Marcos 4
Kannada Bible (GL_KANNADA) vs NAA
NAA Nova Almeida Atualizada 2017
1 ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.
1 Jesus começou a ensinar outra vez à beira-mar. E uma numerosa multidão se reuniu em volta dele, de modo que entrou num barco, onde se assentou, afastando-se da praia. E todo o povo estava à beira-mar, na praia.
2 ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ--
2 Assim, ensinava-lhes muitas coisas por parábolas e, durante o seu ensino, dizia:
3 ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು.
3 — Escutem! Eis que o semeador saiu a semear.
4 ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಆಗ ಆಕಾಶದ ಪಕ್ಷಿಗಳು ಬಂದು ಅವುಗಳನ್ನು ನುಂಗಿಬಿಟ್ಟವು.
4 E, ao semear, uma parte caiu à beira do caminho, e vieram as aves e a comeram.
5 ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು;
5 Outra parte caiu em solo rochoso, onde a terra era pouca, e logo nasceu, visto não ser profunda a terra.
6 ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು;
6 Saindo, porém, o sol, a queimou; e, porque não tinha raiz, secou-se.
7 ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
7 Outra parte caiu entre os espinhos; e os espinhos cresceram e a sufocaram, e não deu fruto.
8 ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
8 Outra, enfim, caiu em boa terra e deu fruto; a semente brotou, cresceu e produziu a trinta, a sessenta e a cem por um.
9 ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
9 E Jesus acrescentou:
10 ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
10 Quando Jesus ficou só, os que estavam junto dele com os doze começaram a lhe fazer perguntas a respeito das parábolas.
11 ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
11 Jesus disse a eles:
12 ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
12 para que, vendo, vejam e não percebam; e, ouvindo, ouçam e não entendam; para que não venham a converter-se e sejam perdoados.
13 ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
13 Então Jesus lhes perguntou:
14 ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
14 O semeador semeia a palavra.
15 ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
15 Estes são os da beira do caminho, onde a palavra é semeada: quando a ouvem, logo Satanás vem e tira a palavra semeada neles.
16 ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
16 E estes são os semeados em solo rochoso, os quais, ouvindo a palavra, logo a recebem com alegria.
17 ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
17 Mas eles não têm raiz em si mesmos, sendo de pouca duração. Quando chega a angústia ou a perseguição por causa da palavra, logo se escandalizam.
18 ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ
18 Os outros, os semeados entre os espinhos, são os que ouvem a palavra,
19 ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.
19 mas as preocupações deste mundo, a fascinação da riqueza e outras ambições aparecem e sufocam a palavra, e ela fica infrutífera.
20 ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
20 Os que foram semeados em boa terra são aqueles que ouvem a palavra e a recebem, frutificando a trinta, a sessenta e a cem por um.
21 ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ?
21 Jesus também lhes disse:
22 ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
22 Porque não há nada oculto, senão para ser manifesto; e nada escondido, senão para ser revelado.
23 ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
23 Se alguém tem ouvidos para ouvir, ouça.
24 ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
24 Então lhes disse:
25 ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು.
25 Pois ao que tem, mais será dado; e, ao que não tem, até o que tem lhe será tirado.
26 ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.
26 Jesus disse ainda:
27 ಅವನು ರಾತ್ರಿ ಮಲಗುತ್ತಾ ಹಗಲು ಏಳುತ್ತಾ ಇರುವಾಗ ಹೇಗೆ ಆ ಬೀಜವು ಮೊಳೆತು ಬೆಳೆಯುವದೆಂದು ಅವನಿಗೆ ಗೊತ್ತಾಗುವದಿಲ್ಲವೋ ಹಾಗೆಯೇ ಇರುವದು.
27 Ele dorme e acorda, de noite e de dia, e a semente germina e cresce, sem que ele saiba como.
28 ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ.
28 A terra por si mesma frutifica: primeiro aparece a planta, depois, a espiga, e, por fim, o grão cheio na espiga.
29 ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ.
29 E, quando o fruto já está maduro, logo manda cortar com a foice, porque chegou a colheita.
30 ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?
30 Disse mais:
31 ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ.
31 Ele é como um grão de mostarda, que, quando semeado, é a menor de todas as sementes sobre a terra;
32 ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
32 mas, uma vez semeada, cresce e se torna maior do que todas as hortaliças; cria ramos tão grandes, que as aves do céu podem se aninhar à sua sombra.
33 ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
33 E com muitas parábolas semelhantes Jesus lhes expunha a palavra, conforme podiam compreendê-la.
34 ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
34 E sem parábolas não lhes falava; tudo, porém, explicava em particular aos seus próprios discípulos.
35 ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
35 Naquele dia, sendo já tarde, Jesus disse aos discípulos:
36 ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು.
36 E eles, despedindo a multidão, o levaram assim como estava, no barco; e outros barcos o seguiam.
37 ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
37 Ora, levantou-se grande temporal de vento, e as ondas se arremessavam contra o barco, de modo que o mesmo já estava se enchendo de água.
38 ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
38 E Jesus estava na popa, dormindo sobre o travesseiro. Os discípulos o acordaram e lhe disseram: — Mestre, o senhor não se importa que pereçamos?
39 ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
39 E ele, despertando, repreendeu o vento e disse ao mar: O vento se aquietou, e tudo ficou bem calmo.
40 ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.
40 Então Jesus lhes perguntou:
41 ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
41 E eles, possuídos de grande temor, diziam uns aos outros: — Quem é este que até o vento e o mar lhe obedecem?
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Marcos 4, comparar traduções ou montar um estudo — tudo direto pelo WhatsApp.