Malaquias 3
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
1 Eis que eu envio o meu mensageiro, e ele há de preparar o caminho diante de mim; e de repente virá ao seu templo o Senhor, a quem vós buscais, e o anjo do pacto, a quem vós desejais; eis que ele vem, diz o Senhor dos exércitos.
2 ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
2 Mas quem suportará o dia da sua vinda? e quem subsistirá, quando ele aparecer? Pois ele será como o fogo de fundidor e como o sabão de lavandeiros;
3 ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
3 assentar-se-á como fundidor e purificador de prata; e purificará os filhos de Levi, e os refinará como ouro e como prata, até que tragam ao Senhor ofertas em justiça.
4 ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.
4 Então a oferta de Judá e de Jerusalém será agradável ao Senhor, como nos dias antigos, e como nos primeiros anos.
5 ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
5 E chegar-me-ei a vós para juízo; e serei uma testemunha veloz contra os feiticeiros, contra os adúlteros, contra os que juram falsamente, contra os que defraudam o trabalhador em seu salário, a viúva, e o órfão, e que pervertem o direito do estrangeiro, e não me temem, diz o Senhor dos exércitos.
6 ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.
6 Pois eu, o Senhor, não mudo; por isso vós, ó filhos de Jacó, não sois consumidos.
7 ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ.
7 Desde os dias de vossos pais vos desviastes dos meus estatutos, e não os guardastes. Tornai vós para mim, e eu tornarei para vós diz o Senhor dos exércitos. Mas vós dizeis: Em que havemos de tornar?
8 ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
8 Roubará o homem a Deus? Todavia vós me roubais, e dizeis: Em que te roubamos? Nos dízimos e nas ofertas alçadas.
9 ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.
9 Vós sois amaldiçoados com a maldição; porque a mim me roubais, sim, vós, esta nação toda.
10 ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
10 Trazei todos os dízimos à casa do tesouro, para que haja mantimento na minha casa, e depois fazei prova de mim, diz o Senhor dos exércitos, se eu não vos abrir as janelas do céu, e não derramar sobre vós tal bênção, que dela vos advenha a maior abastança.
11 ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
11 Também por amor de vós reprovarei o devorador, e ele não destruirá os frutos da vossa terra; nem a vossa vide no campo lançará o seu fruto antes do tempo, diz o Senhor dos exércitos.
12 ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
12 E todas as nações vos chamarão bem-aventurados; porque vós sereis uma terra deleitosa, diz o Senhor dos Exércitos.
13 ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
13 As vossas palavras foram agressivas para mim, diz o Senhor. Mas vós dizeis: Que temos falado contra ti?
14 ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
14 Vós tendes dito: inútil é servir a Deus. Que nos aproveita termos cuidado em guardar os seus preceitos, e em andar de luto diante do Senhor dos exércitos?
15 ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
15 Ora pois, nós reputamos por bem-aventurados os soberbos; também os que cometem impiedade prosperam; sim, eles tentam a Deus, e escapam.
16 ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
16 Então aqueles que temiam ao Senhor falaram uns aos outros; e o Senhor atentou e ouviu, e um memorial foi escrito diante dele, para os que temiam ao Senhor, e para os que se lembravam do seu nome.
17 ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.
17 E eles serão meus, diz o Senhor dos exércitos, minha possessão particular naquele dia que prepararei; poupá-los-ei, como um homem poupa a seu filho, que o serve.
18 ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
18 Então vereis outra vez a diferença entre o justo e o ímpio; entre o que serve a Deus, e o que o não serve.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Malaquias 3, comparar traduções ou montar um estudo — tudo direto pelo WhatsApp.