Zacarias 10

Kannada Bible (GL_KANNADA) vs ARIB

Sair da comparação
ARIB Almeida Revisada Imprensa Bíblica
1 ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
1 Pedi ao Senhor chuva no tempo da chuva serôdia, sim, ao Senhor, que faz os relâmpagos; e ele lhes dará chuvas copiosas, e a cada um erva no campo,
2 ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
2 Pois os terafins falam vaidade, e os adivinhos vêem mentira e contam sonhos falsos; em vão procuram consolar; por isso seguem o seu caminho como ovelhas; estão aflitos, porque não há pastor.
3 ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.
3 Contra os pastores se acendeu a minha ira, e castigarei os bodes; mas o Senhor dos exércitos visitará o seu rebanho, a casa de Judá, e o fará como o seu majestoso cavalo na peleja.
4 ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
4 De Judá sairá a pedra angular, dele a estaca da tenda, dele o arco de guerra, dele sairão todos os chefes.
5 ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
5 Eles serão como valentes que na batalha pisam aos pés os seus inimigos na lama das ruas; pelejarão, porque o Senhor esta com eles; e confundirão os que andam montados em cavalos.
6 ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
6 Fortalecerei a casa de Judá, e salvarei a casa de José; fá-los-ei voltar, porque me compadeço deles; e serão como se eu não os tivera rejeitado; porque eu sou o Senhor seu Deus, e os ouvirei.
7 ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
7 Então os de Efraim serão como um valente, e o seu coração se alegrará como pelo vinho; seus filhos o verão, e se alegrarão; o seu coração se regozijará no Senhor.
8 ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.
8 Eu lhes assobiarei, e os ajuntarei, porque os tenho remido; e multiplicar-se-ão como dantes se multiplicavam.
9 ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
9 Ainda que os espalhei entre os povos, eles se lembrarão de mim em terras remotas; e, com seus filhos, viverão e voltarão.
10 ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
10 Pois eu os farei voltar da terra do Egito, e os congregarei da Assíria; e os trarei à terra de Gileade e do Líbano; e não se achará lugar bastante para eles.
11 ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.
11 Passarão pelo mar de aflição, e serão feridas as ondas do mar, e todas as profundezas do Nilo se secarão; então será abatida a soberba da Assíria, e o cetro do Egito se retirará.
12 ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
12 Eu os fortalecerei no Senhor, e andarão no seu nome, diz o Senhor.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Zacarias 10, comparar traduções ou montar um estudo — tudo direto pelo WhatsApp.