a Jeremias, dizendo:
24 ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
24 Não tens visto o que este povo fala, dizendo: As duas gerações que o Senhor elegeu, agora as rejeitou? E desprezam o meu povo, como se não fora já um povo diante deles.
25 ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--
25 Assim diz o Senhor : Se o meu concerto do dia e da noite não permanecer, e eu não puser as ordenanças dos céus e da terra,
26 ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
26 também rejeitarei a descendência de Jacó e de Davi, meu servo, de modo que não tome da sua semente quem domine sobre a semente de Abraão, Isaque e Jacó; porque removerei o seu cativeiro e apiedar-me-ei deles.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Jeremias 33, comparar traduções ou montar um estudo — tudo direto pelo WhatsApp.