Lucas 21
Kannada Bible (GL_KANNADA) vs NAA
NAA Nova Almeida Atualizada 2017
1 ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
1 Jesus estava observando e viu os ricos que lançavam seu dinheiro na caixa de ofertas.
2 ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು.
2 Viu também certa viúva pobre lançar ali duas pequenas moedas.
3 ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ;
3 Então Jesus disse:
4 ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
4 Porque todos esses deram como oferta daquilo que lhes sobrava; esta, porém, da sua pobreza deu tudo o que possuía, todo o seu sustento.
5 ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--
5 Alguns falavam a respeito do templo, como estava ornado de belas pedras e de dádivas.
6 ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
6 Então Jesus disse:
7 ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
7 Perguntaram a Jesus: — Mestre, quando será isto? E que sinal haverá quando estas coisas estiverem para acontecer?
8 ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
8 Jesus respondeu:
9 ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
9 Quando vocês ouvirem falar de guerras e revoluções, não fiquem assustados; pois é necessário que primeiro aconteçam estas coisas, mas o fim não será logo.
10 ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.
10 Então Jesus lhes disse:
11 ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
11 Haverá grandes terremotos, epidemias e fome em vários lugares, coisas espantosas e também grandes sinais vindos do céu.
12 ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
12 Antes, porém, de todas estas coisas, vocês serão presos e perseguidos. Vocês serão entregues às sinagogas e lançados nas prisões; serão levados à presença de reis e de governadores, por causa do meu nome.
13 ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು.
13 Isto acontecerá para que vocês deem testemunho.
14 ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
14 Tomem, pois, a decisão de não se preocupar com o que irão responder,
15 ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
15 porque eu lhes darei palavras e sabedoria a que não poderão resistir nem contradizer todos os que se opuserem a vocês.
16 ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
16 E vocês serão entregues até por seus próprios pais, irmãos, parentes e amigos; e eles matarão alguns de vocês.
17 ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
17 Todos odiarão vocês por causa do meu nome.
18 ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
18 Mas não se perderá um só fio de cabelo da cabeça de vocês.
19 ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ.
19 É pela perseverança que vocês ganharão a sua alma.
20 ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
20 — Quando, porém, vocês virem Jerusalém sitiada de exércitos, saibam que está próxima a sua devastação.
21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
21 Então os que estiverem na Judeia fujam para os montes; os que se encontrarem dentro da cidade saiam dela; e os que estiverem nos campos não entrem na cidade.
22 ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
22 Porque esses dias são de vingança, para se cumprir tudo o que está escrito.
23 ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
23 Ai das que estiverem grávidas e das que amamentarem naqueles dias! Porque haverá grande aflição na terra e ira contra este povo.
24 ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
24 Cairão a fio de espada e serão levados cativos para todas as nações; e, até que os tempos dos gentios se completem, Jerusalém será pisada por eles.
25 ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
25 — Haverá sinais no sol, na lua e nas estrelas; sobre a terra, angústia entre as nações em perplexidade por causa do bramido do mar e das ondas.
26 ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
26 Haverá pessoas que desmaiarão de terror e pela expectativa das coisas que sobrevirão ao mundo, pois os poderes dos céus serão abalados.
27 ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
27 Então verão o Filho do Homem vindo numa nuvem, com poder e grande glória.
28 ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
28 Ora, quando estas coisas começarem a acontecer, levantem-se e fiquem de cabeça erguida, porque a redenção de vocês se aproxima.
29 ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;
29 Jesus ainda lhes contou uma parábola, dizendo:
30 ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ.
30 Quando veem que começam a brotar, vocês mesmos sabem que o verão está próximo.
31 ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
31 Assim também, quando virem acontecer essas coisas, saibam que está próximo o Reino de Deus.
32 ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
32 Em verdade lhes digo que não passará esta geração sem que tudo isto aconteça.
33 ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
33 Passará o céu e a terra, porém as minhas palavras não passarão.
34 ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
34 — Tenham cuidado para não acontecer que o coração de vocês fique sobrecarregado com as consequências da orgia, da embriaguez e das preocupações deste mundo, e para que aquele dia não venha sobre vocês repentinamente,
35 ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.
35 como uma armadilha. Pois sobrevirá a todos os que vivem sobre a face de toda a terra.
36 ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
36 Portanto, vigiem o tempo todo, orando, para que vocês possam escapar de todas essas coisas que têm de acontecer e para que possam estar em pé na presença do Filho do Homem.
37 ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.
37 Jesus ensinava todos os dias no templo, mas à noite saía e ficava no monte chamado das Oliveiras.
38 ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
38 E todo o povo madrugava para ir ao encontro dele no templo, a fim de ouvi-lo.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 21, comparar traduções ou montar um estudo — tudo direto pelo WhatsApp.