Mateus 22

Kannada Bible (GL_KANNADA) vs ACF

Sair da comparação
ACF Almeida Corrigida Fiel
1 ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ--
1 Então Jesus, tomando a palavra, tornou a falar-lhes em parábolas, dizendo:
2 ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
2 O reino dos céus é semelhante a um certo rei que celebrou as bodas de seu filho;
3 ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
3 E enviou os seus servos a chamar os convidados para as bodas, e estes não quiseram vir.
4 ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
4 Depois, enviou outros servos, dizendo: Dizei aos convidados: Eis que tenho o meu jantar preparado, os meus bois e cevados já mortos, e tudo já pronto; vinde às bodas.
5 ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
5 Eles, porém, não fazendo caso, foram, um para o seu campo, outro para o seu negócio;
6 ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
6 E os outros, apoderando-se dos servos, os ultrajaram e mataram.
7 ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
7 E o rei, tendo notícia disto, encolerizou-se e, enviando os seus exércitos, destruiu aqueles homicidas, e incendiou a sua cidade.
8 ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
8 Então diz aos servos: As bodas, na verdade, estão preparadas, mas os convidados não eram dignos.
9 ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
9 Ide, pois, às saídas dos caminhos, e convidai para as bodas a todos os que encontrardes.
10 ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
10 E os servos, saindo pelos caminhos, ajuntaram todos quantos encontraram, tanto maus como bons; e a festa nupcial foi cheia de convidados.
11 ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.
11 E o rei, entrando para ver os convidados, viu ali um homem que não estava trajado com veste de núpcias.
12 ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
12 E disse-lhe: Amigo, como entraste aqui, não tendo veste nupcial? E ele emudeceu.
13 ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
13 Disse, então, o rei aos servos: Amarrai-o de pés e mãos, levai-o, e lançai-o nas trevas exteriores; ali haverá pranto e ranger de dentes.
14 ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
14 Porque muitos são chamados, mas poucos escolhidos.
15 ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
15 Então, retirando-se os fariseus, consultaram entre si como o surpreenderiam nalguma palavra;
16 ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
16 E enviaram-lhe os seus discípulos, com os herodianos, dizendo: Mestre, bem sabemos que és verdadeiro, e ensinas o caminho de Deus segundo a verdade, e de ninguém se te dá, porque não olhas a aparência dos homens.
17 ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
17 Dize-nos, pois, que te parece? É lícito pagar o tributo a César, ou não?
18 ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
18 Jesus, porém, conhecendo a sua malícia, disse: Por que me experimentais, hipócritas?
19 ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.
19 Mostrai-me a moeda do tributo. E eles lhe apresentaram um dinheiro.
20 ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು.
20 E ele diz-lhes: De quem é esta efígie e esta inscrição?
21 ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
21 Dizem-lhe eles: De César. Então ele lhes disse: Dai pois a César o que é de César, e a Deus o que é de Deus.
22 ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.
22 E eles, ouvindo isto, maravilharam-se, e, deixando-o, se retiraram.
23 ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
23 No mesmo dia chegaram junto dele os saduceus, que dizem não haver ressurreição, e o interrogaram,
24 ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
24 Dizendo: Mestre, Moisés disse: Se morrer alguém, não tendo filhos, casará o seu irmão com a mulher dele, e suscitará descendência a seu irmão.
25 ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು.
25 Ora, houve entre nós sete irmãos; e o primeiro, tendo casado, morreu e, não tendo descendência, deixou sua mulher a seu irmão.
26 ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.
26 Da mesma sorte o segundo, e o terceiro, até ao sétimo;
27 ಕಡೆಯದಾಗಿ ಆ ಸ್ತ್ರೀಯೂ ಸತ್ತಳು.
27 Por fim, depois de todos, morreu também a mulher.
28 ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
28 Portanto, na ressurreição, de qual dos sete será a mulher, visto que todos a possuíram?
29 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
29 Jesus, porém, respondendo, disse-lhes: Errais, não conhecendo as Escrituras, nem o poder de Deus.
30 ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.
30 Porque na ressurreição nem casam nem são dados em casamento; mas serão como os anjos de Deus no céu.
31 ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
31 E, acerca da ressurreição dos mortos, não tendes lido o que Deus vos declarou, dizendo:
32 ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
32 Eu sou o Deus de Abraão, o Deus de Isaque, e o Deus de Jacó? Ora, Deus não é Deus dos mortos, mas dos vivos.
33 ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.
33 E, as turbas, ouvindo isto, ficaram maravilhadas da sua doutrina.
34 ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
34 E os fariseus, ouvindo que ele fizera emudecer os saduceus, reuniram-se no mesmo lugar.
35 ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
35 E um deles, doutor da lei, interrogou-o para o experimentar, dizendo:
36 ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.
36 Mestre, qual é o grande mandamento na lei?
37 ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
37 E Jesus disse-lhe: Amarás o Senhor teu Deus de todo o teu coração, e de toda a tua alma, e de todo o teu pensamento.
38 ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ--
38 Este é o primeiro e grande mandamento.
39 ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
39 E o segundo, semelhante a este, é: Amarás o teu próximo como a ti mesmo.
40 ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
40 Destes dois mandamentos dependem toda a lei e os profetas.
41 ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--
41 E, estando reunidos os fariseus, interrogou-os Jesus,
42 ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
42 Dizendo: Que pensais vós do Cristo? De quem é filho? Eles disseram-lhe: De Davi.
43 ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
43 Disse-lhes ele: Como é então que Davi, em espírito, lhe chama Senhor, dizendo:
44 ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
44 Disse o Senhor ao meu Senhor:Assenta-te à minha direita,Até que eu ponha os teus inimigos por escabelo de teus pés?
45 ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.
45 Se Davi, pois, lhe chama Senhor, como é seu filho?
46 ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
46 E ninguém podia responder-lhe uma palavra; nem desde aquele dia ousou mais alguém interrogá-lo.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Mateus 22, comparar traduções ou montar um estudo — tudo direto pelo WhatsApp.