Lucas 7

Kannada Bible (GL_KANNADA) vs VC

Sair da comparação
VC Versão Católica
1 ತನ್ನ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ ಆತನು ಕಪೆರ್ನೌಮಿನಲ್ಲಿ ಪ್ರವೇಶಿಸಿದನು.
1 Tendo Jesus concluído todos os seus discursos ao povo que o escutava, entrou em Cafarnaum.
2 ಆಗ ಒಬ್ಬ ಶತಾಧಿಪತಿಗೆ ಪ್ರಿಯನಾಗಿದ್ದ ಆಳು ಅಸ್ವಸ್ಥನಾಗಿ ಸಾಯುವಹಾಗಿದ್ದನು.
2 Havia lá um centurião que tinha um servo a quem muito estimava e que estava à morte.
3 ಅವನು ಯೇಸುವಿನ ವಿಷಯ ಕೇಳಿದಾಗ ಆತನು ಬಂದು ತನ್ನ ಆಳನ್ನು ಗುಣ ಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಆತನ ಬಳಿಗೆ ಕಳುಹಿಸಿದನು.
3 Tendo ouvido falar de Jesus, enviou-lhe alguns anciãos dos judeus, rogando-lhe que o viesse curar.
4 ಅವರು ಯೇಸುವಿನ ಬಳಿಗೆ ಬಂದು ಆತನಿಗೆ ಒತ್ತಾಯ ಮಾಡಿ--ನೀನು (ಅವನ ಆಳನ್ನು) ಸ್ವಸ್ಥಮಾಡಬೇಕು; ಯಾಕಂದರೆ ಅವನು ಯೋಗ್ಯನಾಗಿದ್ದಾನೆ.
4 Aproximando-se eles de Jesus, rogavam-lhe encarecidamente: Ele bem merece que lhe faças este favor,
5 ಅವನು ನಮ್ಮ ಜನಾಂಗವನ್ನು ಪ್ರೀತಿಸುವದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ ಎಂದು ಬೇಡಿಕೊಂಡರು.
5 pois é amigo da nossa nação e foi ele mesmo quem nos edificou uma sinagoga.
6 ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
6 Jesus então foi com eles. E já não estava longe da casa, quando o centurião lhe mandou dizer por amigos seus: Senhor, não te incomodes tanto assim, porque não sou digno de que entres em minha casa;
7 ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು;
7 por isso nem me achei digno de chegar-me a ti, mas dize somente uma palavra e o meu servo será curado.
8 ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ
8 Pois também eu, simples subalterno, tenho soldados às minhas ordens; e digo a um: Vai ali! E ele vai; e a outro: Vem cá! E ele vem; e ao meu servo: Faze isto! E ele o faz.
9 ಯೇಸು ಇವುಗಳನ್ನು ಕೇಳಿದಾಗ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತಿರುಗಿಕೊಂಡು ತನ್ನನ್ನು ಹಿಂಬಾಲಿಸು ತ್ತಿದ್ದವರಿಗೆ--ಇಂಥ ದೊಡ್ಡ ನಂಬಿಕೆಯನ್ನು ನಾನು ಇಸ್ರಾಯೇಲಿನಲ್ಲಿ ಸಹ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.
9 Ouvindo estas palavras, Jesus ficou admirado. E, voltando-se para o povo que o ia seguindo, disse: Em verdade vos digo: nem mesmo em Israel encontrei tamanha fé.
10 ಕಳುಹಿಸಲ್ಪಟ್ಟವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಆಳು ಸ್ವಸ್ಥನಾಗಿರುವದನ್ನು ಕಂಡರು.
10 Voltando para a casa do centurião os que haviam sido enviados, encontraram o servo curado.
11 ಇದಾದ ಮೇಲೆ ಮಾರಣೆಯ ದಿನ ಆತನು ನಾಯಿನೆಂಬ ಪಟ್ಟಣಕ್ಕೆ ಹೋದನು. ಆಗ ಆತನ ಶಿಷ್ಯರಲ್ಲಿ ಅನೇಕರೂ ಬಹು ಜನರೂ ಆತನ ಸಂಗಡ ಹೋದರು.
11 No dia seguinte dirigiu-se Jesus a uma cidade chamada Naim. Iam com ele diversos discípulos e muito povo.
12 ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
12 Ao chegar perto da porta da cidade, eis que levavam um defunto a ser sepultado, filho único de uma viúva; acompanhava-a muita gente da cidade.
13 ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
13 Vendo-a o Senhor, movido de compaixão para com ela, disse-lhe: Não chores!
14 ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
14 E aproximando-se, tocou no esquife, e os que o levavam pararam. Disse Jesus: Moço, eu te ordeno, levanta-te.
15 ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
15 Sentou-se o que estivera morto e começou a falar, e Jesus entregou-o à sua mãe.
16 ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
16 Apoderou-se de todos o temor, e glorificavam a Deus, dizendo: Um grande profeta surgiu entre nós: Deus voltou os olhos para o seu povo.
17 ಆತನ ವಿಷಯವಾದ ಈ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು.
17 A notícia deste fato correu por toda a Judéia e por toda a circunvizinhança.
18 ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು.
18 Os discípulos de João referiram-lhe todas estas coisas.
19 ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.
19 E João chamou dois dos seus discípulos e enviou-os a Jesus, perguntando: És tu o que há de vir ou devemos esperar por outro?
20 ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
20 Chegando estes homens a ele, disseram: João Batista enviou-nos a ti, perguntando: És tu o que há de vir ou devemos esperar por outro?
21 ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
21 Ora, naquele momento Jesus havia curado muitas pessoas de enfermidades, de doenças e de espíritos malignos, e dado a vista a muitos cegos.
22 ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
22 Respondeu-lhes ele: Ide anunciar a João o que tendes visto e ouvido: os cegos vêem, os coxos andam, os leprosos ficam limpos, os surdos ouvem, os mortos ressuscitam, aos pobres é anunciado o Evangelho;
23 ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.
23 e bem-aventurado é aquele para quem eu não for ocasião de queda!
24 ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
24 Depois que se retiraram os mensageiros de João, ele começou a falar de João ao povo: Que fostes ver no deserto? Um caniço agitado pelo vento?
25 ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.
25 Mas que fostes ver? Um homem vestido de roupas finas? Mas os que vestem roupas preciosas e vivem no luxo estão nos palácios dos reis.
26 ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.
26 Mas, enfim, que fostes ver? Um profeta? Sim, digo-vos, e mais do que profeta.
27 ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
27 Este é aquele de quem está escrito: Eis que envio o meu mensageiro ante a tua face; ele preparará o teu caminho diante de ti {Ml 3,1}.
28 ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
28 Pois vos digo: entre os nascidos de mulher não há maior que João. Entretanto, o menor no Reino de Deus é maior do que ele.
29 ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
29 Ouvindo-o todo o povo, e mesmo os publicanos, deram razão a Deus, fazendo-se batizar com o batismo de João.
30 ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
30 Os fariseus, porém, e os doutores da lei, recusando o seu batismo, frustraram o desígnio de Deus a seu respeito.
31 ಕರ್ತನು--ಈ ಸಂತತಿಯವರನ್ನು ನಾನು ಯಾವದಕ್ಕೆ ಹೋಲಿಸಲಿ? ಮತ್ತು ಅವರು ಯಾವದಕ್ಕೆ ಹೋಲಿಕೆಯಾಗಿದ್ದಾರೆ?
31 A quem compararei os homens desta geração? Com quem se assemelham?
32 ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
32 São semelhantes a meninos que, sentados na praça, falam uns com os outros, dizendo: Tocamos a flauta e não dançastes; entoamos lamentações e não chorastes.
33 ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.
33 Pois veio João Batista, que nem comia pão nem bebia vinho, e dizeis: Ele está possuído do demônio.
34 ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
34 Veio o Filho do Homem, que come e bebe, e dizeis: Eis um comilão e beberrão, amigo dos publicanos e libertinos.
35 ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.
35 Mas a sabedoria foi justificada por todos os seus filhos.
36 ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
36 Um fariseu convidou Jesus a ir comer com ele. Jesus entrou na casa dele e pôs-se à mesa.
37 ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು
37 Uma mulher pecadora da cidade, quando soube que estava à mesa em casa do fariseu, trouxe um vaso de alabastro cheio de perfume;
38 ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
38 e, estando a seus pés, por detrás dele, começou a chorar. Pouco depois suas lágrimas banhavam os pés do Senhor e ela os enxugava com os cabelos, beijava-os e os ungia com o perfume.
39 ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
39 Ao presenciar isto, o fariseu, que o tinha convidado, dizia consigo mesmo: Se este homem fosse profeta, bem saberia quem e qual é a mulher que o toca, pois é pecadora.
40 ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
40 Então Jesus lhe disse: Simão, tenho uma coisa a dizer-te. Fala, Mestre, disse ele.
41 ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
41 Um credor tinha dois devedores: um lhe devia quinhentos denários e o outro, cinqüenta.
42 ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.
42 Não tendo eles com que pagar, perdoou a ambos a sua dívida. Qual deles o amará mais?
43 ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.
43 Simão respondeu: A meu ver, aquele a quem ele mais perdoou. Jesus replicou-lhe: Julgaste bem.
44 ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
44 E voltando-se para a mulher, disse a Simão: Vês esta mulher? Entrei em tua casa e não me deste água para lavar os pés; mas esta, com as suas lágrimas, regou-me os pés e enxugou-os com os seus cabelos.
45 ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.
45 Não me deste o ósculo; mas esta, desde que entrou, não cessou de beijar-me os pés.
46 ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.
46 Não me ungiste a cabeça com óleo; mas esta, com perfume, ungiu-me os pés.
47 ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
47 Por isso te digo: seus numerosos pecados lhe foram perdoados, porque ela tem demonstrado muito amor. Mas ao que pouco se perdoa, pouco ama.
48 ಆತನು ಆಕೆಗೆ--ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
48 E disse a ela: Perdoados te são os pecados.
49 ಆತನ ಸಂಗಡ ಊಟಕ್ಕೆ ಕೂತವರು ತಮ್ಮೊಳಗೆ--ಪಾಪಗಳನ್ನು ಸಹ ಕ್ಷಮಿಸುವದಕ್ಕೆ ಈತನು ಯಾರು ಎಂದು ತಮ್ಮಲ್ಲಿ ಅಂದುಕೊಳ್ಳಲಾರಂಭಿಸಿದರು.
49 Os que estavam com ele à mesa começaram a dizer, então: Quem é este homem que até perdoa pecados?
50 ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
50 Mas Jesus, dirigindo-se à mulher, disse-lhe: Tua fé te salvou; vai em paz.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Lucas 7, comparar traduções ou montar um estudo — tudo direto pelo WhatsApp.