Levítico 1
Kannada Bible (GL_KANNADA) vs ARA
ARA Almeida Revista e Atualizada 1993
1 ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
1 Chamou o Senhor a Moisés e, da tenda da congregação, lhe disse:
2 ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
2 Fala aos filhos de Israel e dize-lhes: Quando algum de vós trouxer oferta ao Senhor , trareis a vossa oferta de gado, de rebanho ou de gado miúdo.
3 ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
3 Se a sua oferta for holocausto de gado, trará macho sem defeito; à porta da tenda da congregação o trará, para que o homem seja aceito perante o Senhor .
4 ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
4 E porá a mão sobre a cabeça do holocausto, para que seja aceito a favor dele, para a sua expiação.
5 ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
5 Depois, imolará o novilho perante o Senhor ; e os filhos de Arão, os sacerdotes, apresentarão o sangue e o aspergirão ao redor sobre o altar que está diante da porta da tenda da congregação.
6 ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು.
6 Então, ele esfolará o holocausto e o cortará em seus pedaços.
7 ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
7 E os filhos de Arão, o sacerdote, porão fogo sobre o altar e porão em ordem lenha sobre o fogo.
8 ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು;
8 Também os filhos de Arão, os sacerdotes, colocarão em ordem os pedaços, a saber, a cabeça e o redenho, sobre a lenha que está no fogo sobre o altar.
9 ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
9 Porém as entranhas e as pernas, o sacerdote as lavará com água; e queimará tudo isso sobre o altar; é holocausto, oferta queimada, de aroma agradável ao Senhor .
10 ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
10 Se a sua oferta for de gado miúdo, de carneiros ou de cabritos, para holocausto, trará macho sem defeito.
11 ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
11 E o imolará ao lado do altar, para o lado norte, perante o Senhor ; e os filhos de Arão, os sacerdotes, aspergirão o seu sangue em redor sobre o altar.
12 ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು.
12 Depois, ele o cortará em seus pedaços, como também a sua cabeça e o seu redenho; e o sacerdote os porá em ordem sobre a lenha que está no fogo sobre o altar;
13 ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
13 porém as entranhas e as pernas serão lavadas com água; e o sacerdote oferecerá tudo isso e o queimará sobre o altar; é holocausto, oferta queimada, de aroma agradável ao Senhor .
14 ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
14 Se a sua oferta ao Senhor for holocausto de aves, trará a sua oferta de rolas ou de pombinhos.
15 ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
15 O sacerdote a trará ao altar, e, com a unha, lhe destroncará a cabeça, sem a separar do pescoço, e a queimará sobre o altar; o seu sangue, ele o fará correr na parede do altar;
16 ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.
16 tirará o papo com suas penas e o lançará junto ao altar, para o lado oriental, no lugar da cinza;
17 ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
17 rasgá-la-á pelas asas, porém não a partirá; o sacerdote a queimará sobre o altar, em cima da lenha que está no fogo; é holocausto, oferta queimada, de aroma agradável ao Senhor .
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Levítico 1, comparar traduções ou montar um estudo — tudo direto pelo WhatsApp.