Marcos 8

Kannada Bible (GL_KANNADA) vs ARC

Sair da comparação
ARC Almeida Revista e Corrigida 2009
1 ಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ--
1 Naqueles dias, havendo mui grande multidão e não tendo o que comer, Jesus chamou a si os seus discípulos e disse-lhes:
2 ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ.
2 Tenho compaixão da multidão, porque há já três dias que estão comigo e não têm o que comer.
3 ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.
3 E, se os deixar ir em jejum para casa, desfalecerão no caminho, porque alguns deles vieram de longe.
4 ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು.
4 E os seus discípulos responderam-lhe: Donde poderá alguém satisfazê-los de pão aqui no deserto?
5 ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.
5 E perguntou-lhes: Quantos pães tendes? E disseram-lhe: Sete.
6 ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.
6 E ordenou à multidão que se assentasse no chão. E, tomando os sete pães e tendo dado graças, partiu- os e deu-os aos seus discípulos, para que os pusessem diante deles; e puseram- nos diante da multidão.
7 ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
7 Tinham também uns poucos peixinhos; e, tendo dado graças, ordenou que também lhos pusessem diante.
8 ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು.
8 E comeram e saciaram-se; e, dos pedaços que sobejaram, levantaram sete cestos.
9 ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.
9 E os que comeram eram quase quatro mil; e despediu-os.
10 ಕೂಡಲೆ ಆತನು ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿದಲ್ಮನೂಥ ಭಾಗಗಳಿಗೆ ಬಂದನು.
10 E, entrando logo no barco com os seus discípulos, foi para as regiões de Dalmanuta.
11 ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.
11 E saíram os fariseus e começaram a disputar com ele, pedindo-lhe, para o tentarem, um sinal do céu.
12 ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
12 E, suspirando profundamente em seu espírito, disse: Por que pede esta geração
13 ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು.
13 E, deixando-os, tornou a entrar no barco e foi para o outro lado.
14 ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ.
14 E eles se esqueceram de levar pão e no barco não tinham consigo senão um pão.
15 ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
15 E ordenou-lhes, dizendo: Olhai, guardai-vos do fermento dos fariseus e
16 ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.
16 E arrazoavam entre si, dizendo: É porque não temos pão.
17 ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
17 E Jesus, conhecendo isso, disse-lhes: Para que arrazoais, que não tendes pão? Não considerastes, nem compreendestes ainda? Tendes ainda o vosso coração endurecido?
18 ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
18 Tendo olhos, não vedes? E, tendo ouvidos, não ouvis? E não vos lembrais
19 ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.
19 quando parti os cinco pães entre os cinco mil, quantos cestos cheios de pedaços levantastes? Disseram-lhe: Doze.
20 ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.
20 E, quando E disseram-lhe: Sete.
21 ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
21 E ele lhes disse: Como não entendeis ainda?
22 ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
22 E chegou a Betsaida; e trouxeram-lhe um cego e rogaram-lhe que lhe tocasse.
23 ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
23 E, tomando o cego pela mão, levou-o para fora da aldeia; e, cuspindo-lhe nos olhos e impondo-lhe as mãos, perguntou-lhe se via alguma coisa.
24 ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು.
24 E, levantando ele os olhos, disse: Vejo os homens, pois os vejo como árvores que andam.
25 ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.
25 Depois, tornou a pôr-lhe as mãos nos olhos, e ele, olhando firmemente, ficou restabelecido e já via ao longe e distintamente a todos.
26 ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು.
26 E mandou-o para sua casa, dizendo: Não entres na aldeia.
27 ತರುವಾಯ ಯೇಸುವೂ ಆತನ ಶಿಷ್ಯರೂ ಕೈಸ ರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಆತನು ದಾರಿ ಯಲ್ಲಿ ತನ್ನ ಶಿಷ್ಯರಿಗೆ--ನಾನು ಯಾರೆಂದು ಜನರು ಅನ್ನುತ್ತಾರೆ ಎಂದು ಕೇಳಿದನು.
27 E saiu Jesus e os seus discípulos para as aldeias de Cesareia de Filipe; e, no caminho, perguntou aos seus discípulos, dizendo: Quem dizem os homens que eu sou?
28 ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
28 E eles responderam: João Batista; e outros, Elias; mas outros, um dos profetas.
29 ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು.
29 E ele lhes disse: Mas vós quem dizeis que eu sou? E, respondendo Pedro, lhe disse: Tu és o Cristo.
30 ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
30 E admoestou-os, para que a ninguém dissessem aquilo dele.
31 ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
31 E começou a ensinar-lhes que importava que o Filho do Homem padecesse muito, e que fosse rejeitado pelos anciãos, e pelos príncipes dos sacerdotes, e pelos escribas, e que fosse morto, mas que, depois de três dias, ressuscitaria.
32 ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
32 E dizia abertamente estas palavras. E Pedro o tomou à parte e começou a repreendê-lo.
33 ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
33 Mas ele, virando-se e olhando para os seus discípulos, repreendeu a Pedro, dizendo: Retira-te de diante de mim, Satanás; porque não compreendes as
34 ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
34 E, chamando a si a multidão, com os seus discípulos, disse-lhes: Se alguém quiser vir após mim, negue-se
35 ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
35 Porque qualquer que quiser salvar a sua vida perdê-la-á, mas qualquer que perder a sua vida por amor de mim e do evangelho, esse a salvará.
36 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
36 Pois que aproveitaria ao homem ganhar todo o mundo e perder a sua alma?
37 ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?
37 Ou que daria o homem pelo resgate da sua alma?
38 ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
38 Porquanto qualquer que, entre esta geração adúltera e pecadora, se envergonhar de mim e das minhas palavras, também o Filho do Homem se envergonhará dele, quando vier na glória de seu Pai, com os santos anjos.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Marcos 8, comparar traduções ou montar um estudo — tudo direto pelo WhatsApp.