Mateus 13

Kannada Bible (GL_KANNADA) vs VC

Sair da comparação
VC Versão Católica
1 ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
1 Naquele dia, saiu Jesus e sentou-se à beira do lago.
2 ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
2 Acercou-se dele, porém, uma tal multidão, que precisou entrar numa barca. Nela se assentou, enquanto a multidão ficava à margem.
3 ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
3 E seus discursos foram uma série de parábolas.
4 ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
4 Disse ele: Um semeador saiu a semear. E, semeando, parte da semente caiu ao longo do caminho; os pássaros vieram e a comeram.
5 ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;
5 Outra parte caiu em solo pedregoso, onde não havia muita terra, e nasceu logo, porque a terra era pouco profunda.
6 ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
6 Logo, porém, que o sol nasceu, queimou-se, por falta de raízes.
7 ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
7 Outras sementes caíram entre os espinhos: os espinhos cresceram e as sufocaram.
8 ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.
8 Outras, enfim, caíram em terra boa: deram frutos, cem por um, sessenta por um, trinta por um.
9 ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
9 Aquele que tem ouvidos, ouça.
10 ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
10 Os discípulos aproximaram-se dele, então, para dizer-lhe: Por que lhes falas em parábolas?
11 ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
11 Respondeu Jesus: Porque a vós é dado compreender os mistérios do Reino dos céus, mas a eles não.
12 ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
12 Ao que tem, se lhe dará e terá em abundância, mas ao que não tem será tirado até mesmo o que tem.
13 ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
13 Eis por que lhes falo em parábolas: para que, vendo, não vejam e, ouvindo, não ouçam nem compreendam.
14 ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
14 Assim se cumpre para eles o que foi dito pelo profeta Isaías: Ouvireis com vossos ouvidos e não entendereis, olhareis com vossos olhos e não vereis,
15 ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
15 porque o coração deste povo se endureceu: taparam os seus ouvidos e fecharam os seus olhos, para que seus olhos não vejam e seus ouvidos não ouçam, nem seu coração compreenda; para que não se convertam e eu os sare {Is 6,9s}.
16 ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
16 Mas, quanto a vós, bem-aventurados os vossos olhos, porque vêem! Ditosos os vossos ouvidos, porque ouvem!
17 ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
17 Eu vos declaro, em verdade: muitos profetas e justos desejaram ver o que vedes e não o viram, ouvir o que ouvis e não ouviram.
18 ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
18 Ouvi, pois, o sentido da parábola do semeador:
19 ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
19 quando um homem ouve a palavra do Reino e não a entende, o Maligno vem e arranca o que foi semeado no seu coração. Este é aquele que recebeu a semente à beira do caminho.
20 ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
20 O solo pedregoso em que ela caiu é aquele que acolhe com alegria a palavra ouvida,
21 ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
21 mas não tem raízes, é inconstante: sobrevindo uma tribulação ou uma perseguição por causa da palavra, logo encontra uma ocasião de queda.
22 ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
22 O terreno que recebeu a semente entre os espinhos representa aquele que ouviu bem a palavra, mas nele os cuidados do mundo e a sedução das riquezas a sufocam e a tornam infrutuosa.
23 ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
23 A terra boa semeada é aquele que ouve a palavra e a compreende, e produz fruto: cem por um, sessenta por um, trinta por um.
24 ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
24 Jesus propôs-lhes outra parábola: O Reino dos céus é semelhante a um homem que tinha semeado boa semente em seu campo.
25 ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
25 Na hora, porém, em que os homens repousavam, veio o seu inimigo, semeou joio no meio do trigo e partiu.
26 ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.
26 O trigo cresceu e deu fruto, mas apareceu também o joio.
27 ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
27 Os servidores do pai de família vieram e disseram-lhe: - Senhor, não semeaste bom trigo em teu campo? Donde vem, pois, o joio?
28 ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
28 Disse-lhes ele: - Foi um inimigo que fez isto! Replicaram-lhe: - Queres que vamos e o arranquemos?
29 ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
29 - Não, disse ele; arrancando o joio, arriscais a tirar também o trigo.
30 ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
30 Deixai-os crescer juntos até a colheita. No tempo da colheita, direi aos ceifadores: arrancai primeiro o joio e atai-o em feixes para o queimar. Recolhei depois o trigo no meu celeiro.
31 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
31 Em seguida, propôs-lhes outra parábola: O Reino dos céus é comparado a um grão de mostarda que um homem toma e semeia em seu campo.
32 ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
32 É esta a menor de todas as sementes, mas, quando cresce, torna-se um arbusto maior que todas as hortaliças, de sorte que os pássaros vêm aninhar-se em seus ramos.
33 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
33 Disse-lhes, por fim, esta outra parábola. O Reino dos céus é comparado ao fermento que uma mulher toma e mistura em três medidas de farinha e que faz fermentar toda a massa.
34 ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
34 Tudo isto disse Jesus à multidão em forma de parábola. De outro modo não lhe falava,
35 ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
35 para que se cumprisse a profecia: Abrirei a boca para ensinar em parábolas; revelarei coisas ocultas desde a criação {Sl 77,2}.
36 ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
36 Então despediu a multidão. Em seguida, entrou de novo na casa e seus discípulos agruparam-se ao redor dele para perguntar-lhe: Explica-nos a parábola do joio no campo.
37 ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
37 Jesus respondeu: O que semeia a boa semente é o Filho do Homem.
38 ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
38 O campo é o mundo. A boa semente são os filhos do Reino. O joio são os filhos do Maligno.
39 ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
39 O inimigo, que o semeia, é o demônio. A colheita é o fim do mundo. Os ceifadores são os anjos.
40 ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.
40 E assim como se recolhe o joio para jogá-lo no fogo, assim será no fim do mundo.
41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
41 O Filho do Homem enviará seus anjos, que retirarão de seu Reino todos os escândalos e todos os que fazem o mal
42 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
42 e os lançarão na fornalha ardente, onde haverá choro e ranger de dentes.
43 ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
43 Então, no Reino de seu Pai, os justos resplandecerão como o sol. Aquele que tem ouvidos, ouça.
44 ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
44 O Reino dos céus é também semelhante a um tesouro escondido num campo. Um homem o encontra, mas o esconde de novo. E, cheio de alegria, vai, vende tudo o que tem para comprar aquele campo.
45 ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
45 O Reino dos céus é ainda semelhante a um negociante que procura pérolas preciosas.
46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
46 Encontrando uma de grande valor, vai, vende tudo o que possui e a compra.
47 ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
47 O Reino dos céus é semelhante ainda a uma rede que, jogada ao mar, recolhe peixes de toda espécie.
48 ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
48 Quando está repleta, os pescadores puxam-na para a praia, sentam-se e separam nos cestos o que é bom e jogam fora o que não presta.
49 ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
49 Assim será no fim do mundo: os anjos virão separar os maus do meio dos justos
50 ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
50 e os arrojarão na fornalha, onde haverá choro e ranger de dentes.
51 ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
51 Compreendestes tudo isto? Sim, Senhor, responderam eles.
52 ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
52 Por isso, todo escriba instruído nas coisas do Reino dos céus é comparado a um pai de família que tira de seu tesouro coisas novas e velhas.
53 ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
53 Após ter exposto as parábolas, Jesus partiu.
54 ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
54 Foi para a sua cidade e ensinava na sinagoga, de modo que todos diziam admirados: Donde lhe vem esta sabedoria e esta força miraculosa?
55 ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
55 Não é este o filho do carpinteiro? Não é Maria sua mãe? Não são seus irmãos Tiago, José, Simão e Judas?
56 ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
56 E suas irmãs, não vivem todas entre nós? Donde lhe vem, pois, tudo isso?
57 ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.
57 E não sabiam o que dizer dele. Disse-lhes, porém, Jesus: É só em sua pátria e em sua família que um profeta é menosprezado.
58 ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
58 E, por causa da falta de confiança deles, operou ali poucos milagres.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Mateus 13, comparar traduções ou montar um estudo — tudo direto pelo WhatsApp.