Lucas 11
Kannada Bible (GL_KANNADA) vs VC
VC Versão Católica
1 ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
1 Um dia, num certo lugar, estava Jesus a rezar. Terminando a oração, disse-lhe um de seus discípulos: Senhor, ensina-nos a rezar, como também João ensinou a seus discípulos.
2 ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
2 Disse-lhes ele, então: Quando orardes, dizei: Pai, santificado seja o vosso nome; venha o vosso Reino;
3 ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
3 dai-nos hoje o pão necessário ao nosso sustento;
4 ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
4 perdoai-nos os nossos pecados, pois também nós perdoamos àqueles que nos ofenderam; e não nos deixeis cair em tentação.
5 ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
5 Em seguida, ele continuou: Se alguém de vós tiver um amigo e for procurá-lo à meia-noite, e lhe disser: Amigo, empresta-me três pães,
6 ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು
6 pois um amigo meu acaba de chegar à minha casa, de uma viagem, e não tenho nada para lhe oferecer;
7 ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.
7 e se ele responder lá de dentro: Não me incomodes; a porta já está fechada, meus filhos e eu estamos deitados; não posso levantar-me para te dar os pães;
8 ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
8 eu vos digo: no caso de não se levantar para lhe dar os pães por ser seu amigo, certamente por causa da sua importunação se levantará e lhe dará quantos pães necessitar.
9 ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
9 E eu vos digo: pedi, e dar-se-vos-á; buscai, e achareis; batei, e abrir-se-vos-á.
10 ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
10 Pois todo aquele que pede, recebe; aquele que procura, acha; e ao que bater, se lhe abrirá.
11 ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ?
11 Se um filho pedir um pão, qual o pai entre vós que lhe dará uma pedra? Se ele pedir um peixe, acaso lhe dará uma serpente?
12 ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ?
12 Ou se lhe pedir um ovo, dar-lhe-á porventura um escorpião?
13 ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
13 Se vós, pois, sendo maus, sabeis dar boas coisas a vossos filhos, quanto mais vosso Pai celestial dará o Espírito Santo aos que lho pedirem.
14 ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
14 Jesus expelia um demônio que era mudo. Tendo o demônio saído, o mudo pôs-se a falar e a multidão ficou admirada.
15 ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
15 Mas alguns deles disseram: Ele expele os demônios por Beelzebul, príncipe dos demônios.
16 ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
16 E para pô-lo à prova, outros lhe pediam um sinal do céu.
17 ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
17 Penetrando nos seus pensamentos, disse-lhes Jesus: Todo o reino dividido contra si mesmo será destruído e seus edifícios cairão uns sobre os outros.
18 ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
18 Se, pois, Satanás está dividido contra si mesmo, como subsistirá o seu reino? Pois dizeis que expulso os demônios por Beelzebul.
19 ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.
19 Ora, se é por Beelzebul que expulso os demônios, por quem o expulsam vossos filhos? Por isso, eles mesmos serão os vossos juízes!
20 ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
20 Mas se expulso os demônios pelo dedo de Deus, certamente é chegado a vós o Reino de Deus.
21 ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.
21 Quando um homem forte guarda armado a sua casa, estão em segurança os bens que possui.
22 ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
22 Mas se sobrevier outro mais forte do que ele e o vencer, este lhe tirará todas as armas em que confiava, e repartirá os seus despojos.
23 ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.
23 Quem não está comigo, está contra mim; quem não recolhe comigo, espalha.
24 ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ.
24 Quando um espírito imundo sai do homem, anda por lugares áridos, buscando repouso; não o achando, diz: Voltarei à minha casa, donde saí.
25 ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು.
25 Chegando, acha-a varrida e adornada.
26 ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
26 Vai então e toma consigo outros sete espíritos piores do que ele e entram e estabelecem-se ali. E a última condição desse homem vem a ser pior do que a primeira.
27 ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.
27 Enquanto ele assim falava, uma mulher levantou a voz do meio do povo e lhe disse: Bem-aventurado o ventre que te trouxe, e os peitos que te amamentaram!
28 ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
28 Mas Jesus replicou: Antes bem-aventurados aqueles que ouvem a palavra de Deus e a observam!
29 ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
29 Afluía o povo e ele continuou: Esta geração é uma geração perversa; pede um sinal, mas não se lhe dará outro sinal senão o sinal do profeta Jonas.
30 ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
30 Pois, como Jonas foi um sinal para os ninivitas, assim o Filho do Homem o será para esta geração.
31 ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
31 A rainha do meio-dia levantar-se-á no dia do juízo para condenar os homens desta geração, porque ela veio dos confins da terra ouvir a sabedoria de Salomão! Ora, aqui está quem é mais que Salomão.
32 ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
32 Os ninivitas levantar-se-ão no dia do juízo para condenar os homens desta geração, porque fizeram penitência com a pregação de Jonas. Ora, aqui está quem é mais do que Jonas.
33 ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
33 Ninguém acende uma lâmpada e a põe em lugar oculto ou debaixo da amassadeira, mas sobre um candeeiro, para alumiar os que entram.
34 ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
34 O olho é a lâmpada do corpo. Se teu olho é são, todo o corpo será bem iluminado; se, porém, estiver em mau estado, o teu corpo estará em trevas.
35 ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
35 Vê, pois, que a luz que está em ti não sejam trevas.
36 ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
36 Se, pois, todo o teu corpo estiver na luz, sem mistura de trevas, ele será inteiramente iluminado, como sob a brilhante luz de uma lâmpada.
37 ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
37 Enquanto Jesus falava, pediu-lhe um fariseu que fosse jantar em sua companhia. Ele entrou e pôs-se à mesa.
38 ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
38 Admirou-se o fariseu de que ele não se tivesse lavado antes de comer.
39 ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
39 Disse-lhe o Senhor: Vós, fariseus, limpais o que está por fora do vaso e do prato, mas o vosso interior está cheio de roubo e maldade!
40 ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
40 Insensatos! Quem fez o exterior não fez também o conteúdo?
41 ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
41 Dai antes em esmola o que possuís, e todas as coisas vos serão limpas.
42 ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
42 Ai de vós, fariseus, que pagais o dízimo da hortelã, da arruda e de diversas ervas e desprezais a justiça e o amor de Deus. No entanto, era necessário praticar estas coisas, sem contudo deixar de fazer aquelas outras coisas.
43 ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ.
43 Ai de vós, fariseus, que gostais das primeiras cadeiras nas sinagogas e das saudações nas praças públicas!
44 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
44 Ai de vós, que sois como os sepulcros que não aparecem, e sobre os quais os homens caminham sem o saber.
45 ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
45 Um dos doutores da lei lhe disse: Mestre, falando assim também a nós outros nos afrontas.
46 ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
46 Ele respondeu: Ai também de vós, doutores da lei, que carregais os homens com pesos que não podem levar, mas vós mesmos nem sequer com um dedo vosso tocais os fardos.
47 ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
47 Ai de vós, que edificais sepulcros para os profetas que vossos pais mataram.
48 ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
48 Vós servis assim de testemunhas das obras de vossos pais e as aprovais, porque em verdade eles os mataram, mas vós lhes edificais os sepulcros.
49 ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
49 Por isso, também disse a sabedoria de Deus: Enviar-lhes-ei profetas e apóstolos, mas eles darão a morte a uns e perseguirão a outros.
50 ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
50 E assim se pedirá conta a esta geração do sangue de todos os profetas derramado desde a criação do mundo,
51 ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
51 desde o sangue de Abel até o sangue de Zacarias, que foi assassinado entre o altar e o templo. Sim, declaro-vos que se pedirá conta disso a esta geração!
52 ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
52 Ai de vós, doutores da lei, que tomastes a chave da ciência, e vós mesmos não entrastes e impedistes aos que vinham para entrar.
53 ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.
53 Depois que Jesus saiu dali, os escribas e fariseus começaram a importuná-lo fortemente e a persegui-lo com muitas perguntas,
54 ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
54 armando-lhe desta maneira ciladas, e procurando surpreendê-lo nalguma palavra de sua boca.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 11, comparar traduções ou montar um estudo — tudo direto pelo WhatsApp.