Lucas 18

Kannada Bible (GL_KANNADA) vs ACF

Sair da comparação
ACF Almeida Corrigida Fiel
1 ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
1 E contou-lhes também uma parábola sobre o dever de orar sempre, e nunca desfalecer,
2 ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
2 Dizendo: Havia numa cidade um certo juiz, que nem a Deus temia, nem respeitava o homem.
3 ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
3 Havia também, naquela mesma cidade, uma certa viúva, que ia ter com ele, dizendo: Faze-me justiça contra o meu adversário.
4 ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
4 E por algum tempo não quis atendê-la; mas depois disse consigo: Ainda que não temo a Deus, nem respeito os homens,
5 ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
5 Todavia, como esta viúva me molesta, hei de fazer-lhe justiça, para que enfim não volte, e me importune muito.
6 ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ.
6 E disse o Senhor: Ouvi o que diz o injusto juiz.
7 ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
7 E Deus não fará justiça aos seus escolhidos, que clamam a ele de dia e de noite, ainda que tardio para com eles?
8 ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
8 Digo-vos que depressa lhes fará justiça. Quando porém vier o Filho do homem, porventura achará fé na terra?
9 ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
9 E disse também esta parábola a uns que confiavam em si mesmos, crendo que eram justos, e desprezavam os outros:
10 ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.
10 Dois homens subiram ao templo, para orar; um, fariseu, e o outro, publicano.
11 ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
11 O fariseu, estando em pé, orava consigo desta maneira: Ó Deus, graças te dou porque não sou como os demais homens, roubadores, injustos e adúlteros; nem ainda como este publicano.
12 ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
12 Jejuo duas vezes na semana, e dou os dízimos de tudo quanto possuo.
13 ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
13 O publicano, porém, estando em pé, de longe, nem ainda queria levantar os olhos ao céu, mas batia no peito, dizendo: Ó Deus, tem misericórdia de mim, pecador!
14 ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
14 Digo-vos que este desceu justificado para sua casa, e não aquele; porque qualquer que a si mesmo se exalta será humilhado, e qualquer que a si mesmo se humilha será exaltado.
15 ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
15 E traziam-lhe também meninos, para que ele lhes tocasse; e os discípulos, vendo isto, repreendiam-nos.
16 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
16 Mas Jesus, chamando-os para si, disse: Deixai vir a mim os meninos, e não os impeçais, porque dos tais é o reino de Deus.
17 ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
17 Em verdade vos digo que, qualquer que não receber o reino de Deus como menino, não entrará nele.
18 ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
18 E perguntou-lhe um certo príncipe, dizendo: Bom Mestre, que hei de fazer para herdar a vida eterna?
19 ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
19 Jesus lhe disse: Por que me chamas bom? Ninguém há bom, senão um, que é Deus.
20 ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
20 Sabes os mandamentos: Não adulterarás, não matarás, não furtarás, não dirás falso testemunho, honra a teu pai e a tua mãe.
21 ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
21 E disse ele: Todas essas coisas tenho observado desde a minha mocidade.
22 ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
22 E quando Jesus ouviu isto, disse-lhe: Ainda te falta uma coisa; vende tudo quanto tens, reparte-o pelos pobres, e terás um tesouro no céu; vem, e segue-me.
23 ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
23 Mas, ouvindo ele isto, ficou muito triste, porque era muito rico.
24 ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
24 E, vendo Jesus que ele ficara muito triste, disse: Quão dificilmente entrarão no reino de Deus os que têm riquezas!
25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
25 Porque é mais fácil entrar um camelo pelo fundo de uma agulha do que entrar um rico no reino de Deus.
26 ಇದನ್ನು ಕೇಳಿದವರು--ಹಾಗಾದರೆ ರಕ್ಷಣೆ ಹೊಂದುವವರು ಯಾರು? ಅಂದರು.
26 E os que ouviram isto disseram: Logo quem pode salvar-se?
27 ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.
27 Mas ele respondeu: As coisas que são impossíveis aos homens são possíveis a Deus.
28 ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ
28 E disse Pedro: Eis que nós deixamos tudo e te seguimos.
29 ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
29 E ele lhes disse: Na verdade vos digo que ninguém há, que tenha deixado casa, ou pais, ou irmãos, ou mulher, ou filhos, pelo reino de Deus,
30 ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
30 Que não haja de receber muito mais neste mundo, e na idade vindoura a vida eterna.
31 ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
31 E, tomando consigo os doze, disse-lhes: Eis que subimos a Jerusalém, e se cumprirá no Filho do homem tudo o que pelos profetas foi escrito;
32 ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
32 Pois há de ser entregue aos gentios, e escarnecido, injuriado e cuspido;
33 ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
33 E, havendo-o açoitado, o matarão; e ao terceiro dia ressuscitará.
34 ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
34 E eles nada disto entendiam, e esta palavra lhes era encoberta, não percebendo o que se lhes dizia.
35 ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
35 E aconteceu que chegando ele perto de Jericó, estava um cego assentado junto do caminho, mendigando.
36 ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
36 E, ouvindo passar a multidão, perguntou que era aquilo.
37 ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
37 E disseram-lhe que Jesus Nazareno passava.
38 ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
38 Então clamou, dizendo: Jesus, Filho de Davi, tem misericórdia de mim.
39 ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
39 E os que iam passando repreendiam-no para que se calasse; mas ele clamava ainda mais: Filho de Davi, tem misericórdia de mim!
40 ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
40 Então Jesus, parando, mandou que lho trouxessem; e, chegando ele, perguntou-lhe,
41 ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
41 Dizendo: Que queres que te faça? E ele disse: Senhor, que eu veja.
42 ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.
42 E Jesus lhe disse: Vê; a tua fé te salvou.
43 ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
43 E logo viu, e seguia-o, glorificando a Deus. E todo o povo, vendo isto, dava louvores a Deus.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Lucas 18, comparar traduções ou montar um estudo — tudo direto pelo WhatsApp.