Mateus 3
Kannada Bible (GL_KANNADA) vs NAA
NAA Nova Almeida Atualizada 2017
1 ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
1 Naqueles dias, apareceu João Batista pregando no deserto da Judeia.
2 ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
2 Ele dizia: — Arrependam-se, porque está próximo o Reino dos Céus.
3 ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
3 Pois é a João que se refere o que foi dito por meio do profeta Isaías: “Voz do que clama no deserto: Preparem o caminho do Senhor, endireitem as suas veredas.”
4 ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.
4 João usava uma roupa feita de pelos de camelo e um cinto de couro. O seu alimento eram gafanhotos e mel silvestre.
5 ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.
5 Então os moradores de Jerusalém, de toda a Judeia e de toda a região em volta do Jordão iam até onde ele estava.
6 ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
6 E, confessando os seus pecados, eram batizados por ele no rio Jordão.
7 ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
7 Quando João viu que muitos fariseus e saduceus vinham ao seu batismo, disse-lhes: — Raça de víboras! Quem deu a entender que vocês podem fugir da ira que está por vir?
8 ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
8 Produzam fruto digno de arrependimento!
9 ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
9 E não pensem que podem dizer uns aos outros: “Temos por pai Abraão”, porque eu afirmo a vocês que Deus pode fazer com que destas pedras surjam filhos a Abraão.
10 ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
10 E o machado já está posto à raiz das árvores. Portanto, toda árvore que não produz bom fruto é cortada e lançada ao fogo.
11 ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
11 Eu batizo vocês com água, para arrependimento; mas aquele que vem depois de mim é mais poderoso do que eu, do qual não sou digno de carregar as sandálias. Ele os batizará com o Espírito Santo e com fogo.
12 ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
12 Ele tem a pá em suas mãos, limpará a sua eira e recolherá o seu trigo no celeiro; porém queimará a palha num fogo que nunca se apaga.
13 ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು.
13 Por esse tempo, Jesus foi da Galileia para o rio Jordão, a fim de que João o batizasse.
14 ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
14 João, porém, quis convencê-lo a mudar de ideia, dizendo: — Eu é que preciso ser batizado por você, e é você que vem a mim?
15 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
15 Mas Jesus respondeu: Então ele concordou.
16 ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.
16 Depois de batizado, Jesus logo saiu da água. E eis que os céus se abriram e ele viu o Espírito de Deus descendo como pomba, vindo sobre ele.
17 ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
17 E eis que uma voz dos céus dizia: — Este é o meu Filho amado, em quem me agrado.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Mateus 3, comparar traduções ou montar um estudo — tudo direto pelo WhatsApp.