Números 8
Kannada Bible (GL_KANNADA) vs NTLH
NTLH Nova Tradução na Linguagem de Hoje 2000
1 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
1 O Senhor Deus disse a Moisés:
2 ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು.
2 — Fale com Arão e diga-lhe o seguinte: quando você colocar as sete lamparinas no candelabro , faça com que as lamparinas iluminem o espaço em frente do candelabro.
3 ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
3 E Arão fez assim: colocou as lamparinas de modo que iluminassem o espaço em frente do candelabro, como o Senhor havia ordenado a Moisés.
4 ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
4 O candelabro era de ouro batido: a sua base, as suas flores, tudo era de ouro batido, de acordo com o modelo que o Senhor havia mostrado a Moisés.
5 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
5 O Senhor Deus disse a Moisés:
6 ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು.
6 — Separe os levitas dos outros israelitas e purifique-os .
7 ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
7 Para purificá-los, faça o seguinte: borrife sobre eles a água da purificação. Eles devem rapar todo o corpo e lavar as suas roupas. Assim, ficarão purificados.
8 ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ.
8 Então pegarão um touro novo, com a oferta de cereais, feita da melhor farinha misturada com azeite. E você pegará outro touro novo como oferta para tirar pecados.
9 ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು.
9 Em seguida você reunirá todo o povo de Israel e fará com que os levitas fiquem em frente da Tenda Sagrada .
10 ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
10 Então o povo de Israel porá as mãos sobre a cabeça dos levitas,
11 ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.
11 e aí Arão separará os levitas para mim como uma oferta especial dos israelitas. Assim, os levitas poderão fazer o meu serviço.
12 ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು.
12 Os levitas colocarão as mãos sobre a cabeça dos dois touros. Um deles será oferecido como oferta para tirar pecados, e o outro, como oferta que será completamente queimada para purificar os levitas.
13 ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.
13 — Separe os levitas como uma oferta especial para mim, e que Arão e os seus filhos sejam os chefes deles.
14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು.
14 Separe os levitas dos outros israelitas a fim de que sejam meus.
15 ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.
15 Depois que você purificar e separar os levitas, eles estarão preparados para trabalhar na Tenda.
16 ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
16 Eles foram separados do meio dos israelitas, para serem meus, em lugar dos filhos mais velhos do povo de Israel. Eles são meus.
17 ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
17 Quando matei todos os primeiros filhos dos egípcios, eu separei para mim o filho mais velho de cada família israelita e a primeira cria de cada animal.
18 ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.
18 Agora estou ficando com os levitas em lugar de todos os primeiros filhos dos israelitas.
19 ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
19 Agora entrego os levitas a Arão e aos seus filhos como uma oferta dos israelitas a fim de trabalharem na Tenda para o povo de Israel, para conseguirem o perdão dos pecados e para protegerem os israelitas de alguma desgraça , se chegarem muito perto do Lugar Santo .
20 ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.
20 Assim, Moisés, Arão e todo o povo de Israel cumpriram tudo o que o Senhor havia ordenado a Moisés a respeito dos levitas.
21 ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
21 Os levitas se purificaram e lavaram as suas roupas, e Arão os separou como uma oferta especial ao Senhor e fez a cerimônia da purificação para eles.
22 ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.
22 O povo fez tudo o que o Senhor havia ordenado a Moisés a respeito dos levitas. Assim, eles foram escolhidos para trabalhar na Tenda Sagrada, dirigidos por Arão e pelos seus filhos.
23 ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
23 O Senhor Deus disse a Moisés:
24 ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.
24 — A lei a respeito dos levitas é esta: com a idade de vinte e cinco anos cada levita começará o seu trabalho na Tenda Sagrada
25 ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.
25 e aos cinquenta anos deixará de trabalhar.
26 ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
26 Depois dessa idade os levitas poderão ajudar os seus companheiros no trabalho deles na Tenda, porém não serão responsáveis por nenhum serviço. É assim que você deverá organizar o serviço dos levitas.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Números 8, comparar traduções ou montar um estudo — tudo direto pelo WhatsApp.