Levítico 9

Kannada Bible (GL_KANNADA) vs ARIB

Sair da comparação
ARIB Almeida Revisada Imprensa Bíblica
1 1 ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;
1 Ora, ao dia oitavo, Moisés chamou a Arão e seus filhos, e os anciãos de Israel,
2 ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
2 e disse a Arão: Toma um bezerro tenro para oferta pelo pecado, e um carneiro para holocausto, ambos sem defeito, e oferece-os perante o Senhor.
3 ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
3 E falarás aos filhos de Israel, dizendo: Tomai um bode para oferta pelo pecado; e um bezerro e um cordeiro, ambos de um ano, e sem defeito, como holocausto;
4 ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.
4 também um boi e um carneiro para ofertas pacíficas, para sacrificar perante o Senhor e oferta de cereais, amassada com azeite; porquanto hoje o Senhor vos aparecerá.
5 ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.
5 Então trouxeram até a entrada da tenda da revelação o que Moisés ordenara, e chegou-se toda a congregação, e ficou de pé diante do Senhor.
6 ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.
6 E disse Moisés: Esta é a coisa que o Senhor ordenou que fizésseis; e a glória do Senhor vos aparecerá.
7 ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.
7 Depois disse Moisés a Arão: Chega-te ao altar, e apresenta a tua oferta pelo pecado e o teu holocausto, e faze expiação por ti e pelo povo; também apresenta a oferta do povo, e faze expiação por ele, como ordenou o Senhor.
8 ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.
8 Arão, pois, chegou-se ao altar, e imolou o bezerro que era a sua própria oferta pelo pecado.
9 ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
9 Os filhos de Arão trouxeram-lhe o sangue; e ele molhou o dedo no sangue, e o pôs sobre as pontas do altar, e derramou o sangue à base do altar;
10 ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು.
10 mas a gordura, e os rins, e o redenho do fígado, tirados da oferta pelo pecado, queimou-os sobre o altar, como o Senhor ordenara a Moisés.
11 ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
11 E queimou ao fogo fora do arraial a carne e o couro.
12 ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
12 Depois imolou o holocausto, e os filhos de Arão lhe entregaram o sangue, e ele o espargiu sobre o altar em redor.
13 ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು.
13 Também lhe entregaram o holocausto, pedaço por pedaço, e a cabeça; e ele os queimou sobre o altar.
14 ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು.
14 E lavou a fressura e as pernas, e as queimou sobre o holocausto no altar.
15 ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು.
15 Então apresentou a oferta do povo e, tomando o bode que era a oferta pelo pecado do povo, imolou-o e o ofereceu pelo pecado, como fizera com o primeiro.
16 ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು.
16 Apresentou também o holocausto, e o ofereceu segundo a ordenança.
17 ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.
17 E apresentou a oferta de cereais e, tomando dela um punhado, queimou-o sobre o altar, além do holocausto da manhã.
18 ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
18 Imolou também o boi e o carneiro em sacrifício de oferta pacífica pelo povo; e os filhos de Arão entregaram-lhe o sangue, que ele espargiu sobre o altar em redor,
19 ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ
19 como também a gordura do boi e do carneiro, a cauda gorda, e o que cobre a fressura, e os rins, e o redenho do fígado;
20 ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು.
20 e puseram a gordura sobre os peitos, e ele queimou a gordura sobre o altar;
21 ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
21 mas os peitos e a coxa direita, ofereceu-os Arão por oferta movida perante o Senhor, como Moisés tinha ordenado.
22 ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
22 Depois Arão, levantando as mãos para o povo, o abençoou e desceu, tendo acabado de oferecer a oferta pelo pecado, o holocausto e as ofertas pacíficas.
23 ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.
23 E Moisés e Arão entraram na tenda da revelação; depois saíram, e abençoaram o povo; e a glória do Senhor apareceu a todo o povo,
24 ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
24 pois saiu fogo de diante do Senhor, e consumiu o holocausto e a gordura sobre o altar; o que vendo todo o povo, jubilaram e prostraram-se sobre os seus rostos.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Levítico 9, comparar traduções ou montar um estudo — tudo direto pelo WhatsApp.