Jeremias 4
Kannada Bible (GL_KANNADA) vs NVT
NVT Nova Versão Transformadora
1 ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ.
1 “Ó Israel”, diz o S enhor , “se quisesse, poderia voltar para mim. Poderia jogar fora seus ídolos detestáveis e nunca mais se desviar.
2 ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
2 Quando jurasse por meu nome e dissesse: ‘Tão certo como vive o S poderia fazê-lo em verdade, justiça e retidão. Então você seria uma bênção para as nações do mundo, e todos os povos viriam e louvariam meu nome.”
3 ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
3 Assim diz o S enhor ao povo de Judá e de Jerusalém: “Passem o arado na terra endurecida! Não desperdicem sementes entre os espinhos!
4 ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
4 Ó povo de Judá e habitantes de Jerusalém, removam os obstáculos de seu coração e mudem sua atitude perante o S Do contrário, por causa de seus pecados, minha ira arderá como fogo que ninguém pode apagar.
5 ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
5 “Anunciem em Judá e proclamem em Jerusalém! Mandem tocar a trombeta em toda a terra e avisem: ‘Reúnam-se! Corram para as cidades fortificadas!’.
6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.
6 Levantem a bandeira para advertir Sião: ‘Fujam agora mesmo! Não demorem!’. Pois, do norte, trago sobre vocês terrível destruição!”.
7 ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
7 Um leão saiu de seu abrigo, um destruidor de nações. Saiu de sua toca e se encaminha até vocês; ele devastará sua terra. Suas cidades serão arruinadas, e ninguém viverá nelas.
8 ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
8 Portanto, vistam roupas de luto, chorem e lamentem, pois a ira ardente do S ainda está sobre nós.
9 ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
9 “Naquele dia”, diz o S enhor , “os reis e os oficiais estremecerão de medo. Os sacerdotes ficarão horrorizados, e os profetas, espantados.”
10 ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
10 Então eu disse: “Ó Soberano S enhor , o povo foi enganado por aquilo que disseste, pois prometeste paz a Jerusalém, mas a espada está em nossa garganta!”.
11 ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
11 Naquele dia, o S enhor dirá ao povo de Jerusalém: “Meu povo querido, do deserto sopra um vento abrasador, e não uma brisa suave para separar a palha dos cereais.
12 ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
12 É uma rajada violenta, que eu enviei; agora pronunciarei sua sentença”.
13 ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
13 Os inimigos avançam sobre nós como nuvens de tempestade; seus carros de guerra são como vendavais, seus cavalos, mais velozes que águias. Que terrível será! Estamos perdidos!
14 ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
14 Ó Jerusalém, purifique seu coração, para que seja salva. Até quando abrigará pensamentos malignos?
15 ಒಂದು ಶಬ್ದವು ದಾನಿನಿಂದ ಪ್ರಕಟ ಮಾಡುತ್ತದೆ; ಎಫ್ರಾಯಾಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.
15 Sua destruição foi anunciada desde Dã até a região montanhosa de Efraim.
16 ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
16 “Avisem as nações ao redor e anunciem a Jerusalém: Os inimigos vêm de uma terra distante e dão gritos de guerra contra as cidades de Judá.
17 ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.
17 Cercam Jerusalém como guardas ao redor de um campo, pois meu povo se rebelou contra mim”, diz o S
18 ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
18 “Suas próprias ações trouxeram isso sobre vocês; é um castigo amargo, que atinge o seu coração!”
19 ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
19 Meu coração, meu coração! Estou me contorcendo de dor! Meu coração bate forte dentro de mim; não consigo me aquietar! Pois ouvi o som das trombetas dos inimigos e o rugido de seus gritos de guerra.
20 ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
20 Ondas de destruição cobrem a terra, até deixá-la inteiramente desolada. De repente, minhas tendas foram destruídas; meus abrigos foram derrubados num instante.
21 ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ?
21 Até quando terei de ver as bandeiras e ouvir o som das trombetas?
22 ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
22 “Meu povo é tolo e não me conhece”, diz o S “São crianças sem juízo, que não entendem coisa alguma. São astutos para fazer o mal, mas não têm ideia de como fazer o bem.”
23 ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
23 Olhei para a terra, e ela estava sem forma e vazia; olhei para os céus, e não havia luz alguma.
24 ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
24 Olhei para os montes e para as colinas, e eles estremeciam e balançavam.
25 ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.
25 Olhei, e todo o povo tinha desaparecido; as aves do céu voaram para longe.
26 ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
26 Olhei, e os campos férteis haviam se transformado em deserto; as cidades estavam em ruínas, por causa da ira ardente do S
27 ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
27 Assim diz o S enhor : “Toda a terra será devastada, mas não a destruirei por completo.
28 ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
28 A terra lamentará e os céus escurecerão, por causa de meu decreto contra meu povo; estou decidido e não voltarei atrás”.
29 ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
29 Ao som de cavaleiros e arqueiros, os habitantes da cidade fogem. Escondem-se entre os arbustos e correm para os montes. Todas as cidades foram abandonadas; não resta uma pessoa sequer!
30 ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
30 O que você está fazendo, cidade devastada? Por que se veste com belas roupas e põe joias de ouro? Por que pinta os olhos? De nada adiantará enfeitar-se toda! Seus aliados, que eram seus amantes, a desprezam e tentam matá-la.
31 ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
31 Ouço gritos, como os da mulher em trabalho de parto, gemidos de quem dá à luz o primeiro filho. É a bela Sião, “Socorro, estão me matando!”.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Jeremias 4, comparar traduções ou montar um estudo — tudo direto pelo WhatsApp.