Lucas 9
Kannada Bible (GL_KANNADA) vs NAA
NAA Nova Almeida Atualizada 2017
1 ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
1 Tendo Jesus convocado os doze, deu-lhes poder e autoridade sobre todos os demônios e para curar doenças.
2 ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
2 Também os enviou a pregar o Reino de Deus e a curar os enfermos.
3 ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
3 E disse-lhes:
4 ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
4 Na casa em que vocês entrarem, fiquem ali até saírem daquele lugar.
5 ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
5 E onde quer que não receberem vocês, ao saírem daquela cidade sacudam o pó dos pés em testemunho contra eles.
6 ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
6 Então, saindo, percorriam todas as aldeias, anunciando o evangelho e fazendo curas por toda parte.
7 ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.
7 Ora, o tetrarca Herodes soube de tudo o que se passava e ficou perplexo, porque alguns diziam: “João ressuscitou dentre os mortos.”
8 ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು.
8 Outros diziam: “Elias apareceu.” E ainda outros diziam: “Um dos antigos profetas ressuscitou.”
9 ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
9 Herodes, porém, disse: — Eu mandei decapitar João. Quem, então, é este a respeito do qual tenho ouvido tais coisas? E se esforçava para vê-lo.
10 ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
10 Ao regressarem, os apóstolos relataram a Jesus tudo o que tinham feito. Ele, levando-os consigo, retirou-se à parte para uma cidade chamada Betsaida.
11 ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
11 Mas as multidões souberam disso e o seguiram. Acolhendo-as, Jesus lhes falava a respeito do Reino de Deus e socorria os que tinham necessidade de cura.
12 ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.
12 Mas o dia estava chegando ao fim. Então os doze se aproximaram de Jesus e disseram: — Despeça a multidão, para que, indo às aldeias e campos ao redor, se hospedem e encontrem alimento; pois estamos aqui em lugar deserto.
13 ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
13 Jesus, porém, lhes disse: Os discípulos responderam: — Não temos mais que cinco pães e dois peixes, a não ser que nós mesmos vamos e compremos comida para todo este povo.
14 ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.
14 Porque estavam ali cerca de cinco mil homens. Então Jesus disse aos seus discípulos:
15 ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.
15 Eles atenderam, fazendo com que todos se assentassem.
16 ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
16 E Jesus, pegando os cinco pães e os dois peixes, erguendo os olhos para o céu, os abençoou, partiu e deu aos discípulos para que os distribuíssem entre o povo.
17 ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
17 Todos comeram e se fartaram; e dos pedaços que sobraram foram recolhidos doze cestos.
18 ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
18 E aconteceu que, enquanto Jesus estava orando em particular, achavam-se presentes os discípulos, a quem perguntou:
19 ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
19 Eles responderam: — Uns dizem que é João Batista; outros dizem que é Elias; e ainda outros dizem que um dos antigos profetas ressuscitou.
20 ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
20 Então Jesus perguntou: Respondendo, Pedro disse: — O Cristo de Deus.
21 ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
21 Jesus, porém, advertindo-os, mandou que a ninguém declarassem tal coisa,
22 ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
22 dizendo:
23 ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
23 Jesus dizia a todos:
24 ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
24 Pois quem quiser salvar a sua vida a perderá; e quem perder a vida por minha causa, esse a salvará.
25 ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
25 De que adianta uma pessoa ganhar o mundo inteiro, se vier a perder-se ou causar dano a si mesma?
26 ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
26 Pois quem se envergonhar de mim e das minhas palavras, dele se envergonhará o Filho do Homem, quando vier na sua glória e na glória do Pai e dos santos anjos.
27 ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
27 Em verdade lhes digo que alguns dos que aqui se encontram não passarão pela morte até que vejam o Reino de Deus.
28 ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
28 Cerca de oito dias depois de proferidas estas palavras, Jesus levou consigo Pedro, João e Tiago e subiu ao monte com o propósito de orar.
29 ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
29 E aconteceu que, enquanto ele orava, a aparência do seu rosto se transfigurou e a roupa dele ficou de um branco brilhante.
30 ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.
30 E eis que dois homens falavam com ele: eram Moisés e Elias,
31 ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
31 que apareceram em glória e falavam da morte de Jesus, que ele estava para cumprir em Jerusalém.
32 ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
32 Pedro e seus companheiros estavam caindo de sono; mas, conservando-se acordados, viram a glória de Jesus e os dois homens que estavam com ele.
33 ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
33 Quando estes começaram a se afastar de Jesus, Pedro lhe disse: — Mestre, bom é estarmos aqui. Façamos três tendas: uma para o senhor, outra para Moisés e outra para Elias. Porém, Pedro não sabia o que estava dizendo.
34 ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು.
34 Enquanto assim falava, veio uma nuvem e os envolveu. E ficaram com medo ao entrar na nuvem.
35 ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
35 E dela veio uma voz que dizia: — Este é o meu Filho, o meu eleito; escutem o que ele diz!
36 ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
36 Depois daquela voz, perceberam que Jesus estava sozinho. Eles ficaram calados e, naqueles dias, não contaram nada a ninguém a respeito do que tinham visto.
37 ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
37 No dia seguinte, quando eles desceram do monte, uma grande multidão veio ao encontro de Jesus.
38 ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
38 E eis que, do meio da multidão, surgiu um homem, dizendo em alta voz: — Mestre, peço que o senhor olhe o meu filho, porque é o único que tenho.
39 ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
39 Um espírito se apodera dele, e, de repente, o menino grita, e o espírito o convulsiona até espumar; e dificilmente o deixa, depois de o ter maltratado.
40 ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
40 Pedi aos seus discípulos que o expulsassem, mas eles não puderam.
41 ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
41 Jesus exclamou:
42 ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
42 Quando o menino estava se aproximando, o demônio o atirou no chão e o convulsionou; mas Jesus repreendeu o espírito imundo, curou o menino e o entregou ao pai.
43 ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ--
43 E todos ficaram maravilhados com a majestade de Deus. Como todos estavam admirados com tudo o que Jesus fazia, ele disse aos seus discípulos:
44 ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
44 — Prestem bem atenção nas seguintes palavras: o Filho do Homem está para ser entregue nas mãos dos homens.
45 ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
45 Eles, porém, não entendiam isso, e lhes foi encoberto para que não o compreendessem. E temiam fazer perguntas a Jesus a respeito deste assunto.
46 ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
46 Surgiu entre os discípulos uma discussão sobre qual deles seria o maior.
47 ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
47 Mas Jesus, sabendo o que se passava no coração deles, pegou uma criança, colocou-a junto de si
48 ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
48 e lhes disse:
49 ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
49 João tomou a palavra e disse: — Mestre, vimos certo homem que expulsava demônios em seu nome, mas nós o proibimos de fazer isso, porque não segue conosco.
50 ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
50 Mas Jesus lhe disse:
51 ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
51 E aconteceu que, ao se completarem os dias em que seria elevado ao céu, Jesus manifestou, no semblante, a firme resolução de ir para Jerusalém.
52 ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
52 E enviou mensageiros que fossem na frente. Indo eles, entraram numa aldeia de samaritanos para lhe preparar pousada.
53 ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
53 Mas não o receberam, porque o aspecto dele era de quem, decisivamente, ia para Jerusalém.
54 ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
54 Vendo isto, os discípulos Tiago e João perguntaram: — Senhor, quer que mandemos descer fogo do céu para os consumir?
55 ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
55 Mas Jesus, voltando-se, os repreendeu.
56 ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
56 E seguiram para outra aldeia.
57 ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
57 Enquanto seguiam pelo caminho, alguém disse a Jesus: — Vou segui-lo para onde quer que o senhor for.
58 ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
58 Mas Jesus lhe respondeu:
59 ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.
59 A outro Jesus disse: Mas ele respondeu: — Senhor, deixe-me ir primeiro sepultar o meu pai.
60 ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
60 Mas Jesus insistiu:
61 ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.
61 Outro lhe disse: — Senhor, quero segui-lo, mas permita que antes disso eu me despeça das pessoas da minha casa.
62 ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
62 Mas Jesus lhe respondeu:
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Lucas 9, comparar traduções ou montar um estudo — tudo direto pelo WhatsApp.