Mateus 27

Kannada Bible (GL_KANNADA) vs VC

Sair da comparação
VC Versão Católica
1 ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
1 Chegando a manhã, todos os príncipes dos sacerdotes e os anciãos do povo reuniram-se em conselho para entregar Jesus à morte.
2 ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
2 Ligaram-no e o levaram ao governador Pilatos.
3 ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
3 Judas, o traidor, vendo-o então condenado, tomado de remorsos, foi devolver aos príncipes dos sacerdotes e aos anciãos as trinta moedas de prata,
4 ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
4 dizendo-lhes: Pequei, entregando o sangue de um justo. Responderam-lhe: Que nos importa? Isto é lá contigo!
5 ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
5 Ele jogou então no templo as moedas de prata, saiu e foi enforcar-se.
6 ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
6 Os príncipes dos sacerdotes tomaram o dinheiro e disseram: Não é permitido lançá-lo no tesouro sagrado, porque se trata de preço de sangue.
7 ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
7 Depois de haverem deliberado, compraram com aquela soma o campo do Oleiro, para que ali se fizesse um cemitério de estrangeiros.
8 ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.
8 Esta é a razão por que aquele terreno é chamado, ainda hoje, Campo de Sangue.
9 ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
9 Assim se cumpriu a profecia do profeta Jeremias: Eles receberam trinta moedas de prata, preço daquele cujo valor foi estimado pelos filhos de Israel;
10 ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.
10 e deram-no pelo campo do Oleiro, como o Senhor me havia prescrito.
11 ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
11 Jesus compareceu diante do governador, que o interrogou: És o rei dos judeus? Sim, respondeu-lhe Jesus.
12 ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.
12 Ele, porém, nada respondia às acusações dos príncipes dos sacerdotes e dos anciãos.
13 ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು.
13 Perguntou-lhe Pilatos: Não ouves todos os testemunhos que levantam contra ti?
14 ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
14 Mas, para grande admiração do governador, não quis responder a nenhuma acusação.
15 ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.
15 Era costume que o governador soltasse um preso a pedido do povo em cada festa de Páscoa.
16 ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
16 Ora, havia naquela ocasião um prisioneiro famoso, chamado Barrabás.
17 ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
17 Pilatos dirigiu-se ao povo reunido: Qual quereis que eu vos solte: Barrabás ou Jesus, que se chama Cristo?
18 ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
18 {Ele sabia que tinham entregue Jesus por inveja.}
19 ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
19 Enquanto estava sentado no tribunal, sua mulher lhe mandou dizer: Nada faças a esse justo. Fui hoje atormentada por um sonho que lhe diz respeito.
20 ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
20 Mas os príncipes dos sacerdotes e os anciãos persuadiram o povo que pedisse a libertação de Barrabás e fizesse morrer Jesus.
21 ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.
21 O governador tomou então a palavra: Qual dos dois quereis que eu vos solte? Responderam: Barrabás!
22 ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
22 Pilatos perguntou: Que farei então de Jesus, que é chamado o Cristo? Todos responderam: Seja crucificado!
23 ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
23 O governador tornou a perguntar: Mas que mal fez ele? E gritavam ainda mais forte: Seja crucificado!
24 ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
24 Pilatos viu que nada adiantava, mas que, ao contrário, o tumulto crescia. Fez com que lhe trouxessem água, lavou as mãos diante do povo e disse: Sou inocente do sangue deste homem. Isto é lá convosco!
25 ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
25 E todo o povo respondeu: Caia sobre nós o seu sangue e sobre nossos filhos!
26 ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
26 — ausente —
27 ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು.
27 Os soldados do governador conduziram Jesus para o pretório e rodearam-no com todo o pelotão.
28 ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.
28 Arrancaram-lhe as vestes e colocaram-lhe um manto escarlate.
29 ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
29 Depois, trançaram uma coroa de espinhos, meteram-lha na cabeça e puseram-lhe na mão uma vara. Dobrando os joelhos diante dele, diziam com escárnio: Salve, rei dos judeus!
30 ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.
30 Cuspiam-lhe no rosto e, tomando da vara, davam-lhe golpes na cabeça.
31 ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.
31 Depois de escarnecerem dele, tiraram-lhe o manto e entregaram-lhe as vestes. Em seguida, levaram-no para o crucificar.
32 ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
32 Saindo, encontraram um homem de Cirene, chamado Simão, a quem obrigaram a levar a cruz de Jesus.
33 ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು.
33 Chegaram ao lugar chamado Gólgota, isto é, lugar do crânio.
34 ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
34 Deram-lhe de beber vinho misturado com fel. Ele provou, mas se recusou a beber.
35 ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
35 Depois de o haverem crucificado, dividiram suas vestes entre si, tirando a sorte. Cumpriu-se assim a profecia do profeta: Repartiram entre si minhas vestes e sobre meu manto lançaram a sorte {Sl 21,19}.
36 ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.
36 Sentaram-se e montaram guarda.
37 ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
37 Por cima de sua cabeça penduraram um escrito trazendo o motivo de sua crucificação: Este é Jesus, o rei dos judeus.
38 ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.
38 Ao mesmo tempo foram crucificados com ele dois ladrões, um à sua direita e outro à sua esquerda.
39 ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
39 Os que passavam o injuriavam, sacudiam a cabeça e diziam:
40 ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
40 Tu, que destróis o templo e o reconstróis em três dias, salva-te a ti mesmo! Se és o Filho de Deus, desce da cruz!
41 ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--
41 Os príncipes dos sacerdotes, os escribas e os anciãos também zombavam dele:
42 ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
42 Ele salvou a outros e não pode salvar-se a si mesmo! Se é rei de Israel, desça agora da cruz e nós creremos nele!
43 ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
43 Confiou em Deus, Deus o livre agora, se o ama, porque ele disse: Eu sou o Filho de Deus!
44 ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
44 E os ladrões, crucificados com ele, também o ultrajavam.
45 ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
45 Desde a hora sexta até a nona, cobriu-se toda a terra de trevas.
46 ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
46 Próximo da hora nona, Jesus exclamou em voz forte: Eli, Eli, lammá sabactáni? - o que quer dizer: Meu Deus, meu Deus, por que me abandonaste?
47 ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು.
47 A estas palavras, alguns dos que lá estavam diziam: Ele chama por Elias.
48 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.
48 Imediatamente um deles tomou uma esponja, embebeu-a em vinagre e apresentou-lha na ponta de uma vara para que bebesse.
49 ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.
49 Os outros diziam: Deixa! Vejamos se Elias virá socorrê-lo.
50 ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.
50 Jesus de novo lançou um grande brado, e entregou a alma.
51 ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
51 E eis que o véu do templo se rasgou em duas partes de alto a baixo, a terra tremeu, fenderam-se as rochas.
52 ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.
52 Os sepulcros se abriram e os corpos de muitos justos ressuscitaram.
53 ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
53 Saindo de suas sepulturas, entraram na Cidade Santa depois da ressurreição de Jesus e apareceram a muitas pessoas.
54 ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
54 O centurião e seus homens que montavam guarda a Jesus, diante do estremecimento da terra e de tudo o que se passava, disseram entre si, possuídos de grande temor: Verdadeiramente, este homem era Filho de Deus!
55 ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
55 Havia ali também algumas mulheres que de longe olhavam; tinham seguido Jesus desde a Galiléia para o servir.
56 ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
56 Entre elas se achavam Maria Madalena e Maria, mãe de Tiago e de José, e a mãe dos filhos de Zebedeu.
57 ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
57 À tardinha, um homem rico de Arimatéia, chamado José, que era também discípulo de Jesus,
58 ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.
58 foi procurar Pilatos e pediu-lhe o corpo de Jesus. Pilatos cedeu-o.
59 ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ
59 José tomou o corpo, envolveu-o num lençol branco
60 ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
60 e o depositou num sepulcro novo, que tinha mandado talhar para si na rocha. Depois rolou uma grande pedra à entrada do sepulcro e foi-se embora.
61 ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
61 Maria Madalena e a outra Maria ficaram lá, sentadas defronte do túmulo.
62 ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--
62 No dia seguinte - isto é, o dia seguinte ao da Preparação -, os príncipes dos sacerdotes e os fariseus dirigiram-se todos juntos à casa de Pilatos.
63 ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
63 E disseram-lhe: Senhor, nós nos lembramos de que aquele impostor disse, enquanto vivia: Depois de três dias ressuscitarei.
64 ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
64 Ordena, pois, que seu sepulcro seja guardado até o terceiro dia. Os seus discípulos poderiam vir roubar o corpo e dizer ao povo: Ressuscitou dos mortos. E esta última impostura seria pior que a primeira.
65 ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.
65 Respondeu Pilatos: Tendes uma guarda. Ide e guardai-o como o entendeis.
66 ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
66 Foram, pois, e asseguraram o sepulcro, selando a pedra e colocando guardas.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Mateus 27, comparar traduções ou montar um estudo — tudo direto pelo WhatsApp.