Marcos 15
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
1 Logo de manhã tiveram conselho os principais sacerdotes com os anciãos, os escribas e todo o sinédrio; e maniatando a Jesus, o levaram e o entregaram a Pilatos.
2 ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು.
2 Pilatos lhe perguntou: És tu o rei dos judeus? Respondeu-lhe Jesus: É como dizes.
3 ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ.
3 e os principais dos sacerdotes o acusavam de muitas coisas.
4 ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.
4 Tornou Pilatos a interrogá-lo, dizendo: Não respondes nada? Vê quantas acusações te fazem.
5 ಆದರೂ ಯೇಸು ಉತ್ತರಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.
5 Mas Jesus nada mais respondeu, de maneira que Pilatos se admirava.
6 ಆ ಹಬ್ಬದಲ್ಲಿ ಜನರು ಬೇಡಿ ಕೊಂಡ ಒಬ್ಬ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು.
6 Ora, por ocasião da festa costumava soltar-lhes um preso qualquer que eles pedissem.
7 ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು.
7 E havia um, chamado Barrabás, preso com outros sediciosos, os quais num motim haviam cometido um homicídio.
8 ಆಗ ಜನಸಮೂಹವು ಗಟ್ಟಿಯಾಗಿ ಕೂಗುತ್ತಾ ಅವನು ತಮಗೆ ಯಾವಾಗಲೂ ಮಾಡಿದ ಪ್ರಕಾರ ಮಾಡ ಬೇಕೆಂದು ಬೇಡಿಕೊಳ್ಳಲಾರಂಭಿ ಸಿದರು.
8 E a multidão subiu e começou a pedir o que lhe costumava fazer.
9 ಆದರೆ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ ಎಂದು ಕೇಳಿದನು.
9 Ao que Pilatos lhes perguntou: Quereis que vos solte o rei dos judeus?
10 ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು.
10 Pois ele sabia que por inveja os principais sacerdotes lho haviam entregado.
11 ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು.
11 Mas os principais sacerdotes incitaram a multidão a pedir que lhes soltasse antes a Barrabás.
12 ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ--
12 E Pilatos, tornando a falar, perguntou-lhes: Que farei então daquele a quem chamais reis dos judeus?
13 ಆತನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಅವರು ಕೂಗಿ ಕೊಂಡರು.
13 Novamente clamaram eles: Crucifica-o!
14 ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
14 Disse-lhes Pilatos: Mas que mal fez ele? Ao que eles clamaram ainda mais: Crucifica-o!
15 ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
15 Então Pilatos, querendo satisfazer a multidão, soltou-lhe Barrabás; e tendo mandado açoitar a Jesus, o entregou para ser crucificado.
16 ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು.
16 Os soldados, pois, levaram-no para dentro, ao pátio, que é o pretório, e convocaram toda a corte;
17 ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು
17 vestiram-no de púrpura e puseram-lhe na cabeça uma coroa de espinhos que haviam tecido;
18 ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು.
18 e começaram a saudá-lo: Salve, rei dos judeus!
19 ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು.
19 Davam-lhe com uma cana na cabeça, cuspiam nele e, postos de joelhos, o adoravam.
20 ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
20 Depois de o terem assim escarnecido, despiram-lhe a púrpura, e lhe puseram as vestes. Então o levaram para fora, a fim de o crucificarem.
21 ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.
21 E obrigaram certo Simão, cireneu, pai de Alexandre e de Rufo, que por ali passava, vindo do campo, a carregar-lhe a cruz.
22 ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು.
22 Levaram-no, pois, ao lugar do Gólgota, que quer dizer, lugar da Caveira.
23 ಅವರು ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕುಡಿಯಲುಕೊಟ್ಟರು. ಆದರೆ ಆತನು ಅದನ್ನು ತೆಗೆದುಕೊಳ್ಳಲಿಲ್ಲ.
23 E ofereciam-lhe vinho misturado com mirra; mas ele não o tomou.
24 ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.
24 Então o crucificaram, e repartiram entre si as vestes dele, lançando sortes sobre elas para ver o que cada um levaria.
25 ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು.
25 E era a hora terceira quando o crucificaram.
26 ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು.
26 Por cima dele estava escrito o título da sua acusação: O REI DOS JUDEUS.
27 ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು.
27 Também, com ele, crucificaram dois salteadores, um à sua direita, e outro à esquerda.
28 ಆಗ--ಆತನು ಅಪರಾಧಿಗಳೊಂದಿಗೆ ಎಣಿಸಲ್ಪಟ್ಟನು ಎಂಬ ಬರಹವು ನೆರವೇರಿತು.
28 {E cumpriu-se a escritura que diz: E com os malfeitores foi contado.}
29 ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
29 E os que iam passando blasfemavam dele, meneando a cabeça e dizendo: Ah! tu que destróis o santuário e em três dias o reedificas.
30 ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದುಬಾ ಎಂದು ಹೇಳಿ ಆತನನು ದೂಷಿಸಿದರು.
30 salva-te a ti mesmo, descendo da cruz.
31 ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
31 De igual modo também os principais sacerdotes, com os escribas, escarnecendo-o, diziam entre si: A outros salvou; a si mesmo não pode salvar;
32 ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
32 desça agora da cruz o Cristo, o rei de Israel, para que vejamos e creiamos, Também os que com ele foram crucificados o injuriavam.
33 ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
33 E, chegada a hora sexta, houve trevas sobre a terra, até a hora nona.
34 ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
34 E, à hora nona, bradou Jesus em alta voz: Eloí, Eloí, lamá, sabactani? que, traduzido, é: Deus meu, Deus meu, por que me desamparaste?
35 ಹತ್ತಿರದಲ್ಲಿ ನಿಂತಿದ್ದ ಕೆಲವರು ಅದನ್ನು ಕೇಳಿ--ಇಗೋ, ಈತನು ಎಲೀಯ ನನ್ನು ಕರೆಯುತ್ತಾನೆ ಅಂದರು.
35 Alguns dos que ali estavam, ouvindo isso, diziam: Eis que chama por Elias.
36 ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.
36 Correu um deles, ensopou uma esponja em vinagre e, pondo-a numa cana, dava-lhe de beber, dizendo: Deixai, vejamos se Elias virá tirá-lo.
37 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
37 Mas Jesus, dando um grande brado, expirou.
38 ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.
38 Então o véu do santuário se rasgou em dois, de alto a baixo.
39 ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
39 Ora, o centurião, que estava defronte dele, vendo-o assim expirar, disse: Verdadeiramente este homem era filho de Deus.
40 ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
40 Também ali estavam algumas mulheres olhando de longe, entre elas Maria Madalena, Maria, mãe de Tiago o Menor e de José, e Salomé;
41 (ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
41 as quais o seguiam e o serviam quando ele estava na Galiléia; e muitas outras que tinham subido com ele a Jerusalém.
42 ಆಗ ಸಂಜೆಯಾಗಿತ್ತು; ಅದು ಸಬ್ಬತ್ತಿನ ಮುಂಚಿನ ಸಿದ್ಧತೆಯ ದಿವಸವಾಗಿತ್ತು.
42 Ao cair da tarde, como era o dia da preparação, isto é, a véspera do sábado,
43 ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
43 José de Arimatéia, ilustre membro do sinédrio, que também esperava o reino de Deus, cobrando ânimo foi Pilatos e pediu o corpo de Jesus.
44 ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು.
44 Admirou-se Pilatos de que já tivesse morrido; e chamando o centurião, perguntou-lhe se, de fato, havia morrido.
45 ಅವನು ಶತಾಧಿಪತಿಯಿಂದ ಅದನ್ನು ತಿಳಿದುಕೊಂಡ ಮೇಲೆ ಆ ದೇಹವನ್ನು ಯೊಸೇಫನಿಗೆ ಕೊಟ್ಟನು.
45 E, depois que o soube do centurião, cedeu o cadáver a José;
46 ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.
46 o qual, tendo comprado um pano de linho, tirou da cruz o corpo, envolveu-o no pano e o depositou num sepulcro aberto em rocha; e rolou uma pedra para a porta do sepulcro.
47 ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
47 E Maria Madalena e Maria, mãe de José, observavam onde fora posto.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Marcos 15, comparar traduções ou montar um estudo — tudo direto pelo WhatsApp.