Tiago 2

Kannada Bible (GL_KANNADA) vs ARA

Sair da comparação
ARA Almeida Revista e Atualizada 1993
1 ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.
1 Meus irmãos, não tenhais a fé em nosso Senhor Jesus Cristo, Senhor da glória, em acepção de pessoas.
2 ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು
2 Se, portanto, entrar na vossa sinagoga algum homem com anéis de ouro nos dedos, em trajos de luxo, e entrar também algum pobre andrajoso,
3 ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
3 e tratardes com deferência o que tem os trajos de luxo e lhe disserdes: Tu, assenta-te aqui em lugar de honra; e disserdes ao pobre: Tu, fica ali em pé ou assenta-te aqui abaixo do estrado dos meus pés,
4 ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
4 não fizestes distinção entre vós mesmos e não vos tornastes juízes tomados de perversos pensamentos?
5 ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
5 Ouvi, meus amados irmãos. Não escolheu Deus os que para o mundo são pobres, para serem ricos em fé e herdeiros do reino que ele prometeu aos que o amam?
6 ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
6 Entretanto, vós outros menosprezastes o pobre. Não são os ricos que vos oprimem e não são eles que vos arrastam para tribunais?
7 ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
7 Não são eles os que blasfemam o bom nome que sobre vós foi invocado?
8 ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
8 Se vós, contudo, observais a lei régia segundo a Escritura: Amarás o teu próximo como a ti mesmo, fazeis bem;
9 ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
9 se, todavia, fazeis acepção de pessoas, cometeis pecado, sendo arguidos pela lei como transgressores.
10 ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
10 Pois qualquer que guarda toda a lei, mas tropeça em um só ponto, se torna culpado de todos.
11 ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
11 Porquanto, aquele que disse: Não adulterarás também ordenou: Não matarás. Ora, se não adulteras, porém matas, vens a ser transgressor da lei.
12 ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
12 Falai de tal maneira e de tal maneira procedei como aqueles que hão de ser julgados pela lei da liberdade.
13 ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
13 Porque o juízo é sem misericórdia para com aquele que não usou de misericórdia. A misericórdia triunfa sobre o juízo.
14 ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
14 Meus irmãos, qual é o proveito, se alguém disser que tem fé, mas não tiver obras? Pode, acaso, semelhante fé salvá-lo?
15 ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
15 Se um irmão ou uma irmã estiverem carecidos de roupa e necessitados do alimento cotidiano,
16 ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
16 e qualquer dentre vós lhes disser: Ide em paz, aquecei-vos e fartai-vos, sem, contudo, lhes dar o necessário para o corpo, qual é o proveito disso?
17 ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
17 Assim, também a fé, se não tiver obras, por si só está morta.
18 ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
18 Mas alguém dirá: Tu tens fé, e eu tenho obras; mostra-me essa tua fé sem as obras, e eu, com as obras, te mostrarei a minha fé.
19 ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
19 Crês, tu, que Deus é um só? Fazes bem. Até os demônios creem e tremem.
20 ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
20 Queres, pois, ficar certo, ó homem insensato, de que a fé sem as obras é inoperante?
21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
21 Não foi por obras que Abraão, o nosso pai, foi justificado, quando ofereceu sobre o altar o próprio filho, Isaque?
22 ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
22 Vês como a fé operava juntamente com as suas obras; com efeito, foi pelas obras que a fé se consumou,
23 ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
23 e se cumpriu a Escritura, a qual diz: Ora, Abraão creu em Deus, e isso lhe foi imputado para justiça; e: Foi chamado amigo de Deus.
24 ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
24 Verificais que uma pessoa é justificada por obras e não por fé somente.
25 ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?
25 De igual modo, não foi também justificada por obras a meretriz Raabe, quando acolheu os emissários e os fez partir por outro caminho?
26 ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
26 Porque, assim como o corpo sem espírito é morto, assim também a fé sem obras é morta.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Tiago 2, comparar traduções ou montar um estudo — tudo direto pelo WhatsApp.