Tito 3

Kannada Bible (GL_KANNADA) vs ACF

Sair da comparação
ACF Almeida Corrigida Fiel
1 ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
1 Admoesta-os a que se sujeitem aos principados e potestades, que lhes obedeçam, e estejam preparados para toda a boa obra;
2 ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
2 Que a ninguém infamem, nem sejam contenciosos, mas modestos, mostrando toda a mansidão para com todos os homens.
3 ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
3 Porque também nós éramos noutro tempo insensatos, desobedientes, extraviados, servindo a várias concupiscências e deleites, vivendo em malícia e inveja, odiosos, odiando-nos uns aos outros.
4 ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
4 Mas quando apareceu a benignidade e amor de Deus, nosso Salvador, para com os homens,
5 ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
5 Não pelas obras de justiça que houvéssemos feito, mas segundo a sua misericórdia, nos salvou pela lavagem da regeneração e da renovação do Espírito Santo,
6 ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
6 Que abundantemente ele derramou sobre nós por Jesus Cristo nosso Salvador;
7 ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
7 Para que, sendo justificados pela sua graça, sejamos feitos herdeiros segundo a esperança da vida eterna.
8 ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
8 Fiel é a palavra, e isto quero que deveras afirmes, para que os que crêem em Deus procurem aplicar-se às boas obras; estas coisas são boas e proveitosas aos homens.
9 ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
9 Mas não entres em questões loucas, genealogias e contendas, e nos debates acerca da lei; porque são coisas inúteis e vãs.
10 ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
10 Ao homem hereje, depois de uma e outra admoestação, evita-o,
11 ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು.
11 Sabendo que esse tal está pervertido, e peca, estando já em si mesmo condenado.
12 ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು.
12 Quando te enviar Ártemas, ou Tíquico, procura vir ter comigo a Nicópolis; porque deliberei invernar ali.
13 ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.
13 Acompanha com muito cuidado Zenas, doutor da lei, e Apolo, para que nada lhes falte.
14 ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.
14 E os nossos aprendam também a aplicar-se às boas obras, nas coisas necessárias, para que não sejam infrutuosos.
15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.
15 Saúdam-te todos os que estão comigo. Saúda tu os que nos amam na fé. A graça seja com vós todos. Amém.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Tito 3, comparar traduções ou montar um estudo — tudo direto pelo WhatsApp.