Juízes 6
Kannada Bible (GL_KANNADA) vs VC
VC Versão Católica
1 ಆದರೆ ಇಸ್ರಾಯೇಲ್ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು.
1 Os israelitas fizeram o mal aos olhos do Senhor, e o Senhor entregou-os nas mãos dos madianitas durante sete anos.
2 ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
2 A mão de Madiã pesou rudemente contra Israel. Por medo dos madianitas, os filhos de Israel refugiaram-se nas cavernas das montanhas, em cavernas e fortificações.
3 ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
3 Quando Israel semeava, subia Madiã com Amalec e os filhos do oriente para atacá-lo.
4 ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ.
4 Acampavam defronte deles e devastavam as suas plantações até a vizinhança de Gaza, e não deixavam aos israelitas provisão alguma, nem ovelhas, nem bois, nem jumentos.
5 ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
5 Subiam com todos os seus rebanhos e tendas, semelhantes a uma nuvem de gafanhotos, e essa multidão inumerável de homens e camelos subia e devastava a terra.
6 ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
6 Os israelitas ficaram desse modo extenuados pelos madianitas, e clamaram ao Senhor.
7 ಇಸ್ರಾಯೇಲ್ಯರು ಮಿದ್ಯಾನ್ಯರ ನಿಮಿತ್ತ ಕರ್ತನಿಗೆ ಕೂಗಿದಾಗ
7 E, tendo eles clamado ao Senhor, pedindo socorro contra os madianitas, o Senhor mandou-lhes um profeta,
8 ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು.
8 que lhes disse: Eis o oráculo do Senhor, Deus de Israel: eu vos fiz sair do Egito e vos tirei da servidão;
9 ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು.
9 livrei-vos da mão dos egípcios e de vossos opressores; expulsei-os de diante de vós e dei-vos a sua terra.
10 ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
10 E disse-vos: eu sou o Senhor, vosso Deus: não adorareis os deuses dos amorreus, em cuja terra ides habitar. Mas não ouvistes a minha voz.
11 ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
11 Depois veio o anjo do Senhor e sentou-se debaixo do terebinto de Efra, que pertencia a Joás, da família de Abieser. Gedeão, seu filho, estava limpando o trigo no lagar, para escondê-lo dos madianitas.
12 ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
12 O anjo do Senhor apareceu-lhe e disse-lhe: O Senhor está contigo, valente guerreiro!
13 ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
13 Gedeão respondeu: Ah, meu senhor, se o Senhor está conosco, por que nos vieram todos esses males? Onde estão aqueles prodígios que nos contaram nossos pais, dizendo: o Senhor fez-nos verdadeiramente sair do Egito? Agora o Senhor abandonou-nos e entregou-nos nas mãos dos madianitas.
14 ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.
14 Então o Senhor, voltando-se para ele: Vai, disse, com essa força que tens e livra Israel dos madianitas. Porventura não sou eu que te envio?
15 ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.
15 Ó Senhor, respondeu Gedeão, com que livrarei eu Israel? Minha família é a última de Manassés, e eu sou o menor na casa de meu pai.
16 ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
16 O Senhor replicou: Eu estarei contigo e tu derrotarás os madianitas como se fossem um só homem.
17 ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
17 Prosseguiu Gedeão: Se encontrei graça aos vossos olhos, provai-me por um sinal que sois vós quem me falais.
18 ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು.
18 Não vos afasteis daqui até que eu volte trazendo uma oferta, e a ponha diante de vós. Esperarei, respondeu o Senhor, até que voltes.
19 ಆಗ ಗಿದ್ಯೋನನು ಒಳಗೆ ಹೋಗಿ ಒಂದು ಮೇಕೆಯ ಮರಿಯನ್ನೂ ಒಂದು ಏಫಾದ ಹಿಟ್ಟಿನಲ್ಲಿ ಹುಳಿ ಇಲ್ಲದ ರೊಟ್ಟಿಯನ್ನೂ ಸಿದ್ಧಮಾಡಿ ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು ರಸವನ್ನು ಪಾತ್ರೆಯಲ್ಲಿ ಹೊಯಿದು ಅದನ್ನು ಹೊರಗೆ ಮರದ ಕೆಳಗೆ ಇದ್ದ ಆತನ ಬಳಿ ಯಲ್ಲಿ ತಂದಿಟ್ಟನು.
19 Gedeão entrou em sua casa, preparou um cabrito e fez pães sem fermento com um efá de farinha. Pôs a carne num cesto e o caldo numa panela, levou tudo debaixo do terebinto e ofereceu-lho.
20 ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು.
20 O anjo do Senhor disse-lhe: Toma a carne e os pães sem fermento, põe-nos sobre aquela pedra e derrama por cima o caldo. Ele assim o fez.
21 ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
21 Então o anjo do Senhor estendeu a ponta da vara que tinha na mão, tocou a carne com os pães sem fermento, e imediatamente jorrou fogo da rocha que consumiu a carne e os pães sem fermento; e o anjo do Senhor desapareceu de seus olhos.
22 ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.
22 Gedeão reconheceu que era o anjo do Senhor e exclamou: Ai de mim, Senhor Javé, que vi o anjo do Senhor face a face.
23 ಆದರೆ ಕರ್ತನು ಅವನಿಗೆ--ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವದಿಲ್ಲ ಅಂದನು.
23 O Senhor disse-lhe: Tranqüiliza-te; não temas, não morrerás.
24 ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
24 Gedeão edificou ali um altar ao Senhor e chamou-o Javé-Chalom. Esse altar existe ainda hoje em Efra de Abieser.
25 ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ--ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೇದಾದ ಏಳು ವರುಷದ ಎರಡನೇ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಸವಿಾಪದಲ್ಲಿರುವ ತೋಪನ್ನು ಕಡಿದು ಹಾಕಿ
25 Durante a noite disse-lhe o Senhor: Toma o novilho de teu pai e um segundo touro de sete anos; destrói o altar de Baal de teu pai e faze o mesmo com o ídolo de madeira que está junto dele.
26 ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.
26 Edificarás então um altar ao Senhor, teu Deus, em cima dessa pedra, depois de a teres preparado. Tomarás o segundo touro e o oferecerás em holocausto usando a madeira do ídolo que tiveres cortado.
27 ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು ಕರ್ತನು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಹಗಲಲ್ಲಿ ಮಾಡದ ಹಾಗೆ ಅವನು ತನ್ನ ತಂದೆಯ ಮನೆಯವರಿಗೂ ಆ ಊರಿನ ಮನುಷ್ಯರಿಗೂ ಭಯಪಟ್ಟಿದ್ದರಿಂದ ರಾತ್ರಿಯಲ್ಲಿ ಮಾಡಿ ದನು.
27 Gedeão escolheu dez dos seus servos e fez o que o Senhor lhe tinha ordenado. Temendo, porém, a família de seu pai e os habitantes da cidade, não o quis fazer durante o dia; executou tudo durante a noite.
28 ಆ ಊರಿನ ಮನುಷ್ಯರು ಉದಯದಲ್ಲಿ ಎದ್ದಾಗ ಇಗೋ, ಬಾಳನ ಬಲಿಪೀಠವು ಕೆಡವಲ್ಪಟ್ಟಿತ್ತು. ಅದರ ಸವಿಾಪದಲ್ಲಿದ್ದ ತೋಪು ಕಡಿಯಲ್ಪಟ್ಟಿತ್ತು. ಕಟ್ಟಲ್ಪಟ್ಟ ಬಲಿಪೀಠದ ಮೇಲೆ ಆ ಎರಡನೇ ಹೋರಿ ಬಲಿ ಅರ್ಪಿಸಲ್ಪಟ್ಟಿತ್ತು.
28 Chegada a manhã, quando os habitantes da cidade se levantaram, eis que viram o altar de Baal derrubado por terra, o ídolo vizinho cortado, e o segundo touro queimado em holocausto sobre o novo altar.
29 ಆಗ ಅವರು ಒಬ್ಬರಿಗೊ ಬ್ಬರು--ಈ ಕಾರ್ಯವನ್ನು ಮಾಡಿದವನಾರು ಅಂದರು. ಅವರು ವಿಚಾರಿಸಿ ಕೇಳಿದಾಗ ಅವರು--ಯೋವಾಷನ ಮಗನಾದ ಗಿದ್ಯೋನನು ಈ ಕಾರ್ಯ ಮಾಡಿದನು ಅಂದರು.
29 Quem fez isto?, perguntaram uns aos outros. Depois de haverem buscado e investigado cuidadosamente, foi-lhes dito: Foi Gedeão, filho de Joás.
30 ಆ ಊರಿನವರು ಯೋವಾಷನಿಗೆ--ನಿನ್ನ ಮಗನನ್ನು ಹೊರಗೆ ತಕ್ಕೊಂಡು ಬಾ; ಅವನು ಸಾಯಬೇಕು. ಯಾಕಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ತೋಪನ್ನು ಕಡಿದು ಹಾಕಿದನು ಅಂದರು.
30 Disseram então a Joás: Faze vir aqui o teu filho, para que seja morto, porque ele derrubou o altar de Baal e cortou o ídolo de madeira que estava perto!
31 ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ--ನೀವು ಬಾಳನಿ ಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸು ವಿರೋ? ಅವನಿಗಾಗಿ ವ್ಯಾಜ್ಯಮಾಡುವವನು ಈ ಉದಯ ಕಾಲದಲ್ಲೇ ಕೊಲ್ಲಲ್ಪಡಲಿ; ಅವನು ದೇವರಾ ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟಿದ್ದಾನೆಂದು ತನಗೋಸ್ಕರ ವ್ಯಾಜ್ಯವಾಡಲಿ ಅಂದನು.
31 Joás respondeu a todos os que o interpelavam: Porventura sois vós que deveis tomar o partido de Baal? Sois vós que deveis socorrê-lo? Pois aquele que tomar o partido de Baal será morto hoje mesmo. Se Baal é deus, que defenda ele mesmo a sua causa, pois derrubaram o seu altar!
32 ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.
32 Daquele dia em diante, Gedeão foi chamado Jerobaal, dizendo: Que Baal defenda a sua causa contra ele, pois ele derrubou o seu altar!
33 ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
33 Todos os madianitas, os amalecitas e os filhos do oriente se tinham coligado e, tendo passado o Jordão, acamparam no vale de Jezrael.
34 ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
34 O Espírito do Senhor apoderou-se de Gedeão, o qual, tocando a trombeta, convocou os filhos de Abieser para que o seguissem.
35 ಮನಸ್ಸೆಯವರೆಲ್ಲರಿಗೂ ದೂತರನ್ನು ಕಳುಹಿಸಿದಾಗ ಅವರು ಅವರ ಹಿಂದೆ ಕೂಡಿಬಂದರು. ಆಶೇರಲ್ಲಿಯೂ ಜೆಬುಲೂನಿನಲ್ಲಿಯೂ ನಫ್ತಾಲಿಯಲ್ಲಿಯೂ ದೂತರನ್ನು ಕಳುಹಿಸಿದಾಗ ಅವರು ಇವರಿಗೆ ಎದುರಾಗಿ ಬಂದರು.
35 Enviou mensageiros por toda a tribo de Manassés, que se reuniu para segui-lo; e enviou também mensageiros às tribos de Aser, de Zabulon e de Neftali, e todos vieram juntar-se a ele.
36 ಗಿದ್ಯೋನನು ದೇವರಿಗೆ--ನೀನು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸು ವಿಯಾದರೆ
36 Gedeão disse a Deus: Se quereis realmente salvar Israel por meio de minha mão, como o dissestes,
37 ಇಗೋ, ಉಣ್ಣೆಯ ಗುಜ್ಜನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ ನೀನು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ರಕ್ಷಿಸುವಿ ಎಂಬದನ್ನು ನಾನು ತಿಳಿಯುವೆನು ಅಂದನು.
37 eis que vou estender um velo de lã na eira: se o orvalho cair só no velo, ficando toda a terra seca, reconhecerei que é por minha mão que livrareis Israel, como o dissestes.
38 ಅದು ಹಾಗೆಯೇ ಆಯಿತು. ಅವನು ಮರುದಿನ ಉದಯ ದಲ್ಲಿ ಎದ್ದು ಉಣ್ಣೆಯನ್ನು ತೆಗೆದುಕೊಂಡು ಅದರೊಳ ಗಿದ್ದ ಮಂಜಿನ ನೀರನ್ನು ಒಂದು ಬೋಗುಣಿ ತುಂಬಾ ಹಿಂಡಿದನು.
38 E assim aconteceu. Levantando-se Gedeão no dia seguinte pela manhã, espremeu a lã e encheu um copo de orvalho.
39 ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು.
39 Gedeão disse de novo a Deus: Não se acenda contra mim a vossa cólera se vos falo ainda uma vez! Só quero fazer mais uma prova com o velo: peço que só a lã fique seca, e o orvalho molhe toda a terra em redor.
40 ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
40 E Deus assim o fez naquela noite: só o velo ficou seco, enquanto todo o solo estava coberto de orvalho.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Juízes 6, comparar traduções ou montar um estudo — tudo direto pelo WhatsApp.