Lucas 22

Kannada Bible (GL_KANNADA) vs NAA

Sair da comparação
NAA Nova Almeida Atualizada 2017
1 ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.
1 Estava próxima a Festa dos Pães sem Fermento, chamada Páscoa.
2 ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
2 Os principais sacerdotes e os escribas procuravam uma forma de matar Jesus; porque temiam o povo.
3 ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
3 Ora, Satanás entrou em Judas, chamado Iscariotes, que era um dos doze.
4 ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
4 Judas foi entender-se com os principais sacerdotes e os capitães sobre como lhes entregaria Jesus.
5 ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.
5 Eles se alegraram e combinaram em lhe dar dinheiro.
6 ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
6 Judas concordou e buscava uma boa ocasião para lhes entregar Jesus, longe da multidão.
7 ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.
7 Chegou o dia da Festa dos Pães sem Fermento, em que era necessário fazer o sacrifício do cordeiro pascal.
8 ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು.
8 Então Jesus enviou Pedro e João, dizendo:
9 ಅವರು ಆತನಿಗೆ--ನಾವು ಎಲ್ಲಿ ಸಿದ್ಧ ಮಾಡಬೇಕೆಂದು ನೀನು ಕೋರುತ್ತೀ ಅಂದರು.
9 Eles lhe perguntaram: — Onde o senhor quer que a preparemos?
10 ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
10 Jesus lhes explicou:
11 ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
11 e digam ao dono da casa: “O Mestre pergunta: ‘Onde fica o aposento no qual comerei a Páscoa com os meus discípulos?’”
12 ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.
12 Ele lhes mostrará um espaçoso cenáculo mobiliado; ali façam os preparativos.
13 ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.
13 E, indo, acharam tudo como Jesus lhes tinha dito e prepararam a Páscoa.
14 ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.
14 Chegada a hora, Jesus se pôs à mesa, e os apóstolos estavam com ele.
15 ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ
15 Então Jesus lhes disse:
16 ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
16 Pois eu lhes digo que nunca mais a comerei, até que ela se cumpra no Reino de Deus.
17 ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.
17 E, pegando um cálice, depois de ter dado graças, disse:
18 ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.
18 Pois eu digo a vocês que, de agora em diante, não mais beberei do fruto da videira, até que venha o Reino de Deus.
19 ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
19 E, pegando um pão, tendo dado graças, o partiu e lhes deu, dizendo:
20 ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
20 Do mesmo modo, depois da ceia, pegou o cálice, dizendo:
21 ಆದರೂ ಇಗೋ, ನನ್ನನ್ನು ಹಿಡುಕೊಡುವವನ ಕೈ ನನ್ನ ಸಂಗಡ ಮೇಜಿನ ಮೇಲೆ ಇದೆ.
21 — Mas eis que a mão do traidor está comigo à mesa.
22 ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
22 Pois o Filho do Homem vai segundo o que está determinado, mas ai daquele por quem ele está sendo traído!
23 ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು.
23 Então começaram a perguntar entre si qual deles seria o que estava para fazer isso.
24 ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು.
24 Houve também entre eles uma discussão sobre qual deles parecia ser o maior.
25 ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.
25 Mas Jesus lhes disse:
26 ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ.
26 Mas vocês não são assim; pelo contrário, o maior entre vocês seja como o menor; e aquele que dirige seja como o que serve.
27 ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
27 Pois qual é maior: aquele que está à mesa ou aquele que serve? Não é verdade que é aquele que está à mesa? Pois, no meio de vocês, eu sou como quem serve.
28 ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.
28 Vocês são os que têm permanecido comigo nas minhas tentações.
29 ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
29 E eu confio a vocês um reino, assim como o meu Pai confiou a mim,
30 ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
30 para que comam e bebam à minha mesa no meu Reino; e vocês se assentarão em tronos para julgar as doze tribos de Israel.
31 ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
31 — Simão, Simão, eis que Satanás pediu para peneirar vocês como trigo!
32 ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
32 Eu, porém, orei por você, para que a sua fé não desfaleça. E você, quando voltar para mim, fortaleça os seus irmãos.
33 ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
33 Porém Pedro respondeu: — Estou pronto para ir com o Senhor, tanto para a prisão como para a morte.
34 ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
34 Mas Jesus lhe disse:
35 ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
35 A seguir, Jesus perguntou aos discípulos: Eles responderam: — Não faltou nada!
36 ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
36 Então Jesus lhes disse:
37 ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
37 Pois eu lhes digo que é preciso que se cumpra em mim o que está escrito: “Ele foi contado com os malfeitores.” Pois o que a mim se refere está sendo cumprido.
38 ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
38 Então lhe disseram: — Senhor, aqui estão duas espadas! Jesus lhes respondeu:
39 ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
39 E, saindo, Jesus foi, como de costume, para o monte das Oliveiras; e os discípulos o acompanharam.
40 ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
40 Chegando ao lugar escolhido, Jesus lhes disse:
41 ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
41 Ele, por sua vez, se afastou um pouco, e, de joelhos, orava,
42 ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
42 dizendo:
43 ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
43 Então lhe apareceu um anjo do céu que o confortava.
44 ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
44 E, estando em agonia, orava mais intensamente. E aconteceu que o suor dele se tornou como gotas de sangue caindo sobre a terra.
45 ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
45 Levantando-se da oração, Jesus foi até onde os discípulos estavam, e os encontrou dormindo de tristeza.
46 ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
46 E disse:
47 ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
47 Enquanto Jesus ainda falava, eis que chegou uma multidão. E um dos doze, que se chamava Judas, vinha à frente deles e se aproximou de Jesus para o beijar.
48 ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
48 Jesus, porém, lhe disse:
49 ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
49 Os que estavam ao redor de Jesus, vendo o que estava por acontecer, perguntaram: — Senhor, devemos atacar com as espadas?
50 ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು.
50 Um deles golpeou o servo do sumo sacerdote e cortou-lhe a orelha direita.
51 ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
51 Mas Jesus interveio, dizendo: E, tocando na orelha do homem, o curou.
52 ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
52 Então Jesus disse aos principais sacerdotes, capitães do templo e anciãos que vieram prendê-lo:
53 ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
53 Todos os dias, estando eu com vocês no templo, vocês não tentaram me prender. Esta, porém, é a hora de vocês e a hora do poder das trevas.
54 ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
54 Então, prendendo Jesus, levaram-no e o introduziram na casa do sumo sacerdote. Pedro seguia de longe.
55 ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
55 Quando acenderam um fogo no meio do pátio e se assentaram juntos, Pedro tomou lugar entre eles.
56 ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
56 Uma empregada, vendo-o sentado perto do fogo, fixou os olhos nele e disse: — Este também estava com ele.
57 ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು.
57 Mas Pedro negou, dizendo: — Mulher, não o conheço.
58 ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.
58 Pouco depois, outro homem, ao ver Pedro, disse: — Você também é um deles. Mas Pedro disse: — Homem, eu não sou um deles.
59 ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು.
59 E, tendo passado cerca de uma hora, outro afirmou, dizendo: — Com certeza este também estava com ele, porque também é galileu.
60 ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
60 Mas Pedro insistiu: — Homem, não sei do que você está falando. E logo, enquanto Pedro ainda falava, o galo cantou.
61 ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
61 Então, o Senhor voltou-se e fixou os olhos em Pedro. E Pedro se lembrou da palavra do Senhor, como lhe tinha dito: “Hoje, antes que o galo cante, você me negará três vezes.”
62 ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
62 E Pedro, saindo dali, chorou amargamente.
63 ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
63 Os homens que detinham Jesus zombavam dele, davam-lhe pancadas e,
64 ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
64 colocando uma venda sobre os olhos dele, diziam: — Profetize! Quem foi que bateu em você?
65 ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.
65 E muitas outras coisas diziam contra ele, blasfemando.
66 ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
66 Logo que amanheceu, reuniu-se a assembleia dos anciãos do povo, tanto os principais sacerdotes como os escribas, e o conduziram ao Sinédrio, onde lhe disseram:
67 ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
67 — Se você é o Cristo, diga-nos. Então Jesus lhes respondeu:
68 ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.
68 E, se eu perguntar, vocês não me darão resposta.
69 ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
69 Desde agora, o Filho do Homem estará sentado à direita do Deus Todo-Poderoso.
70 ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.
70 Todos perguntaram: — Então você é o Filho de Deus? Jesus respondeu:
71 ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
71 Eles disseram: — Que necessidade ainda temos de testemunho? Porque nós mesmos ouvimos o que ele falou.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Lucas 22, comparar traduções ou montar um estudo — tudo direto pelo WhatsApp.