Provérbios 30
Kannada Bible (GL_KANNADA) vs VC
VC Versão Católica
1 ಯಾಕೆ ಎಂಬವನ ಮಗನಾದ ಆಗೂರನ ಪ್ರವಾದನೆಯ ಮಾತುಗಳು; ಇವನು ಇಥಿಯೇಲನಿಗೆ ಹೌದು, ಇಥಿಯೇಲನಿಗೂ ಉಕ್ಕಾಲ ನಿಗೂ ಹೀಗೆ ಹೇಳಿದನು.
1 Palavras de Agur, filho de Jaque, de Massa. Palavras desse homem: Eu me fatiguei por Deus, estou esgotado por Deus, eis-me entregue.
2 ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.
2 Porque eu sou o mais insensato dos homens, não tenho a inteligência de um homem.
3 ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ.
3 Não aprendi a sabedoria e não conheci a ciência do Santo.
4 ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
4 Quem subiu ao céu e quem dele desceu? Quem reteve o vento em suas mãos? Quem envolveu as águas em seu manto? Quem determinou as extremidades da terra? Qual é o seu nome, qual é o nome de seu filho, se é que o sabes?
5 ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
5 Toda a palavra de Deus é provada, é um escudo para quem se fia nele.
6 ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
6 Não acrescentes nada às suas palavras, para que ele não te corrija e sejas achado mentiroso.
7 ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;
7 Eu te peço duas coisas, não mas negues antes de minha morte:
8 ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
8 afasta de mim falsidade e mentira, não me dês nem pobreza nem riqueza, concede-me o pão que me é necessário,
9 ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
9 para que, saciado, eu não te renegue, e não diga: Quem é o Senhor? Ou que, pobre, eu não roube, e não profane o nome do meu Deus.
10 ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
10 Não calunies um escravo junto de seu senhor, para que ele não te amaldiçoe e sofras o castigo.
11 ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
11 Há uma raça que amaldiçoa seu pai e que não abençoa sua mãe.
12 ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
12 Há uma raça que se julga pura e que não está limpa de sua mancha.
13 ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
13 Há uma raça , oh, cujos olhos são altivos, com pálpebras levantadas!
14 ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
14 Há uma raça cujos dentes são espadas e os maxilares, facas, para devorar os desvalidos da terra e os indigentes dentre os homens.
15 ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
15 A sanguessuga tem duas filhas: Dá! Dá! Há três coisas insaciáveis, quatro mesmo, que nunca dizem: Basta!
16 ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ.
16 A habitação dos mortos, o seio estéril, o solo que a água jamais sacia e o fogo que nunca diz: Basta!
17 ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
17 Os olhos de quem zomba do pai, de quem se recusa obedecer sua mãe: os corvos da torrente o arrebatarão, os filhos da águia o devorarão.
18 ನನಗೆ ಆಶ್ಚರ್ಯವಾದ ಮೂರು ಸಂಗತಿಗ ಳಿವೆ. ಹೌದು, ನಾನು ಅರಿಯದಿರುವ ನಾಲ್ಕು ಸಂಗ ತಿಗಳಿವೆ--
18 Há três coisas que me são mistério, quatro mesmo, que não compreendo:
19 ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.
19 O vôo da águia nos céus, o rastejar da cobra no rochedo, a navegação de um navio em pleno mar, o caminho de um homem junto a uma jovem.
20 ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
20 Tal é o procedimento da mulher adúltera: come, depois limpa a boca, dizendo: Não fiz mal algum.
21 ಭೂಮಿಯು ಮೂರರಿಂದ ಕಳವಳಗೊಳ್ಳುತ್ತದೆ; ನಾಲ್ವರನ್ನು ಅದು ತಾಳಲಾರದು
21 Três coisas fazem tremer a terra, há mesmo quatro que ela não pode suportar:
22 ಆಳುವ ದಾಸನು, ಹೊಟ್ಟೆತುಂಬಿದ ನೀಚನು,
22 um escravo que se torna rei, um tolo que está farto de pão,
23 ಮದುವೆಯಾದ ಚಂಡಿಯು, ತನ್ನ ಯಜಮಾನಳಿಗೆ ಬಾಧ್ಯಸ್ಥಳಾದ ದಾಸಿಯು.
23 uma filha desprezada que se casa, uma serva que suplanta sua senhora.
24 ಭೂಮಿಯ ಮೇಲೆ ಅಧಿಕ ಜ್ಞಾನವು ಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ.
24 Há quatro animais pequenos na terra que, entretanto, são sábios, muito sábios:
25 ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.
25 as formigas, povo sem força, que, durante o verão, preparam suas provisões,
26 ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.
26 os arganazes, povo sem poder, que fazem sua habitação nos rochedos,
27 ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.
27 os gafanhotos, que não têm rei e avançam todos em bandos,
28 ಜೇಡರ ಹುಳು ತನ್ನ ಕೈಗಳಿಂದ ಹಿಡಿದುಕೊಳ್ಳುತ್ತದೆ; ಅದು ಅರಮನೆ ಗಳಲ್ಲಿ ಇರುತ್ತದೆ.
28 a lagartixa, que se pode pegar na mão e penetra nos palácios reais.
29 ಗಂಭೀರ ಗಮನದ ಮೂರು ಪ್ರಾಣಿಗಳಿವೆ; ಹೌದು, ನಡತೆಯಲ್ಲಿ ಅಂದವಾಗಿರುವ ನಾಲ್ಕು ಪ್ರಾಣಿಗಳಿವೆ.
29 Há três coisas que têm bela aparência, quatro mesmo, que andam garbosamente:
30 ಮೃಗಗಳಲ್ಲಿ ಬಲಿಷ್ಠವಾಗಿ ರುವ ಸಿಂಹವು ಯಾವದಕ್ಕೂ ಹೆದರುವುದಿಲ್ಲ.
30 O leão, o mais bravo dos animais, que não recua diante de nada,
31 ಬೇಟೆಯ ನಾಯಿ; ಹೋತವು ಸಹ; ಸೈನ್ಯಸಮೇತ ನಾದ ಅರಸನು.
31 o animal cingido pelos rins, o bode e o rei acompanhado de seu exército.
32 ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.
32 Se tiveres a asneira de elevar-te a ti mesmo, refletindo nisso, depois, põe tua mão à boca,
33 ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
33 porque quem comprime o leite, tira dele a manteiga, quem aperta o nariz, faz jorrar o sangue, quem provoca a cólera, promove a disputa.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Provérbios 30, comparar traduções ou montar um estudo — tudo direto pelo WhatsApp.