Mateus 7
Kannada Bible (GL_KANNADA) vs ARC
ARC Almeida Revista e Corrigida 2009
1 ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.
1 Não julgueis, para que não sejais julgados,
2 ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
2 porque com o juízo com que julgardes sereis julgados, e com a medida com que tiverdes medido vos hão de medir a vós.
3 ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
3 E por que reparas tu no argueiro que
4 ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?
4 Ou como dirás a teu irmão: Deixa-me tirar o argueiro do teu olho, estando uma trave no teu?
5 ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
5 Hipócrita, tira primeiro a trave do teu olho e, então, cuidarás em tirar o argueiro do olho do teu irmão.
6 ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
6 Não deis aos cães as coisas santas, nem deiteis aos porcos as vossas pérolas; para que não as pisem e, voltando-se, vos despedacem.
7 ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
7 Pedi, e dar-se-vos-á; buscai e encontrareis; batei, e abrir-se-vos-á.
8 ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
8 Porque aquele que pede recebe; e o que busca encontra; e, ao que bate, se abre.
9 ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ?
9 E qual dentre vós é o homem que, pedindo-lhe pão o seu filho, lhe dará uma pedra?
10 ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ?
10 E, pedindo-lhe peixe, lhe dará uma serpente?
11 ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
11 Se, vós, pois, sendo maus, sabeis dar boas coisas aos vossos filhos, quanto mais vosso Pai, que
12 ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
12 Portanto, tudo o que vós quereis que os homens vos façam, fazei-lho também vós, porque esta é a lei e os profetas.
13 ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
13 Entrai pela porta estreita, porque larga
14 ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
14 E porque estreita
15 ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
15 Acautelai-vos, porém, dos falsos profetas, que vêm até vós vestidos como ovelhas, mas interiormente são lobos devoradores.
16 ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
16 Por seus frutos os conhecereis.
17 ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;
17 Assim, toda árvore boa produz bons frutos, e toda árvore má produz frutos maus.
18 ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು.
18 Não pode a árvore boa dar maus frutos, nem a árvore má dar frutos bons.
19 ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
19 Toda árvore que não dá bom fruto corta-se e lança-se no fogo.
20 ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
20 Portanto, pelos seus frutos os conhecereis.
21 ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
21 Nem todo o que me diz: Senhor, Senhor! entrará no Reino dos céus, mas aquele que faz a vontade de meu Pai, que
22 ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
22 Muitos me dirão naquele Dia: Senhor, Senhor, não profetizamos nós em teu nome? E, em teu nome, não expulsamos demônios? E, em teu nome, não fizemos muitas maravilhas?
23 ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
23 E, então, lhes direi abertamente: Nunca vos conheci; apartai-vos de mim, vós que praticais a iniquidade.
24 ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
24 Todo aquele, pois, que escuta estas minhas palavras e as pratica, assemelhá-lo-ei ao homem prudente, que edificou a sua casa sobre a rocha.
25 ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
25 E desceu a chuva, e correram rios, e assopraram ventos, e combateram aquela casa, e não caiu, porque estava edificada sobre a rocha.
26 ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
26 E aquele que ouve estas minhas palavras e as não cumpre, compará-lo-ei ao homem insensato, que edificou a sua casa sobre a areia.
27 ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
27 E desceu a chuva, e correram rios, e assopraram ventos, e combateram aquela casa, e caiu, e foi grande a sua queda.
28 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.
28 E aconteceu que, concluindo Jesus este discurso, a multidão se admirou da sua doutrina,
29 ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
29 porquanto os ensinava com autoridade e não como os escribas.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Mateus 7, comparar traduções ou montar um estudo — tudo direto pelo WhatsApp.