Números 14

Kannada Bible (GL_KANNADA) vs NAA

Sair da comparação
NAA Nova Almeida Atualizada 2017
1 1 ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
1 Então toda a congregação se levantou e gritou em alta voz; e o povo chorou aquela noite.
2 ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
2 Todos os filhos de Israel murmuraram contra Moisés e contra Arão; e toda a congregação lhes disse: — Quem dera tivéssemos morrido na terra do Egito ou mesmo neste deserto!
3 ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
3 E por que o Senhor nos traz a esta terra, para cairmos à espada e para que nossas mulheres e nossas crianças sejam por presa? Não seria melhor voltarmos para o Egito?
4 ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
4 E diziam uns aos outros: — Vamos escolher um chefe e voltemos para o Egito.
5 ಆಗ ಮೋಶೆಯೂ ಆರೋನನೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.
5 Então Moisés e Arão caíram sobre o seu rosto diante da congregação dos filhos de Israel.
6 ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
6 E Josué, filho de Num, e Calebe, filho de Jefoné, que eram daqueles que espiaram a terra, rasgaram as suas roupas
7 ಇಸ್ರಾ ಯೇಲ್‌ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.
7 e falaram a toda a congregação dos filhos de Israel, dizendo: — A terra pela qual passamos para espiar é terra muitíssimo boa.
8 ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.
8 Se o Senhor se agradar de nós, então nos fará entrar e nos dará essa terra, que é uma terra que mana leite e mel.
9 ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
9 Tão somente não sejam rebeldes contra o Senhor e não tenham medo do povo dessa terra, porque, como pão, os podemos devorar; a proteção que eles tinham se foi. O Senhor está conosco; não tenham medo deles.
10 ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
10 Apesar disso, toda a congregação disse que Josué e Calebe deviam ser apedrejados; porém a glória do Senhor apareceu na tenda do encontro a todos os filhos de Israel.
11 ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
11 O Senhor disse a Moisés: — Até quando este povo me provocará e até quando não crerá em mim, apesar de todos os sinais que fiz no meio dele?
12 ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
12 Vou feri-lo com pestilência e deserdá-lo; e farei de você povo maior e mais forte do que este.
13 ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
13 Moisés respondeu ao Senhor : — Os egípcios não somente ouviram que, com o teu poder, fizeste este povo sair do meio deles,
14 ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
14 mas também o disseram aos moradores desta terra. Eles ouviram que tu, ó Senhor , estás no meio deste povo, que face a face, ó Senhor , lhes apareces, tua nuvem está sobre eles e vais adiante deles numa coluna de nuvem, de dia, e, numa coluna de fogo, de noite.
15 ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--
15 Se matares este povo de uma só vez, as nações, que antes ouviram a tua fama, dirão:
16 ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.
16 “Visto que o Senhor não conseguiu fazer este povo entrar na terra que lhe prometeu com juramento, matou-os no deserto.”
17 ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.
17 Agora, pois, peço que a força do meu Senhor se engrandeça, como tens falado, dizendo:
18 ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
18 “O Senhor é tardio em irar-se e rico em bondade; ele perdoa a iniquidade e a transgressão, mas não inocenta o culpado, e visita a iniquidade dos pais nos filhos até a terceira e a quarta geração.”
19 ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
19 Perdoa, pois, a iniquidade deste povo, segundo a grandeza da tua misericórdia e como também tens perdoado a este povo desde a terra do Egito até aqui.
20 ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.
20 O Senhor respondeu: — Conforme você me pediu, eu perdoei.
21 ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
21 Porém, tão certo como eu vivo, e como toda a terra se encherá da glória do Senhor ,
22 ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
22 nenhum dos homens que viram a minha glória e os prodígios que fiz no Egito e no deserto e, mesmo assim me puseram à prova já dez vezes e não obedeceram à minha voz,
23 ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
23 nenhum deles verá a terra que, com juramento, prometi a seus pais; sim, nenhum daqueles que me desprezaram a verá.
24 ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
24 Porém o meu servo Calebe, visto que nele houve outro espírito, e perseverou em seguir-me, eu o farei entrar na terra que espiou, e a sua descendência a possuirá.
25 (ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
25 Ora, os amalequitas e os cananeus habitam no vale; portanto, amanhã mudem de rumo e caminhem para o deserto, pelo caminho do mar Vermelho.
26 ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--
26 Depois, o Senhor disse a Moisés e a Arão:
27 ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್‌ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
27 — Até quando vou aguentar esta má congregação que murmura contra mim? Tenho ouvido as murmurações que os filhos de Israel proferem contra mim.
28 ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
28 Diga-lhes: “Tão certo como eu vivo, diz o Senhor , vou tratar vocês de acordo com o que falaram aos meus ouvidos.
29 ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
29 Neste deserto, cairá o cadáver de vocês — de todos vocês que foram contados no censo, de vinte anos para cima, e que murmuraram contra mim.
30 ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
30 Vocês não entrarão na terra na qual jurei que os faria habitar, com a exceção de Calebe, filho de Jefoné, e Josué, filho de Num.
31 ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
31 Mas os seus filhos, dos quais vocês dizem que serão por presa, esses eu farei entrar nela; e eles conhecerão a terra que vocês desprezaram.
32 ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.
32 Porém, quanto a vocês, o seu cadáver cairá neste deserto.
33 ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
33 Os filhos de vocês serão pastores neste deserto durante quarenta anos e levarão sobre si as infidelidades de vocês, até que o cadáver de vocês se consuma neste deserto.
34 ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
34 Segundo o número dos dias em que vocês espiaram a terra, quarenta dias, cada dia representando um ano, vocês levarão sobre si as suas iniquidades durante quarenta anos e terão experiência do meu desagrado.
35 ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
35 Eu, o Senhor , falei. Assim farei a toda esta má congregação, que se levantou contra mim; neste deserto, se consumirão e aí morrerão.”
36 ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
36 Os homens que Moisés havia mandado para espiar a terra e que, voltando, fizeram murmurar toda a congregação contra ele, falando mal da terra,
37 ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.
37 esses mesmos homens que falaram mal da terra morreram de praga diante do Senhor .
38 ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
38 Mas Josué, filho de Num, e Calebe, filho de Jefoné, que eram dos homens que foram espiar a terra, sobreviveram.
39 ಮೋಶೆಯು ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.
39 Moisés falou estas palavras a todos os filhos de Israel, e o povo ficou muito triste.
40 ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.
40 Levantaram-se de manhã cedo e subiram ao alto do monte, dizendo: — Aqui estamos e subiremos ao lugar que o
41 ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
41 Porém Moisés respondeu: — Por que vocês estão transgredindo o mandado do
42 ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.
42 Não vão, porque o Senhor não estará no meio de vocês, e vocês serão derrotados pelos seus inimigos.
43 ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
43 Porque os amalequitas e os cananeus estão logo ali adiante, e vocês cairão à espada. Uma vez que se desviaram do Senhor , o Senhor não estará com vocês.
44 ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.
44 Contudo, eles teimaram em querer entrar na região montanhosa. No entanto, a arca da aliança do Senhor e Moisés não saíram do meio do arraial.
45 ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
45 Então os amalequitas e os cananeus que habitavam na região montanhosa desceram e os atacaram, derrotando-os até Horma.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Números 14, comparar traduções ou montar um estudo — tudo direto pelo WhatsApp.