Levítico 13

Kannada Bible (GL_KANNADA) vs VC

Sair da comparação
VC Versão Católica
1 ತರುವಾಯ ಕರ್ತನು ಮೋಶೆ ಆರೋನರೊಡನೆ ಮಾತನಾಡಿ ಹೇಳಿದ್ದೇನಂದರೆ
1 O Senhor disse a Moisés e a Aarão:
2 ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.
2 "Quando um homem tiver um tumor, uma inflamação ou uma mancha branca na pele de seu corpo, e esta se tornar em sua pele uma chaga de lepra, ele será levado a Aarão, o sacerdote, ou a um dos seus filhos sacerdotes.
3 ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
3 O sacerdote examinará o mal que houver na pele do corpo: se o cabelo se tornou branco naquele lugar, e a chaga parecer mais funda que a pele, será uma chaga de lepra. O sacerdote verificará o fato e declarará impuro o homem.
4 ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು.
4 Se houver na pele de seu corpo uma mancha branca que não parecer mais funda que a pele sã, e o cabelo não se tiver tornado branco, o sacerdote isolará o doente durante sete dias.
5 ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು.
5 No sétimo dia examinará: se a chaga parecer não ter progredido e não se tiver estendido pela pele, isolá-lo-á uma segunda vez durante sete dias.
6 ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.
6 No sétimo dia o sacerdote o examinará novamente: se a parte afetada perdeu a sua cor e não se tiver estendido por sobre a pele, declará-lo-á puro; é dartro. O homem lavará suas vestes e será puro.
7 ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.
7 Mas se o dartro se tiver estendido por sobre a pele, depois de se ter mostrado ao sacerdote para ser declarado puro, se lhe mostrará uma segunda vez.
8 ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು.
8 Se o sacerdote verificar a extensão do dartro por sobre a pele, declará-lo-á impuro: é lepra.
9 ಕುಷ್ಠರೋಗವು ಮನುಷ್ಯನಲ್ಲಿ ಇರುವದಾದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರ ಬೇಕು.
9 " Quando um homem for atingido pela lepra, será conduzido ao sacerdote, que o examinará.
10 ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ
10 Se houver na sua pele um tumor branco, e este tiver branqueado o cabelo, e aparecer a carne viva no tumor,
11 ಅದು ಅವನ ಶರೀರದ ಚರ್ಮದಲ್ಲಿ ಒಂದು ಹಳೇ ಕುಷ್ಠವಾಗಿರುವದು. ಆಗ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು ಮತ್ತು ಅವನನ್ನು ಮುಚ್ಚಿಡಬಾರದು, ಅವನು ಅಶುದ್ಧನಾಗಿರುವನು.
11 é lepra inveterada na pele de seu corpo; o sacerdote o declarará impuro; não o encerrará, porque é imundo.
12 ಕುಷ್ಠವು ಒಡೆದು ಚರ್ಮದ ಹೊರಗೆ ಹರಡಿ ಕೊಂಡಿದ್ದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಅವನ ಪಾದದ ವರೆಗೂ ಹರಡಿರುವದನ್ನು ಯಾಜಕನು ಎಲ್ಲಿಯಾದರೂ ನೋಡಿದರೆ
12 Se a chaga se estendeu por toda a pele do doente, da cabeça aos pés, o sacerdote que o examinar, verificando, segundo o que viu,
13 ಆಗ ಯಾಜಕನು ಅದನ್ನು ಗಮನಿಸಬೇಕು; ಇಗೋ, ಕುಷ್ಠವು ಅವನ ಮೈಯೆಲ್ಲವನ್ನು ಹರಡಿಕೊಂಡು ಶುದ್ಧನಾಗಿ ರುವನೆಂದು ಯಾಜಕನು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವದರಿಂದ ಅವನು ಶುದ್ಧನಾಗಿರು ವನೆಂದು
13 que a lepra cobre toda a pele, o declarará puro. Como se tornou completamente branco, é puro.
14 ಆದರೆ ಹಸಿಮಾಂಸವು ಅವನಲ್ಲಿ ಕಾಣಿಸಿ ಕೊಂಡರೆ ಅವನು ಅಶುದ್ಧನಾಗುವನು.
14 Mas no dia em que se perceber nele a carne viva, será impuro;
15 ಯಾಜ ಕನು ಹಸಿಮಾಂಸವನ್ನು ನೋಡಿ ಅವನು ಅಶುದ್ಧನೆಂದು ನುಡಿಯಬೇಕು; ಹಸಿಮಾಂಸವು ಅಶುದ್ಧವಾದದ್ದು, ಅದು ಕುಷ್ಠವೇ.
15 o sacerdote, vendo a carne viva, declará-lo-á impuro; a carne viva é impura; é a lepra.
16 ಇಲ್ಲವೆ ಹಸಿಮಾಂಸವು ಮತ್ತೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
16 Se a carne viva mudar e ficar de novo branca, o homem irá ao sacerdote, que o examinará;
17 ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ.
17 se a chaga se tornou verdadeiramente branca, o sacerdote declará-lo-á puro: e ele o é.
18 ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ
18 Quando um homem tiver tido na pele de seu corpo uma úlcera que foi curada,
19 ಆ ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು.
19 e no lugar da úlcera aparecer um tumor branco ou uma mancha de um branco-avermelhado, esse homem se apresentará ao sacerdote para ser examinado.
20 ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.
20 Se a mancha parecer mais funda que a pele, e o cabelo se tiver tornado branco, o sacerdote declará-lo-á impuro: é uma chaga de lepra que nasceu na úlcera.
21 ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು.
21 Mas, se o sacerdote verificar que não há cabelo branco na mancha, e ela não parecer mais funda que a pele, e se tiver tornado de uma cor pálida, isolará esse homem durante sete dias.
22 ಅದು ಚರ್ಮದ ಹೊರ ಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು, ಅದು ರೋಗವೇ.
22 Se a mancha se estender por sobre a pele, o sacerdote declarará o homem impuro: é uma chaga de lepra.
23 ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
23 Mas, se a mancha ficou no seu lugar sem se estender, é a cicatriz da úlcera; o sacerdote declará-lo-á puro.
24 ಇಲ್ಲವೆ ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಹಸಿಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಮಚ್ಚೆಯಾಗಿದ್ದರೆ
24 Quando um homem tiver na pele uma queimadura de fogo, e a cicatriz dessa queimadura apresentar uma mancha branca ou de um branco-avermelhado, o sacerdote o examinará.
25 ಯಾಜಕನು ಆಗ ಅದನ್ನು ನೋಡ ಬೇಕು. ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡು ವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆ ಯಿಂದ ಒಡೆದ ಕುಷ್ಠವಾಗಿರುವದು; ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಕುಷ್ಠವ್ಯಾಧಿಯೇ.
25 Se o cabelo se tornou branco na mancha, e esta parecer mais funda que a pele, é a lepra que nasceu na queimadura; o sacerdote declará-lo-á impuro: é uma chaga de lepra.
26 ಆದರೆ ಯಾಜಕನು ಅದನ್ನು ನೋಡಿದಾಗ ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೊಬ್ಬಾಗಿದ್ದರೆ ಯಾಜಕನು ಆಗ ಅವನನ್ನು ಏಳು ದಿನಗಳು ಮುಚ್ಚಿಡಬೇಕು.
26 Se o sacerdote verificar que não há cabelo branco na mancha, e que ela não parece mais funda que a pele, e se tiver tornado de uma cor pálida, isolará esse homem durante sete dias.
27 ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ಹೇಳಬೇಕು, ಅದು ಕುಷ್ಠ ವ್ಯಾಧಿಯೇ.
27 Depois disso o examinará. Se a mancha tiver se estendido por sobre a pele, o sacerdote declará-lo-á impuro; é uma chaga de lepra.
28 ಆ ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು.
28 Mas, se a mancha ficou no mesmo lugar sem se estender por sobre a pele, e se tiver tornado de uma cor pálida, é o tumor da queimadura. O sacerdote declará-lo-á puro, pois é a cicatriz da queimadura.
29 ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆ
29 Quando um homem ou uma mulher tiver uma chaga na cabeça ou no queixo, o sacerdote o examinará.
30 ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.
30 Se ela parecer mais funda que a pele, e nela houver os cabelos finos e amarelados, o sacerdote declarará impuro o enfermo: esta é a tinha, a lepra da cabeça ou do queixo
31 ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು.
31 Se o sacerdote averiguar que a chaga da tinha não parece mais funda que a pele, e nela não houver cabelos negros, o sacerdote isolará durante sete dias aquele que tem a chaga da tinha.
32 ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ
32 No sétimo dia o examinará. Se a tinha não se espalhou, nela não houver cabelo amarelado algum, e a chaga não parecer mais funda do que a pele,
33 ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು.
33 o enfermo cortará a barba, exceto no lugar da chaga, e o sacerdote o isolará de novo durante sete dias.
34 ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
34 No sétimo dia o examinará. Se a tinha não se espalhou por sobre a pele, e a chaga não parecer mais funda que a pele, o sacerdote declará-lo-á puro; ele levará suas vestes e será puro.
35 ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ
35 Se, entretanto, depois que o tiver declarado puro, a tinha se estender por sobre a pele, o sacerdote o examinará.
36 ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.
36 Se a tinha se tiver espalhado na pele, o sacerdote não procurará o cabelo amarelo, porque o homem é impuro
37 ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
37 Se a tinha lhe parece estacionária, e nela houver crescido cabelos negros, ele sarou; o homem está puro e o sacerdote declará-lo-á como tal.
38 ಒಬ್ಬ ಪುರುಷನಿಗಾಗಲಿ ಒಬ್ಬ ಸ್ತ್ರೀಗಾಗಲಿ ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಅಂದರೆ ಬಿಳಿಯ ಹೊಳಪಾದ ಮಚ್ಚೆಗಳು ಇದ್ದರೆ
38 Quando o homem ou mulher tiver na pele manchas brancas, o sacerdote o examinará.
39 ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು.
39 Se essas manchas na pele são de um branco pálido, é uma mancha branca superficial: ele é puro.
40 ಪುರುಷನ ತಲೆಯ ಕೂದಲು ಉದುರಿಹೋದರೆ ಅವನು ಬೋಳು ತಲೆಯವನು, ಆದಾಗ್ಯೂ ಅವನು ಶುದ್ಧನಾಗಿರುವನು.
40 Quando um homem perder os seus cabelos, ele será simplesmente calvo, mas será puro.
41 ತನ್ನ ಮುಂದಲೆಯ ಕೂದಲು ಉದುರಿಹೋಗಿದ್ದರೂ ಅವನು ಪಟ್ಟೆತಲೆಯವನಾ ದರೂ ಶುದ್ಧನೇ.
41 Se lhe caírem os cabelos da fronte, ele terá a fronte calva, mas será puro.
42 ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪಾದ ಮಚ್ಚೆಯಿದ್ದರೆ ಅದು ಹುಟ್ಟುತ್ತಿರುವ ಕುಷ್ಠವೇ.
42 Mas se na parte calva, posterior ou dianteira, se encontrar uma chaga de um branco-avermelhado, é a lepra que se declarou na parte calva posterior ou dianteira.
43 ಆಗ ಯಾಜಕನು ಅವನನ್ನು ನೋಡಬೇಕು ಇಗೋ, ಅವನ ಬೋಳು ತಲೆಯಲ್ಲಾಗಲಿ ಪಟ್ಟೆತಲೆಯಲ್ಲಾಗಲಿ ಏಳುತ್ತಿರುವ ಆ ಮಚ್ಚೆಯು ಬಿಳುಪಾಗಿ ಕೆಂಪಾಗಿದ್ದರೆ ಶರೀರದ ಚರ್ಮ ದಲ್ಲಿ ಇರುವ ಕುಷ್ಠದ ಹಾಗಿದ್ದರೆ ಕುಷ್ಠರೋಗಿ ಎಂದೂ ಅಶುದ್ಧನೆಂದೂ
43 O sacerdote o examinará. Se o tumor da chaga for de um branco-avermelhado na parte calva posterior ou dianteira, tendo o aspecto da lepra da pele do corpo, esse homem é leproso,
44 ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.
44 é impuro; a sua lepra está na cabeça.
45 ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.
45 Todo homem atingido pela lepra terá suas vestes rasgadas e a cabeça descoberta. Cobrirá a barba e clamará: Impuro! Impuro!
46 ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
46 Enquanto durar o seu mal, ele será impuro. É impuro; habitará só, e a sua habitação será fora do acampamento."
47 ಕುಷ್ಠವ್ಯಾಧಿಯು ಅವನ ಉಡುಪಿನಲ್ಲಿದ್ದರೆ ಅದು ಉಣ್ಣೆಯ ಉಡುಪಾಗಲಿ ನಾರಿನ ಉಡುಪಾಗಲಿ
47 "Quando a lepra aparecer numa veste de lã ou de linho,
48 ಉಣ್ಣೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮ ದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನ ಲ್ಲಾಗಲಿ
48 num tecido de tela ou de trama, quer seja de lã quer de linho, numa pele ou num objeto qualquer de pele,
49 ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು.
49 se a mancha na veste, na pele, no tecido de tela ou de trama ou no objeto de pele, for esverdeada ou avermelhada, é uma lepra: será mostrada ao sacerdote.
50 ಯಾಜಕನು ವ್ಯಾಧಿಯನ್ನು ನೋಡಿ ಅದನ್ನು ಏಳು ದಿನಗಳು ಮುಚ್ಚಿಡಬೇಕು:
50 O sacerdote examinará a mancha e isolará durante sete dias o objeto atingido pelo mal.
51 ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು.
51 No sétimo dia examinará a chaga. Se ela se tiver espalhado pela veste, pelo tecido de tela ou de trama, pela pele ou pelo objeto de pele, seja qual for, é uma lepra roedora; o objeto é impuro.
52 ಆದದರಿಂದ ಅವನು ವ್ಯಾಧಿಯಿ ರುವ ಆ ಉಡುಪುಗಳನ್ನು ಅಂದರೆ ಅದು ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಉಣ್ಣೆಯಲ್ಲಾಗಲಿ ನಾರಿನ ಲ್ಲಾಗಲಿ ಚರ್ಮದ ಯಾವ ವಸ್ತುವಿನಲ್ಲಾಗಲಿ ವ್ಯಾಧಿ ಯಿದೆಯೋ ಅದನ್ನು ಬೆಂಕಿಯಿಂದ ಸುಡಬೇಕು; ಅದು ಕೆಟ್ಟ ಕುಷ್ಠವು,
52 Queimará a veste, o tecido de tela ou de trama de linho ou de lã, o objeto de pele, seja qual for, em que se encontre a mancha, porque é uma lepra roedora; o objeto será queimado no fogo.
53 ಯಾಜಕನು ನೋಡಿದಾಗ ಇಗೋ, ಆ ವ್ಯಾಧಿಯು ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮದ ವಸ್ತುಗಳಲ್ಲಾಗಲಿ ಹರಡ ದಿದ್ದರೆ
53 Mas se o sacerdote verificar que mancha não se espalhou pela veste, pelo tecido de tela ou de trama, ou pelo objeto de pele,
54 ಯಾಜಕನು ಆ ವ್ಯಾಧಿಯಿರುವವನನ್ನು ತೊಳೆದುಕೊಳ್ಳುವಂತೆ ಆಜ್ಞಾಪಿಸಿ ಅದನ್ನು ಏಳು ದಿನ ಗಳು ಹೆಚ್ಚಾಗಿ ಮುಚ್ಚಿಡಬೇಕು.
54 mandará lavar o objeto afetado e o isolará uma segunda vez durante sete dias.
55 ಅದನ್ನು ತೊಳೆದಾದ ಮೇಲೆ ಯಾಜಕನು ಆ ವ್ಯಾಧಿಯನ್ನು ನೋಡಬೇಕು: ಇಗೋ, ವ್ಯಾಧಿಯು ತನ್ನ ಬಣ್ಣವನ್ನು ಬದಲಾಯಿಸದೆ ಹರಡದಿದ್ದರೆ ಅದು ಅಶುದ್ಧವಾಗಿರುವದು: ಅದು ಒಳಗಿನಿಂದಾಗಲಿ ಹೊರಗಿನಿಂದಾಗಲಿ ಒಳಗೆ ಕೊರೆ ಯುವದು. ನೀನು ಅದನ್ನು ಬೆಂಕಿಯಿಂದ ಸುಡಬೇಕು.
55 Em seguida examinará a mancha, depois que ela tiver sido lavada. Se não mudou de aspecto nem se espalhou, o objeto é impuro. Tu o queimarás no fogo: a mancha roeu o objeto de um lado a outro.
56 ಯಾಜಕನು ಅದನ್ನು ನೋಡಿದರೆ ಇಗೋ, ವ್ಯಾಧಿಯು ತೊಳೆಯಲ್ಪಟ್ಟ ನಂತರ ಸ್ವಲ್ಪ ಮೊಬ್ಬಾ ಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ ಚರ್ಮ ದಿಂದಾಗಲಿ ಹಾಸಿನಿಂದಾಗಲಿ ಹೊಕ್ಕಿನಿಂದಾಗಲಿ ಹರಿ ದುಹಾಕಬೇಕು.
56 Mas se o sacerdote verificar que a mancha lavada tomou uma cor pálida, arrancá-la-á da veste, da pele ou do tecido de tela ou de trama.
57 ಅದು ಬಟ್ಟೆಯಲ್ಲಾಗಲಿ ಹಾಸಿ ನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಚರ್ಮದ ಯಾವದರಲ್ಲಿಯಾಗಲಿ ಇನ್ನೂ ಕಂಡುಬಂದರೆ ಅದು ಹರಡುವ ವ್ಯಾಧಿ ಮತ್ತು ವ್ಯಾಧಿಯುಳ್ಳದ್ದನ್ನು ನೀನು ಬೆಂಕಿಯಿಂದ ಸುಡಬೇಕು.
57 Se ela voltar novamente à veste, ao tecido de tela ou de trama ou ao objeto de pele, é uma erupção de lepra. Tu queimarás no fogo o objeto atingido pela mancha.
58 ನೀನು ತೊಳೆದ ಮೇಲೆ ಆ ವ್ಯಾಧಿಯು ಯಾವದರಿಂದ ಹೊರಟು ಹೋಯಿತೋ ಆ ಬಟ್ಟೆಯನ್ನೂ ಹಾಸನ್ನೂ ಹೊಕ್ಕನ್ನೂ ಇಲ್ಲವೆ ಚರ್ಮದ ಯಾವದೇ ವಸ್ತುವನ್ನೂ ಎರಡನೆಯ ಸಾರಿ ತೊಳೆಯಬೇಕು, ಆಗ ಅದು ಶುದ್ಧವಾಗಿರುವದು.
58 Mas a veste, o tecido de tela ou de trama, o objeto de pele, seja o que for, que tiveres lavado e do qual a mancha tiver desaparecido, será lavado uma segunda vez e será puro.
59 ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
59 Tal é a lei relativa à mancha de lepra que atacar as vestes de lã ou de linho, os tecidos de tela ou de trama, ou qualquer objeto de pele; é segundo ela que se declararão esses objetos puros ou impuros."

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Levítico 13, comparar traduções ou montar um estudo — tudo direto pelo WhatsApp.