Lucas 3
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
1 No décimo quinto ano do reinado de Tibério César, sendo Pôncio Pilatos governador da Judéia, Herodes tetrarca da Galiléia, seu irmão Filipe tetrarca da região da Ituréia e de Traconites, e Lisânias tetrarca de Abilene,
2 ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
2 sendo Anás e Caifás sumos sacerdotes, veio a palavra de Deus a João, filho de Zacarias, no deserto.
3 ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
3 E ele percorreu toda a circunvizinhança do Jordão, pregando o batismo de arrependimento para remissão de pecados;
4 ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
4 como está escrito no livro das palavras do profeta Isaías: Voz do que clama no deserto: Preparai o caminho do Senhor; endireitai as suas veredas.
5 ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
5 Todo vale se encherá, e se abaixará todo monte e outeiro; o que é tortuoso se endireitará, e os caminhos escabrosos se aplanarão;
6 ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
6 e toda a carne verá a salvação de Deus.
7 ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
7 João dizia, pois, às multidões que saíam para ser batizadas por ele: Raça de víboras, quem vos ensina a fugir da ira vindoura?
8 ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
8 Produzi, pois, frutos dignos de arrependimento; e não comeceis a dizer em vós mesmos: Temos por pai a Abrão; porque eu vos digo que até destas pedras Deus pode suscitar filhos a Abrão.
9 ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
9 Também já está posto o machado à raiz das árvores; toda árvore, pois, que não produz bom fruto, é cortada e lançada no fogo.
10 ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.
10 Ao que lhe perguntavam as multidões: Que faremos, pois?
11 ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
11 Respondia-lhes então: Aquele que tem duas túnicas, reparta com o que não tem nenhuma, e aquele que tem alimentos, faça o mesmo.
12 ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
12 Chegaram também uns publicanos para serem batizados, e perguntaram-lhe: Mestre, que havemos nós de fazer?
13 ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.
13 Respondeu-lhes ele: Não cobreis além daquilo que vos foi prescrito.
14 ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
14 Interrogaram-no também uns soldados: E nós, que faremos? Disse-lhes: A ninguém queirais extorquir coisa alguma; nem deis denúncia falsa; e contentai-vos com o vosso soldo.
15 ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
15 Ora, estando o povo em expectativa e arrazoando todos em seus corações a respeito de João, se porventura seria ele o Cristo,
16 ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
16 respondeu João a todos, dizendo: Eu, na verdade, vos batizo em água, mas vem aquele que é mais poderoso do que eu, de quem não sou digno de desatar a correia das alparcas; ele vos batizará no Espírito Santo e em fogo.
17 ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
17 A sua pá ele tem na mão para limpar bem a sua eira, e recolher o trigo ao seu celeiro; mas queimará a palha em fogo inextinguível.
18 ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.
18 Assim pois, com muitas outras exortações ainda, anunciava o evangelho ao povo.
19 ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
19 Mas o tetrarca Herodes, sendo repreendido por ele por causa de Herodias, mulher de seu irmão, e por todas as maldades que havia feito,
20 ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
20 acrescentou a todas elas ainda esta, a de encerrar João no cárcere.
21 ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
21 Quando todo o povo fora batizado, tendo sido Jesus também batizado, e estando ele a orar, o céu se abriu;
22 ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
22 e o Espírito Santo desceu sobre ele em forma corpórea, como uma pomba; e ouviu-se do céu esta voz: Tu és o meu Filho amado; em ti me comprazo.
23 ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
23 Ora, Jesus, ao começar o seu ministério, tinha cerca de trinta anos; sendo {como se cuidava} filho de José, filho de Eli;
24 ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು;
24 Eli de Matate, Matate de Levi, Levi de Melqui, Melqui de Janai, Janai de José,
25 ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು;
25 José de Matatias, Matatias de Amós, Amós de Naum, Naum de Esli, Esli de Nagai,
26 ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮೀಯ ಮಗನು; ಇವನು ಯೋಸೇಫನ ಮಗನು; ಇವನು ಯೂದನ ಮಗನು;
26 Nagai de Maate, Maate de Matatias, Matatias de Semei, Semei de Joseque, Joseque de Jodá,
27 ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾ ಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು;
27 Jodá de Joanã, Joanã de Resa, Resa de Zorobabel, Zorobabel de Salatiel, Salatiel de Neri,
28 ಇವನು ಮೆಲ್ಖಿಯ ಮಗನು; ಇವನು ಅದ್ದಿಯ ಮಗನು; ಇವನು ಕೊಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು;
28 Neri de Melqui, Melqui de Adi, Adi de Cosão, Cosão de Elmodã, Elmodão de Er,
29 ಇವನು ಯೋಸೇಯನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು;
29 Er de Josué, Josué de Eliézer, Eliézer de Jorim, Jorim de Matate, Matate de Levi,
30 ಇವನು ಸಿಮಿ ಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು;
30 Levi de Simeão, Simeão de Judá, Judá de José, José de Jonã, Jonã de Eliaquim,
31 ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
31 Eliaquim de Meleá, Meleá de Mená, Mená de Matatá, Matatá de Natã, Natã de Davi,
32 ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
32 Davi de Jessé, Jessé de Obede, Obede de Boaz, Boaz de Salá, Salá de Nasom,
33 ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
33 Nasom de Aminadabe, Aminadabe de Admim, Admim de Arni, Arni de Esrom, Esrom de Farés, Farés de Judá,
34 ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
34 Judá de Jacó, Jacó de Isaque, Isaque de Abraão, Abraão de Tará, Tará de Naor,
35 ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;
35 Naor de Seruque, Seruque de Ragaú, Ragaú de Faleque, Faleque de Eber, Eber de Salá,
36 ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
36 Salá de Cainã, Cainã de Arfaxade, Arfaxade de Sem, Sem de Noé, Noé de Lameque,
37 ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;
37 Lameque de Matusalém, Matusalém de Enoque, Enoque de Jarede, Jarede de Maleleel, Maleleel de Cainã,
38 ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
38 Cainã de Enos, Enos de Sete, Sete de Adão, e Adão de Deus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 3, comparar traduções ou montar um estudo — tudo direto pelo WhatsApp.