Jeremias 5
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
1 Dai voltas às ruas de Jerusalém, e vede agora, e informai-vos, e buscai pelas suas praças a ver se podeis achar um homem, se há alguém que pratique a justiça, que busque a verdade; e eu lhe perdoarei a ela.
2 ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
2 E ainda que digam: Vive o Senhor; de certo falsamente juram.
3 ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
3 Ó Senhor, acaso não atentam os teus olhos para a verdade? feriste-os, porém não lhes doeu; consumiste-os, porém recusaram receber a correção; endureceram as suas faces mais do que uma rocha; recusaram-se a voltar.
4 ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು.
4 Então disse eu: Deveras eles são uns pobres; são insensatos, pois não sabem o caminho do Senhor, nem a justiça do seu Deus.
5 ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
5 Irei aos grandes, e falarei com eles; porque eles sabem o caminho do Senhor, e a justiça do seu Deus; mas aqueles de comum acordo quebraram o jugo, e romperam as ataduras.
6 ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
6 Por isso um leão do bosque os matará, um lobo dos desertos os destruirá; um leopardo vigia contra as suas cidades; todo aquele que delas sair será despedaçado; porque são muitas as suas transgressões, e multiplicadas as suas apostasias.
7 ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.
7 Como poderei perdoar-te? pois teus filhos me abandonaram a mim, e juraram pelos que não são deuses; quando eu os tinha fartado, adulteraram, e em casa de meretrizes se ajuntaram em bandos.
8 ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ.
8 Como cavalos de lançamento bem nutridos, andavam rinchando cada um à mulher do seu próximo.
9 ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
9 Acaso não hei de castigá-los por causa destas coisas? diz o Senhor; ou não hei de vingar-me de uma nação como esta?
10 ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
10 Subi aos seus muros, e destruí-os; não façais, porém, uma destruição final; tirai os seus ramos; porque não são do Senhor.
11 ಇಸ್ರಾಯೇಲ್ಯನ ಮನೆತನದವರೂ ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾ ರೆಂದು ಕರ್ತನು ಅನ್ನುತ್ತಾನೆ.
11 Porque aleivosissimamente se houveram contra mim a casa de Israel e a casa de Judá, diz o Senhor.
12 ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
12 Negaram ao Senhor, e disseram: Não é ele; nenhum mal nos sobrevirá; nem veremos espada nem fome.
13 ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
13 E até os profetas se farão como vento, e a palavra não está com eles; assim se lhes fará.
14 ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
14 Portanto assim diz o Senhor, o Deus dos exércitos: Porquanto proferis tal palavra, eis que converterei em fogo as minhas palavras na tua boca, e este povo em lenha, de modo que o fogo o consumirá.
15 ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
15 Eis que trago sobre vós uma nação de longe, ó casa de Israel, diz o Senhor; é uma nação durável, uma nação antiga, uma nação cuja língua ignoras, e não entenderás o que ela falar.
16 ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ.
16 A sua aljava é como uma sepultura aberta; todos eles são valentes.
17 ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
17 E comerão a tua sega e o teu pão, que teus filhos e tuas filhas haviam de comer; comerão os teus rebanhos e o teu gado; comerão a tua vide e a tua figueira; as tuas cidades fortificadas, em que confias, abatê-las-ão à espada.
18 ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
18 Contudo, ainda naqueles dias, diz o Senhor, não farei de vós uma destruição final.
19 ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
19 E quando disserdes: Por que nos fez o Senhor nosso Deus todas estas coisas? então lhes dirás: Como vós me deixastes, e servistes deuses estranhos na vossa terra, assim servireis estrangeiros, em terra que não e vossa.
20 ಯಾಕೋಬನ ಮನೆತನದಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ, ಏನಂದರೆ
20 Anunciai isto na casa de Jacó, e proclamai-o em Judá, dizendo:
21 ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
21 Ouvi agora isto, ó povo insensato e sem entendimento, que tendes olhos e não vedes, que tendes ouvidos e não ouvis:
22 ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
22 Não me temeis a mim? diz o Senhor; não tremeis diante de mim, que pus a areia por limite ao mar, por ordenança eterna, que ele não pode passar? Ainda que se levantem as suas ondas, não podem prevalecer; ainda que bramem, não a podem traspassar.
23 ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು; ಅವರು ತಿರುಗಿ ಬಿದ್ದು ಹೋಗಿಬಿಟ್ಟಿದ್ದಾರೆ.
23 Mas este povo é de coração obstinado e rebelde; rebelaram-se e foram-se.
24 ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
24 E não dizem no seu coração: Temamos agora ao Senhor nosso Deus, que dá chuva, tanto a temporã como a tardia, a seu tempo, e nos conserva as semanas determinadas da sega.
25 ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಅವೆ; ನಿಮ್ಮ ಪಾಪ ಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಳೆದಿವೆ.
25 As vossas iniqüidades desviaram estas coisas, e os vossos pecados apartaram de vos o bem.
26 ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
26 Porque ímpios se acham entre o meu povo; andam espiando, como espreitam os passarinheiros. Armam laços, apanham os homens.
27 ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;
27 Qual gaiola cheia de pássaros, assim as suas casas estão cheias de dolo; por isso se engrandeceram, e enriqueceram.
28 ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
28 Engordaram-se, estão nédios; também excedem o limite da maldade; não julgam com justiça a causa dos órfãos, para que prospere, nem defendem o direito dos necessitados.
29 ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
29 Acaso não hei de trazer o castigo por causa destas coisas? diz o senhor; ou não hei de vingar-me de uma nação como esta?
30 ಆಶ್ಚರ್ಯವೂ ಭಯಂಕರವೂ ಆದ ಕಾರ್ಯವು ದೇಶದಲ್ಲಿ ನಡೆಯು ತ್ತದೆ,
30 Coisa espantosa e horrenda tem-se feito na terra:
31 ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
31 os profetas profetizam falsamente, e os sacerdotes dominam por intermédio deles; e o meu povo assim o deseja. Mas que fareis no fim disso?
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Jeremias 5, comparar traduções ou montar um estudo — tudo direto pelo WhatsApp.