Jeremias 7

Kannada Bible (GL_KANNADA) vs ARIB

Sair da comparação
ARIB Almeida Revisada Imprensa Bíblica
1 ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--
1 A palavra que da parte do Senhor veio a Jeremias, dizendo:
2 ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
2 Põe-te à porta da casa do Senhor, e proclama ali esta palavra, e dize: Ouvi a palavra do Senhor, todos de Judá, os que entrais por estas portas, para adorardes ao Senhor.
3 ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
3 Assim diz o Senhor dos exércitos, o Deus de Israel: Emendai os vossos caminhos e as vossas obras, e vos farei habitar neste lugar.
4 ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
4 Não vos fieis em palavras falsas, dizendo: Templo do Senhor, templo do Senhor, templo do Senhor são estes.
5 ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
5 Mas, se deveras emendardes os vossos caminhos e as vossas obras; se deveras executardes a justiça entre um homem e o seu próximo;
6 ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
6 se não oprimirdes o estrangeiro, e o órfão, e a viúva, nem derramardes sangue inocente neste lugar, nem andardes após outros deuses para vosso próprio mal,
7 ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
7 então eu vos farei habitar neste lugar, na terra que dei a vossos pais desde os tempos antigos e para sempre.
8 ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
8 Eis que vós confiais em palavras falsas, que para nada são proveitosas.
9 ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
9 Furtareis vós, e matareis, e cometereis adultério, e jurareis falsamente, e queimareis incenso a Baal, e andareis após outros deuses que não conhecestes,
10 ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
10 e então vireis, e vos apresentareis diante de mim nesta casa, que se chama pelo meu nome, e direis: Somos livres para praticardes ainda todas essas abominações?
11 ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
11 Tornou-se, pois, esta casa, que se chama pelo meu nome, uma caverna de salteadores aos vossos olhos? Eis que eu, eu mesmo, vi isso, diz o Senhor.
12 ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
12 Mas ide agora ao meu lugar, que estava em Siló, onde, ao princípio, fiz habitar o meu nome, e vede o que lhe fiz, por causa da maldade do meu povo Israel.
13 ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
13 Agora, pois, porquanto fizestes todas estas obras, diz o Senhor, e quando eu vos falei insistentemente, vós não ouvistes, e quando vos chamei, não respondestes,
14 ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
14 farei também a esta casa, que se chama pelo meu nome, na qual confiais, e a este lugar, que vos dei a vós e a vossos pais, como fiz a Siló.
15 ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
15 E eu vos lançarei da minha presença, como lancei todos os vossos irmãos, toda a linhagem de Efraim.
16 ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
16 Tu, pois, não ores por este povo, nem levantes por ele clamor ou oração, nem me importunes; pois eu não te ouvirei.
17 ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ
17 Não vês tu o que eles andam fazendo nas cidades de Judá, e nas ruas de Jerusalém?
18 ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
18 Os filhos apanham a lenha, e os pais acendem o fogo, e as mulheres amassam a farinha para fazerem bolos à rainha do céu, e oferecem libações a outros deuses, a fim de me provocarem à ira.
19 ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
19 Acaso é a mim que eles provocam à ira? diz o Senhor; não se provocam a si mesmos, para a sua própria confusão?
20 ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
20 Portanto assim diz o Senhor Deus: Eis que a minha ira e o meu furor se derramarão sobre este lugar, sobre os homens e sobre os animais, sobre as árvores do campo e sobre os frutos da terra; sim, acender-se-á, e não se apagará.
21 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
21 Assim diz o Senhor dos exércitos, o Deus de Israel: Ajuntai os vossos holocaustos aos vossos sacrifícios, e comei a carne.
22 ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
22 Pois não falei a vossos pais no dia em que os tirei da terra do Egito, nem lhes ordenei coisa alguma acerca de holocaustos ou sacrifícios.
23 ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
23 Mas isto lhes ordenei: Dai ouvidos à minha voz, e eu serei o vosso Deus, e vós sereis o meu povo; andai em todo o caminho que eu vos mandar, para que vos vá bem.
24 ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
24 Mas não ouviram, nem inclinaram os seus ouvidos; porém andaram nos seus próprios conselhos, no propósito do seu coração malvado; e andaram para trás, e não para diante.
25 ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.
25 Desde o dia em que vossos pais saíram da terra do Egito, até hoje, tenho-vos enviado insistentemente todos os meus servos, os profetas, dia após dia;
26 ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
26 contudo não me deram ouvidos, nem inclinaram os seus ouvidos, mas endureceram a sua cerviz. Fizeram pior do que seus pais.
27 ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.
27 Dir-lhes-ás pois todas estas palavras, mas não te darão ouvidos; chamá-los-ás, mas não te responderão.
28 ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
28 E lhes dirás: Esta é a nação que não obedeceu a voz do Senhor seu Deus e não aceitou a correção; já pereceu a verdade, e está exterminada da sua boca.
29 ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
29 Corta os teus cabelos, Jerusalém, e lança-os fora, e levanta um pranto sobre os altos escalvados; porque o Senhor já rejeitou e desamparou esta geração, objeto do seu furor.
30 ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
30 Porque os filhos de Judá fizeram o que era mau aos meus olhos, diz o Senhor; puseram as suas abominações na casa que se chama pelo meu nome, para a contaminarem.
31 ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
31 E edificaram os altos de Tofete, que está no Vale do filho de Hinom, para queimarem no fogo a seus filhos e a suas filhas, o que nunca ordenei, nem me veio à mente.
32 ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
32 Portanto, eis que vêm os dias, diz o Senhor, em que não se chamará mais Tofete, nem Vale do filho de Hinom, mas o Vale da Matança; pois enterrarão em Tofete, por não haver mais outro lugar.
33 ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
33 E os cadáveres deste povo servirão de pasto às aves do céu e aos animais da terra; e ninguém os enxotará.
34 ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
34 E farei cessar nas cidades de Judá, e nas ruas de Jerusalém, a voz de gozo e a voz de alegria, a voz de noivo e a voz de noiva; porque a terra se tornará em desolação.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Jeremias 7, comparar traduções ou montar um estudo — tudo direto pelo WhatsApp.