Mateus 24

Kannada Bible (GL_KANNADA) vs BKJ

Sair da comparação
1 1 ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.
1 E Jesus, saindo, partiu do templo, e aproximaram-se dele os seus discípulos para lhe mostrarem os edifícios do templo.
2 ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
2 Mas Jesus lhes disse: Não vedes todas estas coisas? Na verdade eu vos digo que não ficará aqui uma pedra sobre a outra que não seja derrubada.
3 ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
3 E, estando ele assentado no monte das Oliveiras, chegaram-se a ele os seus discípulos em particular, dizendo: Dize-nos, quando serão essas coisas, e qual será o sinal da tua vinda, e do fim do mundo?
4 ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.
4 E Jesus, respondendo, disse-lhes: Fiquem atentos para que nenhum homem vos engane.
5 ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
5 Porque muitos virão em meu nome, dizendo: Eu sou o Cristo; e enganarão a muitos.
6 ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
6 E ouvireis de guerras e de rumores de guerras; olhai, para que não vos perturbeis; pois todas essas coisas devem acontecer, mas ainda não é o fim.
7 ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
7 Pois se levantará nação contra nação, e reino contra reino; e haverá fomes, e pestes, e terremotos em vários lugares.
8 ಇವೆಲ್ಲವುಗಳು ಸಂಕಟಗಳ ಆರಂಭವು.
8 Todos estes são o princípio das dores.
9 ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
9 Então vos hão de entregar para serdes atormentados, e vos matarão; e sereis odiados de todas as nações por causa do meu nome.
10 ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
10 E então muitos se ofenderão, e trairão uns aos outros, e uns aos outros se odiarão.
11 ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
11 E surgirão muitos falsos profetas, e enganarão a muitos.
12 ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.
12 E, por se multiplicar a iniquidade, o amor de muitos esfriará.
13 ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
13 Mas aquele que suportar até o fim, esse será salvo.
14 ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
14 E este evangelho do reino será pregado em todo o mundo, como testemunho para todas as nações; e então virá o fim.
15 ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
15 Quando, pois, virdes a abominação da desolação, falado pelo profeta Daniel, posta no santo lugar, (quem lê, entenda);
16 ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;
16 então, os que estiverem na Judeia, fujam para os montes.
17 ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
17 E quem estiver sobre o telhado não desça para tirar alguma coisa de sua casa.
18 ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.
18 Nem volte aquele que estiver no campo para buscar as suas vestes.
19 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
19 Mas ai das grávidas e das que amamentarem naqueles dias!
20 ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.
20 Mas orai para que a vossa fuga não seja no inverno, nem no dia do shabat.
21 ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
21 Porque haverá então grande tribulação, como nunca houve desde o princípio do mundo até agora, nem jamais haverá.
22 ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
22 E, se aqueles dias não fossem abreviados, nenhuma carne se salvaria; mas por causa dos eleitos serão abreviados aqueles dias.
23 ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.
23 Então, se algum homem vos disser: Eis que o Cristo está aqui, ou ali, não acrediteis.
24 ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
24 Porque hão de surgir falsos cristos e falsos profetas, e farão tão grandes sinais e maravilhas que, se possível fora, enganariam até os eleitos.
25 ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.
25 Eis que de antemão eu vos tenho dito.
26 ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.
26 Portanto, se vos disserem: Eis que ele está no deserto; não saiais. Eis que ele está no esconderijo secreto; não acrediteis.
27 ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
27 Porque, assim como o relâmpago sai do Oriente e brilha até o Ocidente, assim também será a vinda do Filho do homem.
28 ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
28 Pois onde estiver o cadáver, ali se ajuntarão as águias.
29 ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
29 Imediatamente após a tribulação daqueles dias, escurecerá o sol, e a lua não dará a sua luz, e as estrelas cairão do céu, e os poderes do céu serão abalados.
30 ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
30 E então aparecerá no céu o sinal do Filho do homem; e todas as tribos da terra se lamentarão, e eles verão o Filho do homem vindo nas nuvens do céu, com poder e grande glória.
31 ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
31 E ele enviará os seus anjos com grande som de trombeta, e eles ajuntarão os seus eleitos desde os quatro ventos, de uma extremidade do céu à outra.
32 ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
32 Agora, aprendei uma parábola da figueira: Quando seu ramo estiver ainda tenro, e brotarem folhas, sabeis que o verão está próximo.
33 ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.
33 Igualmente, quando virdes todas estas coisas, sabei que ele está próximo, às portas.
34 ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
34 Na verdade eu vos digo: Esta geração não passará, até que todas essas coisas se realizem.
35 ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
35 O céu e a terra passarão, mas as minhas palavras não passarão.
36 ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
36 Mas daquele dia e hora nenhum homem sabe, não, nem os anjos do céu, mas unicamente meu Pai.
37 ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
37 E, como foi nos dias de Noé, assim será também a vinda do Filho do homem.
38 ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
38 Pois, assim como nos dias anteriores ao dilúvio, comiam, bebiam, casavam e davam-se em casamento, até o dia em que Noé entrou na arca,
39 ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
39 e não o souberam até que veio o dilúvio, e os levou a todos; assim também será a vinda do Filho do homem.
40 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು.
40 Então, estando dois no campo, um será tomado, e deixado o outro.
41 ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
41 Estando duas mulheres moendo no moinho, uma será tomada, e a outra deixada.
42 ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
42 Vigiai, portanto, porque não sabeis a que hora há de vir o vosso Senhor.
43 ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
43 Sabei, porém, que se o dono da casa soubesse a que vigília viria o ladrão, ele vigiaria e não deixaria sua casa ser arrombada.
44 ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
44 Por isso, estai vós prontos também; porque à hora que não pensais, o Filho do homem virá.
45 ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
45 Quem é, pois, o servo fiel e prudente, a quem seu senhor fez governante sobre sua casa, para dar-lhes sustento na devida estação?
46 ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.
46 Bendito é aquele servo que o seu senhor, quando vier, achar assim fazendo.
47 ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
47 Na verdade eu vos digo que ele o fará governante sobre todos os seus bens.
48 ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
48 Mas se aquele mau servo disser no seu coração: O meu senhor tarda em vir,
49 ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ
49 e começar a espancar os seus conservos, e a comer e a beber com os beberrões,
50 ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದು
50 virá o senhor daquele servo no dia em que ele não o espera, e na hora de que ele não sabe,
51 ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
51 e cortá-lo-á pelo meio, e destinará a sua parte com os hipócritas; ali haverá pranto e ranger de dentes.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Mateus 24, comparar traduções ou montar um estudo — tudo direto pelo WhatsApp.