Marcos 5
Kannada Bible (GL_KANNADA) vs ARA
ARA Almeida Revista e Atualizada 1993
1 ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು.
1 Entrementes, chegaram à outra margem do mar, à terra dos gerasenos.
2 ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
2 Ao desembarcar, logo veio dos sepulcros, ao seu encontro, um homem possesso de espírito imundo,
3 ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು.
3 o qual vivia nos sepulcros, e nem mesmo com cadeias alguém podia prendê-lo;
4 ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.
4 porque, tendo sido muitas vezes preso com grilhões e cadeias, as cadeias foram quebradas por ele, e os grilhões, despedaçados. E ninguém podia subjugá-lo.
5 ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.
5 Andava sempre, de noite e de dia, clamando por entre os sepulcros e pelos montes, ferindo-se com pedras.
6 ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ --
6 Quando, de longe, viu Jesus, correu e o adorou,
7 ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
7 exclamando com alta voz: Que tenho eu contigo, Jesus, Filho do Deus Altíssimo? Conjuro-te por Deus que não me atormentes!
8 ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
8 Porque Jesus lhe dissera: Espírito imundo, sai desse homem!
9 ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
9 E perguntou-lhe: Qual é o teu nome? Respondeu ele: Legião é o meu nome, porque somos muitos.
10 ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು.
10 E rogou-lhe encarecidamente que os não mandasse para fora do país.
11 ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.
11 Ora, pastava ali pelo monte uma grande manada de porcos.
12 ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.
12 E os espíritos imundos rogaram a Jesus, dizendo: Manda-nos para os porcos, para que entremos neles.
13 ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
13 Jesus o permitiu. Então, saindo os espíritos imundos, entraram nos porcos; e a manada, que era cerca de dois mil, precipitou-se despenhadeiro abaixo, para dentro do mar, onde se afogaram.
14 ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು.
14 Os porqueiros fugiram e o anunciaram na cidade e pelos campos. Então, saiu o povo para ver o que sucedera.
15 ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
15 Indo ter com Jesus, viram o endemoninhado, o que tivera a legião, assentado, vestido, em perfeito juízo; e temeram.
16 ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.
16 Os que haviam presenciado os fatos contaram-lhes o que acontecera ao endemoninhado e acerca dos porcos.
17 ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.
17 E entraram a rogar-lhe que se retirasse da terra deles.
18 ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
18 Ao entrar Jesus no barco, suplicava-lhe o que fora endemoninhado que o deixasse estar com ele.
19 ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
19 Jesus, porém, não lho permitiu, mas ordenou-lhe: Vai para tua casa, para os teus. Anuncia-lhes tudo o que o Senhor te fez e como teve compaixão de ti.
20 ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
20 Então, ele foi e começou a proclamar em Decápolis tudo o que Jesus lhe fizera; e todos se admiravam.
21 ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
21 Tendo Jesus voltado no barco, para o outro lado, afluiu para ele grande multidão; e ele estava junto do mar.
22 ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
22 Eis que se chegou a ele um dos principais da sinagoga, chamado Jairo, e, vendo-o, prostrou-se a seus pés
23 ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
23 e insistentemente lhe suplicou: Minha filhinha está à morte; vem, impõe as mãos sobre ela, para que seja salva, e viverá.
24 ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.
24 Jesus foi com ele. Grande multidão o seguia, comprimindo-o.
25 ಆಗ ಹನ್ನೆರಡು ವರುಷಗಳಿಂದ ರಕ್ತಸ್ರಾವವಿದ್ದ ಒಬ್ಬ ಸ್ತ್ರೀಯು
25 Aconteceu que certa mulher, que, havia doze anos, vinha sofrendo de uma hemorragia
26 ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
26 e muito padecera à mão de vários médicos, tendo despendido tudo quanto possuía, sem, contudo, nada aproveitar, antes, pelo contrário, indo a pior,
27 ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.
27 tendo ouvido a fama de Jesus, vindo por trás dele, por entre a multidão, tocou-lhe a veste.
28 ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು.
28 Porque, dizia: Se eu apenas lhe tocar as vestes, ficarei curada.
29 ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
29 E logo se lhe estancou a hemorragia, e sentiu no corpo estar curada do seu flagelo.
30 ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು
30 Jesus, reconhecendo imediatamente que dele saíra poder, virando-se no meio da multidão, perguntou: Quem me tocou nas vestes?
31 ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.
31 Responderam-lhe seus discípulos: Vês que a multidão te aperta e dizes: Quem me tocou?
32 ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು.
32 Ele, porém, olhava ao redor para ver quem fizera isto.
33 ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
33 Então, a mulher, atemorizada e tremendo, cônscia do que nela se operara, veio, prostrou-se diante dele e declarou-lhe toda a verdade.
34 ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
34 E ele lhe disse: Filha, a tua fé te salvou; vai-te em paz e fica livre do teu mal.
35 ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
35 Falava ele ainda, quando chegaram alguns da casa do chefe da sinagoga, a quem disseram: Tua filha já morreu; por que ainda incomodas o Mestre?
36 ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
36 Mas Jesus, sem acudir a tais palavras, disse ao chefe da sinagoga: Não temas, crê somente.
37 ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
37 Contudo, não permitiu que alguém o acompanhasse, senão Pedro e os irmãos Tiago e João.
38 ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
38 Chegando à casa do chefe da sinagoga, viu Jesus o alvoroço, os que choravam e os que pranteavam muito.
39 ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
39 Ao entrar, lhes disse: Por que estais em alvoroço e chorais? A criança não está morta, mas dorme.
40 ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
40 E riam-se dele. Tendo ele, porém, mandado sair a todos, tomou o pai e a mãe da criança e os que vieram com ele e entrou onde ela estava.
41 ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
41 Tomando-a pela mão, disse: Talitá cumi!, que quer dizer: Menina, eu te mando, levanta-te!
42 ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.
42 Imediatamente, a menina se levantou e pôs-se a andar; pois tinha doze anos. Então, ficaram todos sobremaneira admirados.
43 ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
43 Mas Jesus ordenou-lhes expressamente que ninguém o soubesse; e mandou que dessem de comer à menina.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Marcos 5, comparar traduções ou montar um estudo — tudo direto pelo WhatsApp.