Lucas 2
Kannada Bible (GL_KANNADA) vs VC
VC Versão Católica
1 ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
1 Naqueles tempos apareceu um decreto de César Augusto, ordenando o recenseamento de toda a terra.
2 ಕುರೇನ್ಯನು ಸಿರಿಯಾಕ್ಕೆ ಅಧಿಪತಿಯಾಗಿದ್ದಾಗ ಈ ಖಾನೇಷುಮಾರಿಯು ಮೊದಲನೆಯ ಸಾರಿ ನಡೆ ಯಿತು.
2 Este recenseamento foi feito antes do governo de Quirino, na Síria.
3 ಆಗ ಎಲ್ಲರೂ ಖಾನೇಷುಮಾರಿ ಬರೆಯಿಸಿ ಕೊಳ್ಳುವದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಕ್ಕೆ ಹೋದರು.
3 Todos iam alistar-se, cada um na sua cidade.
4 (ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
4 Também José subiu da Galiléia, da cidade de Nazaré, à Judéia, à Cidade de Davi, chamada Belém, porque era da casa e família de Davi,
5 ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು.
5 para se alistar com a sua esposa Maria, que estava grávida.
6 ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.
6 Estando eles ali, completaram-se os dias dela.
7 ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
7 E deu à luz seu filho primogênito, e, envolvendo-o em faixas, reclinou-o num presépio; porque não havia lugar para eles na hospedaria.
8 ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
8 Havia nos arredores uns pastores, que vigiavam e guardavam seu rebanho nos campos durante as vigílias da noite.
9 ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
9 Um anjo do Senhor apareceu-lhes e a glória do Senhor refulgiu ao redor deles, e tiveram grande temor.
10 ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
10 O anjo disse-lhes: Não temais, eis que vos anuncio uma boa nova que será alegria para todo o povo:
11 ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
11 hoje vos nasceu na Cidade de Davi um Salvador, que é o Cristo Senhor.
12 ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
12 Isto vos servirá de sinal: achareis um recém-nascido envolto em faixas e posto numa manjedoura.
13 ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
13 E subitamente ao anjo se juntou uma multidão do exército celeste, que louvava a Deus e dizia:
14 ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
14 Glória a Deus no mais alto dos céus e na terra paz aos homens, objetos da benevolência {divina}.
15 ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
15 Depois que os anjos os deixaram e voltaram para o céu, falaram os pastores uns com os outros: Vamos até Belém e vejamos o que se realizou e o que o Senhor nos manifestou.
16 ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊಂಡರು.
16 Foram com grande pressa e acharam Maria e José, e o menino deitado na manjedoura.
17 ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.
17 Vendo-o, contaram o que se lhes havia dito a respeito deste menino.
18 ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
18 Todos os que os ouviam admiravam-se das coisas que lhes contavam os pastores.
19 ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
19 Maria conservava todas estas palavras, meditando-as no seu coração.
20 ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
20 Voltaram os pastores, glorificando e louvando a Deus por tudo o que tinham ouvido e visto, e que estava de acordo com o que lhes fora dito.
21 ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
21 Completados que foram os oito dias para ser circuncidado o menino, foi-lhe posto o nome de Jesus, como lhe tinha chamado o anjo, antes de ser concebido no seio materno.
22 ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.
22 Concluídos os dias da sua purificação segundo a Lei de Moisés, levaram-no a Jerusalém para o apresentar ao Senhor,
23 (ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
23 conforme o que está escrito na lei do Senhor: Todo primogênito do sexo masculino será consagrado ao Senhor {Ex 13,2};
24 ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
24 e para oferecerem o sacrifício prescrito pela lei do Senhor, um par de rolas ou dois pombinhos.
25 ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
25 Ora, havia em Jerusalém um homem chamado Simeão. Este homem, justo e piedoso, esperava a consolação de Israel, e o Espírito Santo estava nele.
26 ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
26 Fora-lhe revelado pelo Espírito Santo que não morreria sem primeiro ver o Cristo do Senhor.
27 ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
27 Impelido pelo Espírito Santo, foi ao templo. E tendo os pais apresentado o menino Jesus, para cumprirem a respeito dele os preceitos da lei,
28 ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ--
28 tomou-o em seus braços e louvou a Deus nestes termos:
29 ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
29 Agora, Senhor, deixai o vosso servo ir em paz, segundo a vossa palavra.
30 ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
30 Porque os meus olhos viram a vossa salvação
31 ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
31 que preparastes diante de todos os povos,
32 ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
32 como luz para iluminar as nações, e para a glória de vosso povo de Israel.
33 ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು.
33 Seu pai e sua mãe estavam admirados das coisas que dele se diziam.
34 ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
34 Simeão abençoou-os e disse a Maria, sua mãe: Eis que este menino está destinado a ser uma causa de queda e de soerguimento para muitos homens em Israel, e a ser um sinal que provocará contradições,
35 ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
35 a fim de serem revelados os pensamentos de muitos corações. E uma espada transpassará a tua alma.
36 ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
36 Havia também uma profetisa chamada Ana, filha de Fanuel, da tribo de Aser; era de idade avançada.
37 ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
37 Depois de ter vivido sete anos com seu marido desde a sua virgindade, ficara viúva, e agora com oitenta e quatro anos não se apartava do templo, servindo a Deus noite e dia em jejuns e orações.
38 ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
38 Chegando ela à mesma hora, louvava a Deus e falava de Jesus a todos aqueles que em Jerusalém esperavam a libertação.
39 ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
39 Após terem observado tudo segundo a lei do Senhor, voltaram para a Galiléia, à sua cidade de Nazaré.
40 ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು.
40 O menino ia crescendo e se fortificava: estava cheio de sabedoria, e a graça de Deus repousava nele.
41 ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು.
41 Seus pais iam todos os anos a Jerusalém para a festa da Páscoa.
42 ಆತನು ಹನ್ನೆರಡು ವರುಷದವನಾಗಿದ್ದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಯೆರೂಸಲೇಮಿಗೆ ಹೋದರು.
42 Tendo ele atingido doze anos, subiram a Jerusalém, segundo o costume da festa.
43 ಅವರು ಆ ದಿವಸಗಳನ್ನು ಮುಗಿಸಿ ಕೊಂಡು ಹಿಂದಿರುಗುವಾಗ ಬಾಲಕನಾದ ಯೇಸುವು ಹಿಂದೆ ಯೆರೂಸಲೇಮಿನಲ್ಲಿಯೇ ಉಳಿದನು; ಅದು ಯೋಸೇಫನಿಗೂ ಆತನ ತಾಯಿಗೂ ತಿಳಿದಿರಲಿಲ್ಲ.
43 Acabados os dias da festa, quando voltavam, ficou o menino Jesus em Jerusalém, sem que os seus pais o percebessem.
44 ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.
44 Pensando que ele estivesse com os seus companheiros de comitiva, andaram caminho de um dia e o buscaram entre os parentes e conhecidos.
45 ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.
45 Mas não o encontrando, voltaram a Jerusalém, à procura dele.
46 ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
46 Três dias depois o acharam no templo, sentado no meio dos doutores, ouvindo-os e interrogando-os.
47 ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
47 Todos os que o ouviam estavam maravilhados da sabedoria de suas respostas.
48 ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
48 Quando eles o viram, ficaram admirados. E sua mãe disse-lhe: Meu filho, que nos fizeste?! Eis que teu pai e eu andávamos à tua procura, cheios de aflição.
49 ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
49 Respondeu-lhes ele: Por que me procuráveis? Não sabíeis que devo ocupar-me das coisas de meu Pai?
50 ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
50 Eles, porém, não compreenderam o que ele lhes dissera.
51 ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.
51 Em seguida, desceu com eles a Nazaré e lhes era submisso. Sua mãe guardava todas estas coisas no seu coração.
52 ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
52 E Jesus crescia em estatura, em sabedoria e graça, diante de Deus e dos homens.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 2, comparar traduções ou montar um estudo — tudo direto pelo WhatsApp.