Provérbios 23

Kannada Bible (GL_KANNADA) vs BKJ

Sair da comparação
1 ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು;
1 Quando te assentares para comer com um governante, considera diligentemente o que é posto diante de ti;
2 ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.
2 e põe uma faca à tua garganta se fores um homem de grande apetite.
3 ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
3 Não sejas desejoso de suas iguarias; porque são alimento enganoso.
4 ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
4 Não trabalhes para ficar rico; pare da tua própria sabedoria.
5 ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
5 Porás tu os teus olhos sobre aquilo que não é? Porque certamente as riquezas fazem asas para si; como a águia que voa em direção ao céu.
6 ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;
6 Não comas o pão daquele que tem um olho mau, nem cobices as suas saborosas carnes,
7 ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
7 porque como ele pensa em seu coração, assim é ele. Come e bebe, te diz ele; mas o seu coração não está contigo.
8 ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ.
8 Vomitarás o bocado que comeste, e perderás as tuas doces palavras.
9 ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.
9 Não fales aos ouvidos de um tolo, porque ele desprezará a sabedoria das tuas palavras.
10 ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;
10 Não removas os limites antigos e não entres nos campos dos órfãos;
11 ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.
11 porque o seu redentor é poderoso; ele pleiteará pela causa deles contigo.
12 ಶಿಕ್ಷಣಕ್ಕೆ ನಿನ್ನ ಹೃದಯವನ್ನೂ ವಿವೇ ಕದ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.
12 Aplica o teu coração à instrução, e os teus ouvidos às palavras do conhecimento.
13 ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ.
13 Não retenhas a correção da criança; pois se tu bateres nele com uma vara, ele não morrerá.
14 ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
14 Tu o baterás com a vara, e livrarás a sua alma do inferno.
15 ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು.
15 Meu filho, se o teu coração for sábio, meu coração regozijará, o meu próprio.
16 ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
16 Sim, meus rins se regozijarão quando teus lábios falarem coisas retas.
17 ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
17 Não deixes teu coração invejar os pecadores, mas estejas no temor do SENHOR o dia todo.
18 ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
18 Porque certamente há um fim, e a tua expectativa não será cortada.
19 ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
19 Ouve tu, meu filho, e sê sábio, e guia o teu coração no caminho.
20 ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ.
20 Não estejas entre os bebedores de vinho, entre turbulentos comedores de carne;
21 ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
21 porque o bêbado e o comilão virão à pobreza; e a sonolência vestirá um homem com trapos.
22 ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
22 Ouve ao teu pai, que te gerou, e não desprezes tua mãe, quando ela estiver velha.
23 ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
23 Compra a verdade, e não a vendas; e também a sabedoria, a instrução e o entendimento.
24 ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು.
24 O pai do justo se regozijará grandemente, e aquele que gera um filho sábio terá alegria nele.
25 ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
25 Teu pai e tua mãe ficarão felizes, e aquela que te gerou se regozijará.
26 ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
26 Meu filho, dá-me o teu coração, e deixa teus olhos observarem os meus caminhos.
27 ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.
27 Porque cova profunda é a prostituta, e poço estreito a mulher estranha.
28 ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ.
28 Pois ela, como uma presa, fica à espreita, e aumenta os transgressores entre os homens.
29 ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
29 De quem são os ais? De quem as tristezas? De quem as contendas? De quem as queixas? De quem as feridas sem motivo? De quem os olhos vermelhos?
30 ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
30 Daqueles que ficam muito tempo com o vinho; aqueles que vão buscar vinho misturado.
31 ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
31 Não olhes para o vinho quando ele estiver vermelho, quando der sua cor na taça, quando ele se mover suavemente.
32 ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ.
32 No final, ele pica como a serpente, e ferroa como uma víbora.
33 ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
33 Teus olhos contemplarão a mulher estranha, e teu coração proferirá coisas perversas.
34 ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.
34 Sim, tu serás como aquele que se deita no meio do mar, ou como aquele que permanece sobre o topo de um mastro.
35 ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
35 E dirás: Me feriram, e eu não estava enfermo; me bateram, e eu não senti; quando despertarei? Tornarei a buscá-lo outra vez.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Provérbios 23, comparar traduções ou montar um estudo — tudo direto pelo WhatsApp.