Salmos 89

Kannada Bible (GL_KANNADA) vs NTLH

Sair da comparação
NTLH Nova Tradução na Linguagem de Hoje 2000
1 ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
1 Ó Senhor Deus, eu sempre cantarei a respeito do teu amor e anunciarei a tua fidelidade a todas as gerações.
2 ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
2 Sei que o teu amor dura para sempre e que a tua fidelidade é tão firme como o céu.
3 ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
3 Tu disseste: “Eu escolhi o meu fiz uma aliança com ele e lhe prometi isto:
4 ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
4 ‘Um dos seus descendentes sempre reinará; eu farei com que eles sempre sejam reis depois de você.’ ”
5 ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
5 Ó Senhor , os céus cantam as maravilhas que fazes, e, reunidos, os anjos cantam a tua fidelidade.
6 ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
6 Não há no céu ninguém como tu, ó Entre os seres celestiais não há nenhum igual a ti.
7 ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
7 Tu és respeitado na assembleia deles, és ao teu redor.
8 ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
8 Ó Senhor , Deus Todo-Poderoso, não há ninguém que tenha tanto poder como tu! Em todas as coisas, tu és fiel, ó
9 ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
9 Tu dominas o Mar poderoso, tu acalmas as suas ondas furiosas.
10 ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
10 Esmagaste o monstro Raabe e o mataste; com a tua grande força, derrotaste os teus inimigos.
11 ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.
11 O céu é teu, e a terra é tua; tu criaste o mundo e tudo o que nele existe.
12 ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
12 Tu fizeste o Norte e o Sul. Os montes Tabor e Hermom te louvam com alegria.
13 ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
13 Como és poderoso! Como é grande a tua força!
14 ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
14 A honestidade e a justiça são as bases do teu reinado. Tu és fiel e amoroso em tudo o que fazes.
15 ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
15 Feliz o povo que te adora com canções e que vive na luz da tua presença!
16 ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು.
16 Por causa de ti, eles se alegram o dia todo e te louvam porque és bondoso.
17 ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
17 Tu, ó Deus, és o nosso poder glorioso ; por tua bondade, nos fazes vencer,
18 ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ.
18 pois escolhes o nosso protetor. Foste tu, que nos deste o nosso rei.
19 ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
19 Há muito tempo, numa visão, tu disseste aos teus “Eu ajudei um soldado famoso; dei a autoridade a um homem que escolhi do meio do povo.
20 ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
20 Escolhi o meu servo Davi para ser rei,
21 ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.
21 A minha força estará sempre com ele, o meu poder o tornará forte.
22 ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.
22 Os seus inimigos nunca o vencerão, os maus não o derrotarão.
23 ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
23 Eu acabarei com os seus inimigos e matarei todos os que o odeiam.
24 ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
24 Sempre serei fiel a Davi e o amarei, e, por causa do meu poder, ele sempre vencerá.
25 ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.
25 Estenderei o seu reinado desde o mar Mediterrâneo até o rio Eufrates.
26 ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
26 Então ele me dirá: ‘Tu és o meu pai e o meu Deus; tu és a rocha que me salva.’
27 ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
27 Eu lhe darei os direitos de filho mais velho, farei com que ele seja o maior de todos os reis do mundo.
28 ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
28 Eu sempre o amarei, e a minha aliança com ele ficará firme.
29 ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
29 Depois dele os seus descendentes sempre serão reis e reinarão enquanto o céu existir.
30 ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ,
30 “Mas, se os seus descendentes desobedecerem à minha se não viverem de acordo com os meus ensinamentos,
31 ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,
31 se desprezarem as minhas ordens e não guardarem os meus mandamentos,
32 ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
32 então eu os castigarei pelos seus pecados, eu os farei sofrer por causa dos seus erros.
33 ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
33 Porém não deixarei de amar a Davi, mas cumprirei a promessa que lhe fiz.
34 ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
34 Não quebrarei a aliança que fiz com ele, nem deixarei de cumprir nenhuma das minhas promessas.
35 ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
35 “De uma vez por todas, jurei pelo meu santo nome que nunca mentiria a Davi.
36 ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
36 Ele sempre terá descendentes, e, enquanto o sol brilhar, eu protegerei o seu reinado.
37 ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
37 Esse reinado durará como a lua, aquela fiel testemunha que está no céu.”
38 ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
38 Mas agora, ó Deus, tu estás irado com o rei que escolheste; tu o abandonaste e o rejeitaste.
39 ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
39 Quebraste a aliança que fizeste com o teu e jogaste a sua coroa no chão.
40 ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ.
40 Derrubaste as muralhas da sua cidade e arrasaste as suas fortalezas.
41 ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
41 Os que passam roubam tudo o que ele tem, e os seus vizinhos zombam dele.
42 ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ.
42 Deste a vitória aos seus inimigos e fizeste com que eles ficassem felizes.
43 ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ.
43 Tu tornaste inúteis as armas do rei e deixaste que ele fosse derrotado na batalha.
44 ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ.
44 Tiraste a sua autoridade de rei e derrubaste o seu trono.
45 ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
45 Tu fizeste com que ele envelhecesse antes do tempo e o cobriste de humilhação.
46 ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
46 Até quando te esconderás, ó Será para sempre? Até quando a tua como fogo?
47 ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
47 Lembra como é curta a minha vida; lembra que todas as pessoas que criaste vão morrer um dia.
48 ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
48 Quem pode continuar vivo e nunca morrer? Quem pode escapar da sepultura?
49 ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
49 Ó Senhor, onde estão as antigas provas do teu amor? Onde estão os juramentos que fizeste a Davi?
50 ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.
50 Lembra que eu, teu servo , estou sendo insultado e suporto todas as ofensas dos pagãos.
51 ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?
51 Ó Senhor , como os teus inimigos falam mal do rei que escolheste! Aonde ele vai, eles o insultam.
52 ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್‌, ಅಮೆನ್‌.
52 Louvemos o Senhor Deus para sempre!

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Salmos 89, comparar traduções ou montar um estudo — tudo direto pelo WhatsApp.