Lucas 1

Kannada Bible (GL_KANNADA) vs ARC

Sair da comparação
ARC Almeida Revista e Corrigida 2009
1 ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು
1 Tendo, pois, muitos empreendido pôr em ordem a narração dos fatos que entre nós se cumpriram,
2 ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
2 segundo nos transmitiram os mesmos que os presenciaram desde o princípio e foram ministros da palavra,
3 ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
3 pareceu-me também a mim conveniente descrevê-los a ti, ó excelentíssimo Teófilo, por sua ordem, havendo-me já informado minuciosamente de tudo desde o princípio,
4 ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು.
4 para que conheças a certeza das coisas de que já estás informado.
5 ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್‌.
5 Existiu, no tempo de Herodes, rei da Judeia, um sacerdote, chamado Zacarias, da ordem de Abias, e cuja mulher era das filhas de Arão; o nome dela era Isabel.
6 ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
6 E eram ambos justos perante Deus, vivendo irrepreensivelmente em todos os mandamentos e preceitos do Senhor.
7 ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
7 E não tinham filhos, porque Isabel era estéril, e ambos eram avançados em idade.
8 ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
8 E aconteceu que, exercendo ele o sacerdócio diante de Deus, na ordem da sua turma,
9 ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
9 segundo o costume sacerdotal, coube-lhe em sorte entrar no templo do Senhor para oferecer o incenso.
10 ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
10 E toda a multidão do povo estava fora, orando, à hora do incenso.
11 ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
11 Então, um anjo do Senhor lhe apareceu, posto em pé, à direita do altar do incenso.
12 ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
12 E Zacarias, vendo- o, turbou-se, e caiu temor sobre ele.
13 ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
13 Mas o anjo lhe disse: Zacarias, não temas, porque a tua oração foi ouvida, e Isabel, tua mulher, dará à luz um filho, e lhe porás o nome de João.
14 ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
14 E terás prazer e alegria, e muitos se alegrarão no seu nascimento,
15 ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
15 porque será grande diante do Senhor, e não beberá vinho, nem bebida forte, e será cheio do Espírito Santo, já desde o ventre de sua mãe.
16 ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
16 E converterá muitos dos filhos de Israel ao Senhor, seu Deus,
17 ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
17 e irá adiante dele no espírito e virtude de Elias, para converter o coração dos pais aos filhos e os rebeldes, à prudência dos justos, com o fim de preparar ao Senhor um povo bem disposto.
18 ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
18 Disse, então, Zacarias ao anjo: Como saberei isso? Pois eu já sou velho, e minha mulher, avançada em idade.
19 ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
19 E, respondendo o anjo, disse-lhe: Eu sou Gabriel, que assisto diante de Deus, e fui enviado a falar-te e dar-te estas alegres novas.
20 ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
20 Todavia ficarás mudo e não poderás falar até ao dia em que estas coisas aconteçam, porquanto não creste nas minhas palavras, que a seu tempo se hão de cumprir.
21 ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
21 E o povo estava esperando a Zacarias e maravilhava-se de que tanto se demorasse no templo.
22 ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
22 E, saindo ele, não lhes podia falar; e entenderam que tivera alguma visão no templo. E falava por acenos e ficou mudo.
23 ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು.
23 E sucedeu que, terminados os dias de seu ministério, voltou para sua casa.
24 ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--
24 E, depois daqueles dias, Isabel, sua mulher, concebeu e, por cinco meses, se ocultou, dizendo:
25 ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
25 Assim me fez o Senhor, nos dias em que atentou em mim, para destruir o meu opróbrio entre os homens.
26 ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
26 E, no sexto mês, foi o anjo Gabriel enviado por Deus a uma cidade da Galileia, chamada Nazaré,
27 ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
27 a uma virgem desposada com um varão cujo nome era José, da casa de Davi; e o nome da virgem era Maria.
28 ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
28 E, entrando o anjo onde ela estava, disse: Salve, agraciada; o Senhor é contigo; bendita és tu entre as mulheres.
29 ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
29 E, vendo- o ela, turbou-se muito com aquelas palavras e considerava que saudação seria esta.
30 ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
30 Disse-lhe, então, o anjo: Maria, não temas, porque achaste graça diante de Deus,
31 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
31 E eis que em teu ventre conceberás, e darás à luz um filho, e pôr-lhe-ás o nome de Jesus.
32 ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
32 Este será grande e será chamado Filho do Altíssimo; e o Senhor Deus lhe dará o trono de Davi, seu pai,
33 ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
33 e reinará eternamente na casa de Jacó, e o seu Reino não terá fim.
34 ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
34 E disse Maria ao anjo: Como se fará isso, visto que não conheço varão?
35 ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
35 E, respondendo o anjo, disse-lhe: Descerá sobre ti o Espírito Santo, e a virtude do Altíssimo te cobrirá com a sua sombra; pelo que também o Santo, que de ti há de nascer, será chamado Filho de Deus.
36 ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
36 E eis que também Isabel, tua prima, concebeu um filho em sua velhice; e é este o sexto mês para aquela que era chamada estéril.
37 ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
37 Porque para Deus nada é impossível.
38 ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
38 Disse, então, Maria: Eis aqui a serva do Senhor; cumpra-se em mim segundo a tua palavra. E o anjo ausentou-se dela.
39 ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
39 E, naqueles dias, levantando-se Maria, foi apressada às montanhas, a uma cidade de Judá,
40 ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
40 e entrou em casa de Zacarias, e saudou a Isabel.
41 ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
41 E aconteceu que, ao ouvir Isabel a saudação de Maria, a criancinha saltou no seu ventre; e Isabel foi cheia do Espírito Santo,
42 ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
42 e exclamou com grande voz, e disse: Bendita és tu entre as mulheres, e é bendito o fruto do teu ventre!
43 ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
43 E de onde me provém isso a mim, que venha visitar-me a mãe do meu Senhor?
44 ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
44 Pois eis que, ao chegar aos meus ouvidos a voz da tua saudação, a criancinha saltou de alegria no meu ventre.
45 ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
45 Bem-aventurada a que creu, pois hão de cumprir-se as coisas que da parte do Senhor lhe foram ditas!
46 ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
46 Disse, então, Maria: A minha alma engrandece ao Senhor,
47 ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
47 e o meu espírito se alegra em Deus, meu Salvador,
48 ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
48 porque atentou na humildade de sua serva; pois eis que, desde agora, todas as gerações me chamarão bem-aventurada.
49 ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
49 Porque me fez grandes coisas o Poderoso; e Santo é o seu nome.
50 ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
50 E a sua misericórdia é de geração em geração sobre os que o temem.
51 ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
51 Com o seu braço, agiu valorosamente, dissipou os soberbos no pensamento de seu coração,
52 ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
52 depôs dos tronos os poderosos e elevou os humildes;
53 ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
53 encheu de bens os famintos, despediu vazios os ricos,
54 ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
54 e auxiliou a Israel, seu servo, recordando-se da sua misericórdia
55 ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
55 (como falou a nossos pais) para com Abraão e sua posteridade, para sempre.
56 ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು.
56 E Maria ficou com ela quase três meses e depois voltou para sua casa.
57 ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
57 E completou-se para Isabel o tempo de dar à luz, e teve um filho.
58 ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
58 E os seus vizinhos e parentes ouviram que tinha Deus usado para com ela de grande misericórdia e alegraram-se com ela.
59 ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
59 E aconteceu que, ao oitavo dia, vieram circuncidar o menino e lhe chamavam Zacarias, o nome de seu pai.
60 ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
60 E, respondendo sua mãe, disse: Não, porém será chamado João.
61 ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
61 E disseram-lhe: Ninguém há na tua parentela que se chame por este nome.
62 ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು.
62 E perguntaram, por acenos, ao pai como queria que lhe chamassem.
63 ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
63 E, pedindo ele uma tabuinha de escrever, escreveu, dizendo: O seu nome é João. E todos se maravilharam.
64 ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು.
64 E logo a boca se lhe abriu, e a língua se lhe soltou; e falava, louvando a Deus.
65 ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.
65 E veio temor sobre todos os seus vizinhos, e em todas as montanhas da Judeia foram divulgadas todas essas coisas.
66 ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
66 E todos os que as ouviam as conservavam em seu coração, dizendo: Quem será, pois, este menino? E a mão do Senhor estava com ele.
67 ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ--
67 E Zacarias, seu pai, foi cheio do Espírito Santo e profetizou, dizendo:
68 ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
68 Bendito o Senhor, Deus de Israel, porque visitou e remiu o seu povo!
69 ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
69 E nos levantou uma salvação poderosa na casa de Davi, seu servo,
70 ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
70 como falou pela boca dos seus santos profetas, desde o princípio do mundo,
71 ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
71 para nos livrar dos nossos inimigos e das mãos de todos os que nos aborrecem
72 ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
72 e para manifestar misericórdia a nossos pais, e para lembrar-se do seu santo concerto
73 ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
73 e do juramento que jurou a Abraão, nosso pai,
74 ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
74 de conceder-nos que, libertados das mãos de nossos inimigos, o servíssemos sem temor,
75 ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
75 em santidade e justiça perante ele, todos os dias da nossa vida.
76 ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
76 E tu, ó menino, serás chamado profeta do Altíssimo, porque hás de ir ante a face do Senhor, a preparar os seus caminhos,
77 ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
77 para dar ao seu povo conhecimento da salvação, na remissão dos seus pecados,
78 ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
78 pelas entranhas da misericórdia do nosso Deus, com que o oriente do alto nos visitou,
79 ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.
79 para alumiar os que estão assentados em trevas e sombra de morte, a fim de dirigir os nossos pés pelo caminho da paz.
80 ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
80 E o menino crescia, e se robustecia em espírito, e esteve nos desertos até ao dia em que havia de mostrar-se a Israel.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Lucas 1, comparar traduções ou montar um estudo — tudo direto pelo WhatsApp.