Jeremias 9
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
1 Oxalá a minha cabeça se tornasse em águas, e os meus olhos numa fonte de lágrimas, para que eu chorasse de dia e de noite os mortos da filha do meu povo!
2 ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
2 Oxalá que eu tivesse no deserto uma estalagem de viandantes, para poder deixar o meu povo, e me apartar dele! porque todos eles são adúlteros, um bando de aleivosos.
3 ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
3 E encurvam a língua, como se fosse o seu arco, para a mentira; fortalecem-se na terra, mas não para a verdade; porque avançam de malícia em malícia, e a mim me não conhecem, diz o Senhor.
4 ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
4 Guardai-vos cada um do seu próximo, e de irmão nenhum vos fieis; porque todo irmão não faz mais do que enganar, e todo próximo anda caluniando.
5 ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ.
5 E engana cada um a seu próximo, e nunca fala a verdade; ensinaram a sua língua a falar a mentira; andam-se cansando em praticar a iniqüidade.
6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
6 A tua habitação está no meio do engano; pelo engano recusam-se a conhecer-me, diz o Senhor.
7 ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
7 Portanto assim diz o Senhor dos exércitos: Eis que eu os fundirei e os provarei; pois, de que outra maneira poderia proceder com a filha do meu povo?
8 ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
8 uma flecha mortífera é a língua deles; fala engano; com a sua boca fala cada um de paz com o seu próximo, mas no coração arma-lhe ciladas.
9 ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
9 Não hei de castigá-los por estas coisas? diz o Senhor; ou não me vingarei de uma nação tal como esta?
10 ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
10 Pelos montes levantai choro e pranto, e pelas pastagens do deserto lamentação; porque já estão queimadas, de modo que ninguém passa por elas; nem se ouve mugido de gado; desde as aves dos céus até os animais, fugiram e se foram.
11 ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
11 E farei de Jerusalém montões de pedras, morada de chacais, e das cidades de Judá farei uma desolação, de sorte que fiquem sem habitantes.
12 ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
12 Quem é o homem sábio, que entenda isto? e a quem falou a boca do Senhor, para que o possa anunciar? Por que razão pereceu a terra, e se queimou como um deserto, de sorte que ninguém passa por ela?
13 ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
13 E diz o Senhor: porque deixaram a minha lei, que lhes pus diante, e não deram ouvidos à minha voz, nem andaram nela,
14 ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
14 antes andaram obstinadamente segundo o seu próprio coração, e após baalins, como lhes ensinaram os seus pais.
15 ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.
15 Portanto assim diz o Senhor dos exércitos, Deus de Israel: Eis que darei de comer losna a este povo, e lhe darei a beber água de fel.
16 ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
16 Também os espalharei por entre nações que nem eles nem seus pais conheceram; e mandarei a espada após eles, até que venha a consumi-los.
17 ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
17 Assim diz o Senhor dos exércitos: Considerai, e chamai as carpideiras, para que venham; e mandai procurar mulheres hábeis, para que venham também;
18 ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
18 e se apressem, e levantem o seu lamento sobre nós, para que se desfaçam em lágrimas os nossos olhos, e as nossas pálpebras destilem águas.
19 ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
19 Porque uma voz de pranto se ouviu de Sião: Como estamos arruinados! Estamos mui envergonhados, por termos deixado a terra, e por terem eles transtornado as nossas moradas.
20 ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
20 Contudo ouvi, vós, mulheres, a palavra do Senhor, e recebam os vossos ouvidos a palavra da sua boca; e ensinai a vossas filhas o pranto, e cada uma à sua vizinha a lamentação.
21 ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
21 Pois a morte subiu pelas nossas janelas, e entrou em nossos palácios, para exterminar das ruas as crianças, e das praças os mancebos.
22 ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
22 Fala: Assim diz o Senhor: Até os cadáveres dos homens cairão como esterco sobre a face do campo, e como gavela atrás do segador, e não há quem a recolha.
23 ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
23 Assim diz o Senhor: Não se glorie o sábio na sua sabedoria, nem se glorie o forte na sua força; não se glorie o rico nas suas riquezas;
24 ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
24 mas o que se gloriar, glorie-se nisto: em entender, e em me conhecer, que eu sou o Senhor, que faço benevolência, juízo e justiça na terra; porque destas coisas me agrado, diz o Senhor.
25 ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂ
25 Eis que vêm dias, diz o Senhor, em que castigarei a todo circuncidado pela sua incircuncisão:
26 ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
26 ao Egito, a Judá e a Edom, aos filhos de Amom e a Moabe, e a todos os que cortam os cantos da sua cabeleira e habitam no deserto; pois todas as nações são incircuncisas, e toda a casa de Israel é incircuncisa de coração.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Jeremias 9, comparar traduções ou montar um estudo — tudo direto pelo WhatsApp.