Mateus 6
Kannada Bible (GL_KANNADA) vs VC
VC Versão Católica
1 ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
1 Guardai-vos de fazer vossas boas obras diante dos homens, para serdes vistos por eles. Do contrário, não tereis recompensa junto de vosso Pai que está no céu.
2 ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
2 Quando, pois, dás esmola, não toques a trombeta diante de ti, como fazem os hipócritas nas sinagogas e nas ruas, para serem louvados pelos homens. Em verdade eu vos digo: já receberam sua recompensa.
3 ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.
3 Quando deres esmola, que tua mão esquerda não saiba o que fez a direita.
4 ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
4 Assim, a tua esmola se fará em segredo; e teu Pai, que vê o escondido, recompensar-te-á.
5 ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
5 Quando orardes, não façais como os hipócritas, que gostam de orar de pé nas sinagogas e nas esquinas das ruas, para serem vistos pelos homens. Em verdade eu vos digo: já receberam sua recompensa.
6 ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
6 Quando orares, entra no teu quarto, fecha a porta e ora ao teu Pai em segredo; e teu Pai, que vê num lugar oculto, recompensar-te-á.
7 ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
7 Nas vossas orações, não multipliqueis as palavras, como fazem os pagãos que julgam que serão ouvidos à força de palavras.
8 ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.
8 Não os imiteis, porque vosso Pai sabe o que vos é necessário, antes que vós lho peçais.
9 ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
9 Eis como deveis rezar: PAI NOSSO, que estais no céu, santificado seja o vosso nome;
10 ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
10 venha a nós o vosso Reino; seja feita a vossa vontade, assim na terra como no céu.
11 ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
11 O pão nosso de cada dia nos dai hoje;
12 ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
12 perdoai-nos as nossas ofensas, assim como nós perdoamos aos que nos ofenderam;
13 ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
13 e não nos deixeis cair em tentação, mas livrai-nos do mal.
14 ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
14 Porque, se perdoardes aos homens as suas ofensas, vosso Pai celeste também vos perdoará.
15 ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
15 Mas se não perdoardes aos homens, tampouco vosso Pai vos perdoará.
16 ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
16 Quando jejuardes, não tomeis um ar triste como os hipócritas, que mostram um semblante abatido para manifestar aos homens que jejuam. Em verdade eu vos digo: já receberam sua recompensa.
17 ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
17 Quando jejuares, perfuma a tua cabeça e lava o teu rosto.
18 ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
18 Assim, não parecerá aos homens que jejuas, mas somente a teu Pai que está presente ao oculto; e teu Pai, que vê num lugar oculto, recompensar-te-á.
19 ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
19 Não ajunteis para vós tesouros na terra, onde a ferrugem e as traças corroem, onde os ladrões furtam e roubam.
20 ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
20 Ajuntai para vós tesouros no céu, onde não os consomem nem as traças nem a ferrugem, e os ladrões não furtam nem roubam.
21 ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
21 Porque onde está o teu tesouro, lá também está teu coração.
22 ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
22 O olho é a luz do corpo. Se teu olho é são, todo o teu corpo será iluminado.
23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
23 Se teu olho estiver em mau estado, todo o teu corpo estará nas trevas. Se a luz que está em ti são trevas, quão espessas deverão ser as trevas!
24 ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
24 Ninguém pode servir a dois senhores, porque ou odiará a um e amará o outro, ou dedicar-se-á a um e desprezará o outro. Não podeis servir a Deus e à riqueza.
25 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
25 Portanto, eis que vos digo: não vos preocupeis por vossa vida, pelo que comereis, nem por vosso corpo, pelo que vestireis. A vida não é mais do que o alimento e o corpo não é mais que as vestes?
26 ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
26 Olhai as aves do céu: não semeiam nem ceifam, nem recolhem nos celeiros e vosso Pai celeste as alimenta. Não valeis vós muito mais que elas?
27 ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
27 Qual de vós, por mais que se esforce, pode acrescentar um só côvado à duração de sua vida?
28 ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
28 E por que vos inquietais com as vestes? Considerai como crescem os lírios do campo; não trabalham nem fiam.
29 ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
29 Entretanto, eu vos digo que o próprio Salomão no auge de sua glória não se vestiu como um deles.
30 ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
30 Se Deus veste assim a erva dos campos, que hoje cresce e amanhã será lançada ao fogo, quanto mais a vós, homens de pouca fé?
31 ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
31 Não vos aflijais, nem digais: Que comeremos? Que beberemos? Com que nos vestiremos?
32 (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
32 São os pagãos que se preocupam com tudo isso. Ora, vosso Pai celeste sabe que necessitais de tudo isso.
33 ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.
33 Buscai em primeiro lugar o Reino de Deus e a sua justiça e todas estas coisas vos serão dadas em acréscimo.
34 ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
34 Não vos preocupeis, pois, com o dia de amanhã: o dia de amanhã terá as suas preocupações próprias. A cada dia basta o seu cuidado.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Mateus 6, comparar traduções ou montar um estudo — tudo direto pelo WhatsApp.