Mateus 8
Kannada Bible (GL_KANNADA) vs VC
VC Versão Católica
1 ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
1 Tendo Jesus descido da montanha, uma grande multidão o seguiu.
2 ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
2 Eis que um leproso aproximou-se e prostrou-se diante dele, dizendo: Senhor, se queres, podes curar-me.
3 ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
3 Jesus estendeu a mão, tocou-o e disse: Eu quero, sê curado. No mesmo instante, a lepra desapareceu.
4 ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
4 Jesus então lhe disse: Vê que não o digas a ninguém. Vai, porém, mostrar-te ao sacerdote e oferece o dom prescrito por Moisés em testemunho de tua cura.
5 ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
5 Entrou Jesus em Cafarnaum. Um centurião veio a ele e lhe fez esta súplica:
6 ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು.
6 Senhor, meu servo está em casa, de cama, paralítico, e sofre muito.
7 ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು.
7 Disse-lhe Jesus: Eu irei e o curarei.
8 ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.
8 Respondeu o centurião: Senhor, eu não sou digno de que entreis em minha casa. Dizei uma só palavra e meu servo será curado.
9 ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ
9 Pois eu também sou um subordinado e tenho soldados às minhas ordens. Eu digo a um: Vai, e ele vai; a outro: Vem, e ele vem; e a meu servo: Faze isto, e ele o faz...
10 ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
10 Ouvindo isto, cheio de admiração, disse Jesus aos presentes: Em verdade vos digo: não encontrei semelhante fé em ninguém de Israel.
11 ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
11 Por isso, eu vos declaro que multidões virão do Oriente e do Ocidente e se assentarão no Reino dos céus com Abraão, Isaac e Jacó,
12 ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
12 enquanto os filhos do Reino serão lançados nas trevas exteriores, onde haverá choro e ranger de dentes.
13 ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
13 Depois, dirigindo-se ao centurião, disse: Vai, seja-te feito conforme a tua fé. Na mesma hora o servo ficou curado.
14 ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.
14 Foi então Jesus à casa de Pedro, cuja sogra estava de cama, com febre.
15 ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.
15 Tomou-lhe a mão, e a febre a deixou. Ela levantou-se e pôs-se a servi-los.
16 ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.
16 Pela tarde, apresentaram-lhe muitos possessos de demônios. Com uma palavra expulsou ele os espíritos e curou todos os enfermos.
17 ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
17 Assim se cumpriu a predição do profeta Isaías: Tomou as nossas enfermidades e sobrecarregou-se dos nossos males {Is 53,4}.
18 ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
18 Certo dia, vendo-se no meio de grande multidão, ordenou Jesus que o levassem para a outra margem do lago.
19 ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
19 Nisto aproximou-se dele um escriba e lhe disse: Mestre, seguir-te-ei para onde quer que fores.
20 ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
20 Respondeu Jesus: As raposas têm suas tocas e as aves do céu, seus ninhos, mas o Filho do Homem não tem onde repousar a cabeça.
21 ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
21 Outra vez um dos seus discípulos lhe disse: Senhor, deixa-me ir primeiro enterrar meu pai.
22 ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
22 Jesus, porém, lhe respondeu: Segue-me e deixa que os mortos enterrem seus mortos.
23 ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
23 Subiu ele a uma barca com seus discípulos.
24 ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
24 De repente, desencadeou-se sobre o mar uma tempestade tão grande, que as ondas cobriam a barca. Ele, no entanto, dormia.
25 ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.
25 Os discípulos achegaram-se a ele e o acordaram, dizendo: Senhor, salva-nos, nós perecemos!
26 ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
26 E Jesus perguntou: Por que este medo, gente de pouca fé? Então, levantando-se, deu ordens aos ventos e ao mar, e fez-se uma grande calmaria.
27 ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
27 Admirados, diziam: Quem é este homem a quem até os ventos e o mar obedecem?
28 ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
28 No outro lado do lago, na terra dos gadarenos, dois possessos de demônios saíram de um cemitério e vieram-lhe ao encontro. Eram tão furiosos que pessoa alguma ousava passar por ali.
29 ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
29 Eis que se puseram a gritar: Que tens a ver conosco, Filho de Deus? Vieste aqui para nos atormentar antes do tempo?
30 ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
30 Havia, não longe dali, uma grande manada de porcos que pastava.
31 ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
31 Os demônios imploraram a Jesus: Se nos expulsas, envia-nos para aquela manada de porcos.
32 ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
32 Ide, disse-lhes. Eles saíram e entraram nos porcos. Nesse instante toda a manada se precipitou pelo declive escarpado para o lago, e morreu nas águas.
33 ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.
33 Os guardas fugiram e foram contar na cidade o que se tinha passado e o sucedido com os endemoninhados.
34 ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
34 Então a população saiu ao encontro de Jesus. Quando o viu, suplicou-lhe que deixasse aquela região.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Mateus 8, comparar traduções ou montar um estudo — tudo direto pelo WhatsApp.