Levítico 19
Kannada Bible (GL_KANNADA) vs VC
VC Versão Católica
1 ಕರ್ತನು ಮೋಶೆಯೊಂದಿಗೆ ಮಾತನಾಡಿ--
1 O Senhor disse a Moisés:
2 ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
2 "Dirás a toda a assembléia de Israel o seguinte: sede santos, porque eu, o Senhor, vosso Deus, sou santo.
3 ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
3 Cada um de vós respeite a sua mãe e o seu pai, e guarde os meus sábados. Eu sou o Senhor, vosso Deus.
4 ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
4 Não vos volteis para os ídolos, e não façais para vós deuses de metal fundido. Eu sou o Senhor, vosso Deus.
5 ನೀವು ನಿಮ್ಮ ದೇವರಿಗೆ ಸಮಾಧಾನದ ಬಲಿಗಳ ಯಜ್ಞವನ್ನು ಸಮರ್ಪಿಸುವದಾದರೆ ನೀವು ಅದನ್ನು ಸ್ವಇಚ್ಛೆಯಿಂದ ಅರ್ಪಿಸಬೇಕು.
5 Quando oferecerdes ao Senhor um sacrifício pacífico, oferecê-lo-eis de maneira que seja aceito.
6 ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
6 Comer-se-á a vítima no mesmo dia ou no dia seguinte; o que sobrar no terceiro dia será queimado no fogo.
7 ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.
7 Se se comer dela no terceiro dia, será uma abominação: o sacrifício não será aceito.
8 ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
8 Quem o comer levará sua iniqüidade, porque terá profanado o que é consagrado ao Senhor: esse será cortado do seu povo.
9 ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.
9 Quando fizerdes a ceifa em vossa terra, não cortareis as espigas até os limites de vosso campo, e não recolhereis o que resta a respigar de vossas colheitas.
10 ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
10 Não respigareis tampouco a vossa vinha, nem colhereis os grãos caídos no campo; deixá-los-eis para o pobre e o estrangeiro. Eu sou o Senhor, vosso Deus.
11 ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
11 Não furtareis, não usareis de embustes nem de mentiras uns para com os outros.
12 ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು.
12 Não jurareis falso em meu nome, porque profanaríeis o nome de vosso Deus. Eu sou o Senhor.
13 ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
13 Não oprimirás o teu próximo, e não o despojarás. O salário do teu operário não ficará contigo até o dia seguinte.
14 ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
14 Não amaldiçoarás um surdo; não porás algo como tropeço diante do cego; mas temerás o teu Deus. Eu sou o Senhor.
15 ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
15 Não sereis injustos em vossos juízos: não favorecerás o pobre nem terás complacência com o grande; mas segundo a justiça julgarás o teu próximo.
16 ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
16 Não semearás a difamação no meio de teu povo, nem te apresentarás como testemunha contra a vida do teu próximo. Eu sou o Senhor.
17 ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
17 Não odiarás o teu irmão no teu coração. Repreenderás o teu próximo para que não incorras em pecado por sua causa.
18 ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
18 Não te vingarás; não guardarás rancor contra os filhos de teu povo. Amarás o teu próximo como a ti mesmo. Eu sou o Senhor.
19 ನೀನು ನನ್ನ ನಿಯಮಗಳನ್ನು ಕೈಕೊಳ್ಳಬೇಕು. ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ; ನಿನ್ನ ಹೊಲದಲ್ಲಿ ಮಿಶ್ರಿತವಾದ ಬೀಜಗಳನ್ನು ಬಿತ್ತಬೇಡ. ಇದಲ್ಲದೆ ನಾರೂ ಉಣ್ಣೆಯೂ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.
19 Guardareis os meus mandamentos. Não juntarás animais de espécies diferentes. Não semearás no teu campo grãos de espécies diferentes. Não usarás roupas tecidas de duas espécies de fios.
20 ಒಬ್ಬ ಗಂಡಸಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸು ವದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ ಇಲ್ಲವೆ ಅವಳಿಗೆ ಸ್ವಾತಂತ್ರ್ಯತೆ ಕೊಡ ದಿದ್ದರೆ ಅವಳು ಕೊರಡೆಯಿಂದ ಹೊಡೆಯಲ್ಪಡ ಬೇಕು; ಅವರಿಗೆ ಮರಣ ವಿಧಿಸಬಾರದು. ಯಾಕಂದರೆ ಅವಳು ಬಿಡುಗಡೆಯಾಗಿರಲಿಲ್ಲ.
20 Se um homem se deitar com uma mulher escrava desposada com outro, mas não resgatada nem posta em liberdade, serão ambos castigados, mas não morrerão, porque ela não era livre.
21 ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು.
21 Em expiação o homem oferecerá ao Senhor à entrada da tenda de reunião, um carneiro como sacrifício de reparação.
22 ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
22 O sacerdote fará por ele a expiação diante do Senhor com o carneiro do sacrifício de reparação pelo pecado cometido; e o seu pecado lhe será perdoado.
23 ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.
23 Quando entrardes na terra e tiverdes plantado toda sorte de árvores frutíferas considerareis os seus primeiros frutos como incircuncisos; eles o serão durante três anos, e não se comerá deles.
24 ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.
24 No quarto ano todos os seus frutos serão consagrados ao Senhor com ações de graças.
25 ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
25 No quinto ano comereis de seus frutos para que a árvore continue a produzi-los. Eu sou o Senhor, vosso Deus.
26 ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
26 Não comereis nada que contenha sangue. Não praticareis a adivinhação nem a magia.
27 ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
27 Não cortareis o cabelo em redondo, nem rapareis a barba pelos lados.
28 ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
28 Não fareis incisões na vossa carne por um morto, nem fareis figura alguma no vosso corpo. Eu sou o Senhor.
29 ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು.
29 Não prostituas tua filha, para que a terra não se entregue à prostituição e não se encha de crimes.
30 ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
30 Observareis meus sábados e respeitareis meu santuário. Eu sou o Senhor.
31 ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
31 Não vos dirijais aos espíritas nem aos adivinhos: não os consulteis, para que não sejais contaminados por eles. Eu sou o Senhor, vosso Deus.
32 ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
32 Levanta-te diante dos cabelos brancos; honra a pessoa do velho, e teme a teu Deus. Eu sou o Senhor.
33 ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.
33 Se um estrangeiro vier habitar convosco na vossa terra, não o oprimireis,
34 ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
34 mas esteja ele entre vós como um compatriota, e tu o amarás como a ti mesmo, porque fostes já estrangeiros no Egito. Eu sou o Senhor, vosso Deus.
35 ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
35 Não cometereis injustiça nos juízos, nem na vara, nem no peso, nem na medida.
36 ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.
36 Tereis balanças justas, pesos justos, um efá justo e um hin justo. Eu sou o Senhor, vosso Deus que vos tirei do Egito.
37 ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
37 Observareis todas as minhas leis e meus mandamentos, e os praticareis. Eu sou o Senhor".
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Levítico 19, comparar traduções ou montar um estudo — tudo direto pelo WhatsApp.