Lucas 24
Kannada Bible (GL_KANNADA) vs ARA
ARA Almeida Revista e Atualizada 1993
1 ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
1 Mas, no primeiro dia da semana, alta madrugada, foram elas ao túmulo, levando os aromas que haviam preparado.
2 ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.
2 E encontraram a pedra removida do sepulcro;
3 ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ.
3 mas, ao entrarem, não acharam o corpo do Senhor Jesus.
4 ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
4 Aconteceu que, perplexas a esse respeito, apareceram-lhes dois varões com vestes resplandecentes.
5 ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
5 Estando elas possuídas de temor, baixando os olhos para o chão, eles lhes falaram: Por que buscais entre os mortos ao que vive?
6 ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
6 Ele não está aqui, mas ressuscitou. Lembrai-vos de como vos preveniu, estando ainda na Galileia,
7 ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
7 quando disse: Importa que o Filho do Homem seja entregue nas mãos de pecadores, e seja crucificado, e ressuscite no terceiro dia.
8 ಆಗ ಅವರು ಆತನ ಮಾತುಗಳನ್ನು ನೆನಪು ಮಾಡಿಕೊಂಡು
8 Então, se lembraram das suas palavras.
9 ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
9 E, voltando do túmulo, anunciaram todas estas coisas aos onze e a todos os mais que com eles estavam.
10 ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
10 Eram Maria Madalena, Joana e Maria, mãe de Tiago; também as demais que estavam com elas confirmaram estas coisas aos apóstolos.
11 ಅವರ ಮಾತುಗಳು ಇವರಿಗೆ ಹರಟೆಯ ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.
11 Tais palavras lhes pareciam um como delírio, e não acreditaram nelas.
12 ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
12 Pedro, porém, levantando-se, correu ao sepulcro. E, abaixando-se, nada mais viu, senão os lençóis de linho; e retirou-se para casa, maravilhado do que havia acontecido.
13 ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.
13 Naquele mesmo dia, dois deles estavam de caminho para uma aldeia chamada Emaús, distante de Jerusalém sessenta estádios.
14 ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
14 E iam conversando a respeito de todas as coisas sucedidas.
15 ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
15 Aconteceu que, enquanto conversavam e discutiam, o próprio Jesus se aproximou e ia com eles.
16 ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
16 Os seus olhos, porém, estavam como que impedidos de o reconhecer.
17 ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
17 Então, lhes perguntou Jesus: Que é isso que vos preocupa e de que ides tratando à medida que caminhais? E eles pararam entristecidos.
18 ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
18 Um, porém, chamado Cleopas, respondeu, dizendo: És o único, porventura, que, tendo estado em Jerusalém, ignoras as ocorrências destes últimos dias?
19 ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
19 Ele lhes perguntou: Quais? E explicaram: O que aconteceu a Jesus, o Nazareno, que era varão profeta, poderoso em obras e palavras, diante de Deus e de todo o povo,
20 ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
20 e como os principais sacerdotes e as nossas autoridades o entregaram para ser condenado à morte e o crucificaram.
21 ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
21 Ora, nós esperávamos que fosse ele quem havia de redimir a Israel; mas, depois de tudo isto, é já este o terceiro dia desde que tais coisas sucederam.
22 ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು
22 É verdade também que algumas mulheres, das que conosco estavam, nos surpreenderam, tendo ido de madrugada ao túmulo;
23 ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
23 e, não achando o corpo de Jesus, voltaram dizendo terem tido uma visão de anjos, os quais afirmam que ele vive.
24 ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
24 De fato, alguns dos nossos foram ao sepulcro e verificaram a exatidão do que disseram as mulheres; mas não o viram.
25 ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
25 Então, lhes disse Jesus: Ó néscios e tardos de coração para crer tudo o que os profetas disseram!
26 ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
26 Porventura, não convinha que o Cristo padecesse e entrasse na sua glória?
27 ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
27 E, começando por Moisés, discorrendo por todos os Profetas, expunha-lhes o que a seu respeito constava em todas as Escrituras.
28 ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು.
28 Quando se aproximavam da aldeia para onde iam, fez ele menção de passar adiante.
29 ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
29 Mas eles o constrangeram, dizendo: Fica conosco, porque é tarde, e o dia já declina. E entrou para ficar com eles.
30 ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
30 E aconteceu que, quando estavam à mesa, tomando ele o pão, abençoou-o e, tendo-o partido, lhes deu;
31 ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
31 então, se lhes abriram os olhos, e o reconheceram; mas ele desapareceu da presença deles.
32 ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
32 E disseram um ao outro: Porventura, não nos ardia o coração, quando ele, pelo caminho, nos falava, quando nos expunha as Escrituras?
33 ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
33 E, na mesma hora, levantando-se, voltaram para Jerusalém, onde acharam reunidos os onze e outros com eles,
34 ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು.
34 os quais diziam: O Senhor ressuscitou e já apareceu a Simão!
35 ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
35 Então, os dois contaram o que lhes acontecera no caminho e como fora por eles reconhecido no partir do pão.
36 ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
36 Falavam ainda estas coisas quando Jesus apareceu no meio deles e lhes disse: Paz seja convosco!
37 ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
37 Eles, porém, surpresos e atemorizados, acreditavam estarem vendo um espírito.
38 ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
38 Mas ele lhes disse: Por que estais perturbados? E por que sobem dúvidas ao vosso coração?
39 ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
39 Vede as minhas mãos e os meus pés, que sou eu mesmo; apalpai-me e verificai, porque um espírito não tem carne nem ossos, como vedes que eu tenho.
40 ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.
40 Dizendo isto, mostrou-lhes as mãos e os pés.
41 ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
41 E, por não acreditarem eles ainda, por causa da alegria, e estando admirados, Jesus lhes disse: Tendes aqui alguma coisa que comer?
42 ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
42 Então, lhe apresentaram um pedaço de peixe assado [e um favo de mel].
43 ಆತನು ತಕ್ಕೊಂಡು ಅವರ ಮುಂದೆ ತಿಂದನು.
43 E ele comeu na presença deles.
44 ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
44 A seguir, Jesus lhes disse: São estas as palavras que eu vos falei, estando ainda convosco: importava se cumprisse tudo o que de mim está escrito na Lei de Moisés, nos Profetas e nos Salmos.
45 ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
45 Então, lhes abriu o entendimento para compreenderem as Escrituras;
46 ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
46 e lhes disse: Assim está escrito que o Cristo havia de padecer e ressuscitar dentre os mortos no terceiro dia
47 ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
47 e que em seu nome se pregasse arrependimento para remissão de pecados a todas as nações, começando de Jerusalém.
48 ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
48 Vós sois testemunhas destas coisas.
49 ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
49 Eis que envio sobre vós a promessa de meu Pai; permanecei, pois, na cidade, até que do alto sejais revestidos de poder.
50 ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
50 Então, os levou para Betânia e, erguendo as mãos, os abençoou.
51 ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
51 Aconteceu que, enquanto os abençoava, ia-se retirando deles, sendo elevado para o céu.
52 ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.
52 Então, eles, adorando-o, voltaram para Jerusalém, tomados de grande júbilo;
53 ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
53 e estavam sempre no templo, louvando a Deus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 24, comparar traduções ou montar um estudo — tudo direto pelo WhatsApp.