Juízes 2

Kannada Bible (GL_KANNADA) vs NVI

Sair da comparação
NVI Nova Versão Internacional
1 ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
1 O anjo do Senhor subiu de Gilgal a Boquim e disse: "Tirei vocês do Egito e os trouxe para a terra que prometi com juramento que daria a seus antepassados. Eu disse: Jamais quebrarei a minha aliança com vocês.
2 ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
2 E vocês não farão acordo com o povo desta terra, mas demolirão os altares deles. Por quê vocês não me obedeceram?
3 ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
3 Portanto, agora lhes digo que não os expulsarei da presença de vocês; eles serão seus adversários, e os deuses deles serão uma armadilha para vocês".
4 ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
4 Quando o anjo do Senhor acabou de falar a todos os israelitas, o povo chorou em alta voz,
5 ಆ ಸ್ಥಳಕ್ಕೆ ಬೋಕೀಮ್‌ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
5 e ao lugar chamaram Boquim. Ali ofereceram sacrifícios ao Senhor.
6 ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್‌ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.
6 Depois que Josué despediu os israelitas, eles saíram para ocupar a terra, cada um a sua herança.
7 ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
7 O povo prestou culto ao Senhor durante toda a vida de Josué e dos líderes que continuaram vivos depois de Josué e que tinham visto todos os grandes feitos que o Senhor realizara em favor de Israel.
8 ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.
8 Josué, filho de Num, servo do Senhor, morreu com a idade de cento e dez anos.
9 ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್‌ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್‌ಹೆರೆಸ್‌ನಲ್ಲಿ ಹೂಣಿಟ್ಟರು.
9 Foi sepultado na terra de sua herança, em Timnate-Heres, nos montes de Efraim, ao norte do monte Gaás.
10 ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
10 Depois que toda aquela geração foi reunida a seus antepassados, surgiu uma nova geração que não conhecia o Senhor e o que ele havia feito por Israel.
11 ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
11 Então os israelitas fizeram o que o Senhor reprova e prestaram culto aos baalins.
12 ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
12 Abandonaram o Senhor, o Deus dos seus antepassados, que os havia tirado do Egito, e seguiram e adoraram vários deuses dos povos ao seu redor, provocando a ira do Senhor.
13 ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
13 Abandonaram o Senhor e prestaram culto a Baal e aos postes sagrados.
14 ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
14 A ira do Senhor se acendeu contra Israel, e ele os entregou nas mãos de invasores que os saquearam. Ele os entregou aos inimigos ao seu redor, aos quais já não conseguiam resistir.
15 ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.
15 Sempre que os israelitas saíam para a batalha, a mão do Senhor era contra eles para derrotá-los, conforme lhes havia advertido e jurado. Grande angústia os dominava.
16 ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
16 Então o Senhor levantou juízes, que os libertaram das mãos daqueles que os atacavam.
17 ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.
17 Mesmo assim eles não quiseram ouvir os juízes, antes se prostituíram com outros deuses e os adoraram. Ao contrário dos seus antepassados, logo se desviaram do caminho pelo qual os seus antepassados tinham andado, o caminho da obediência aos mandamentos do Senhor.
18 ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
18 Sempre que o Senhor lhes levantava um juiz, ele estava com o juiz e os salvava das mãos de seus inimigos enquanto o juiz vivia; pois o Senhor tinha misericórdia por causa dos gemidos deles diante daqueles que os oprimiam e os afligiam.
19 ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.
19 Mas, quando o juiz morria, o povo voltava a caminhos ainda piores do que os caminhos dos seus antepassados, seguindo outros deuses, prestando-lhes culto e adorando-os. Recusavam-se a abandonar suas práticas e seu caminho obstinado.
20 ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
20 Por isso a ira do Senhor acendeu-se contra Israel, e ele disse: "Como este povo violou a aliança que fiz com os seus antepassados e não tem ouvido a minha voz,
21 ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ
21 não expulsarei de diante deles nenhuma das nações que Josué deixou quando morreu.
22 ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.
22 Eu as usarei para pôr Israel à prova e ver se guardarão o caminho do Senhor e se andarão nele como o fizeram os seus antepassados".
23 ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
23 O Senhor havia permitido que essas nações permanecessem; não as expulsou de imediato, e não as entregou nas mãos de Josué.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Juízes 2, comparar traduções ou montar um estudo — tudo direto pelo WhatsApp.