Mateus 4

Kannada Bible (GL_KANNADA) vs ACF

Sair da comparação
ACF Almeida Corrigida Fiel
1 1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
1 Então foi conduzido Jesus pelo Espírito ao deserto, para ser tentado pelo diabo.
2 ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
2 E, tendo jejuado quarenta dias e quarenta noites, depois teve fome;
3 ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
3 E, chegando-se a ele o tentador, disse: Se tu és o Filho de Deus, manda que estas pedras se tornem em pães.
4 ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
4 Ele, porém, respondendo, disse: Está escrito: Nem só de pão viverá o homem, mas de toda a palavra que sai da boca de Deus.
5 ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
5 Então o diabo o transportou à cidade santa, e colocou-o sobre o pináculo do templo,
6 ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
6 E disse-lhe: Se tu és o Filho de Deus, lança-te de aqui abaixo; porque está escrito: Que aos seus anjos dará ordens a teu respeito, E tomar-te-ão nas mãos, Para que nunca tropeces com o teu pé em alguma pedra.
7 ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
7 Disse-lhe Jesus: Também está escrito: Não tentarás o Senhor teu Deus.
8 ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
8 Novamente o transportou o diabo a um monte muito alto; e mostrou-lhe todos os reinos do mundo, e a glória deles.
9 ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
9 E disse-lhe: Tudo isto te darei se, prostrado, me adorares.
10 ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
10 Então disse-lhe Jesus: Vai-te, Satanás, porque está escrito: Ao Senhor teu Deus adorarás, e só a ele servirás.
11 ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
11 Então o diabo o deixou; e, eis que chegaram os anjos, e o serviam.
12 ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
12 Jesus, porém, ouvindo que João estava preso, voltou para a Galiléia;
13 ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್‌, ನೆಫ್ತಲೀಮ್‌ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
13 E, deixando Nazaré, foi habitar em Cafarnaum, cidade marítima, nos confins de Zebulom e Naftali;
14 ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
14 Para que se cumprisse o que foi dito pelo profeta Isaías, que diz:
15 ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್‌ ಪ್ರಾಂತ್ಯದಲ್ಲಿಯೂ ನೆಫ್ತಲೀಮ್‌ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
15 A terra de Zebulom, e a terra de Naftali, Junto ao caminho do mar, além do Jordão, A Galiléia das nações;
16 ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
16 O povo, que estava assentado em trevas, Viu uma grande luz; aos que estavam assentados na região e sombra da morte,A luz raiou.
17 ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
17 Desde então começou Jesus a pregar, e a dizer: Arrependei-vos, porque é chegado o reino dos céus.
18 ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
18 E Jesus, andando junto ao mar da Galiléia, viu a dois irmãos, Simão, chamado Pedro, e André, seu irmão, os quais lançavam as redes ao mar, porque eram pescadores;
19 ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
19 E disse-lhes: Vinde após mim, e eu vos farei pescadores de homens.
20 ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
20 Então eles, deixando logo as redes, seguiram-no.
21 ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
21 E, adiantando-se dali, viu outros dois irmãos, Tiago, filho de Zebedeu, e João, seu irmão, num barco com seu pai, Zebedeu, consertando as redes;
22 ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
22 E chamou-os; eles, deixando imediatamente o barco e seu pai, seguiram-no.
23 ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
23 E percorria Jesus toda a Galiléia, ensinando nas suas sinagogas e pregando o evangelho do reino, e curando todas as enfermidades e moléstias entre o povo.
24 ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.
24 E a sua fama correu por toda a Síria, e traziam-lhe todos os que padeciam, acometidos de várias enfermidades e tormentos, os endemoninhados, os lunáticos, e os paralíticos, e ele os curava.
25 ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
25 E seguia-o uma grande multidão da Galiléia, de Decápolis, de Jerusalém, da Judéia, e de além do Jordão.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Mateus 4, comparar traduções ou montar um estudo — tudo direto pelo WhatsApp.