Josué 14
Kannada Bible (GL_KANNADA) vs NVI
NVI Nova Versão Internacional
1 ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.
1 Foram estas as terras que os israelitas receberam por herança em Canaã, e que o sacerdote Eleazar, Josué, filho de Num, e os chefes dos clãs das tribos dos israelitas repartiram entre eles.
2 ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
2 A divisão da herança foi decidida por sorteio entre as nove tribos e meia, como o Senhor tinha ordenado por meio de Moisés,
3 ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
3 pois Moisés já tinha dado herança às duas tribos e meia a leste do Jordão. Mas aos levitas não dera herança entre os demais.
4 ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
4 Os filhos de José formaram as duas tribos de Manassés e Efraim. Os levitas não receberam porção alguma da terra; receberam apenas cidades onde viver, com pastagens para os seus rebanhos.
5 ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.
5 Os israelitas dividiram a terra conforme o Senhor tinha ordenado a Moisés.
6 ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
6 Os homens de Judá vieram a Josué em Gilgal, e Calebe, filho do quenezeu Jefoné, lhe disse: "Você sabe o que o Senhor disse a Moisés, homem de Deus, em Cades-Barnéia, sobre mim e sobre você.
7 ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.
7 Eu tinha quarenta anos quando Moisés, servo do Senhor, enviou-me de Cades-Barnéia para espionar a terra. Eu lhe dei um relatório digno de confiança,
8 ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
8 mas os meus irmãos israelitas que foram comigo fizeram o povo desanimar-se de medo. Eu, porém, fui inteiramente fiel ao Senhor, ao meu Deus.
9 ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
9 Por isso naquele dia Moisés me jurou: ‘Certamente a terra em que você pisou será uma herança perpétua para você e para os seus descendentes, porquanto você foi inteiramente fiel ao Senhor, ao meu Deus’.
10 ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.
10 "Pois bem, o Senhor manteve-me vivo, como prometeu. E foi há quarenta e cinco anos que ele disse isso a Moisés, quando Israel caminhava pelo deserto. Por isso aqui estou hoje, com oitenta e cinco anos de idade!
11 ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.
11 Ainda estou tão forte como no dia em que Moisés me enviou; tenho agora tanto vigor para ir à guerra como naquela época.
12 ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.
12 Dê-me, pois, a região montanhosa que naquela ocasião o Senhor me prometeu. Na época, você ficou sabendo que os enaquins lá viviam com suas cidades grandes e fortificadas; mas, se o Senhor estiver comigo, eu os expulsarei de lá, como ele prometeu".
13 ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
13 Então Josué abençoou Calebe, filho de Jefoné, e lhe deu Hebrom por herança.
14 ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.
14 Por isso, até hoje, Hebrom pertence aos descendentes de Calebe, filho do quenezeu Jefoné, pois ele foi inteiramente fiel ao Senhor, ao Deus de Israel.
15 ಹೆಬ್ರೋನಿನ ಹೆಸರು ಮೊದಲು ಕಿರ್ಯತ್‌ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
15 Hebrom era chamada Quiriate-Arba, em homenagem a Arba, o maior dos enaquins. E a terra teve descanso da guerra.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Josué 14, comparar traduções ou montar um estudo — tudo direto pelo WhatsApp.