Zacarias 2
Kannada Bible (GL_KANNADA) vs ARA
ARA Almeida Revista e Atualizada 1993
1 ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
1 Tornei a levantar os olhos e vi, e eis um homem que tinha na mão um cordel de medir.
2 ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.
2 Então, perguntei: para onde vais tu? Ele me respondeu: Medir Jerusalém, para ver qual é a sua largura e qual o seu comprimento.
3 ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.
3 Eis que saiu o anjo que falava comigo, e outro anjo lhe saiu ao encontro.
4 ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
4 E lhe disse: Corre, fala a este jovem: Jerusalém será habitada como as aldeias sem muros, por causa da multidão de homens e animais que haverá nela.
5 ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
5 Pois eu lhe serei, diz o Senhor , um muro de fogo em redor e eu mesmo serei, no meio dela, a sua glória.
6 ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
6 Eh! Eh! Fugi, agora, da terra do Norte, diz o Senhor , porque vos espalhei como os quatro ventos do céu, diz o Senhor .
7 ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
7 Eh! Salva-te, ó Sião, tu que habitas com a filha da Babilônia.
8 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
8 Pois assim diz o Senhor dos Exércitos: Para obter ele a glória, enviou-me às nações que vos despojaram; porque aquele que tocar em vós toca na menina do seu olho.
9 ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
9 Porque eis aí agitarei a mão contra eles, e eles virão a ser a presa daqueles que os serviram; assim, sabereis vós que o Senhor dos Exércitos é quem me enviou.
10 ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
10 Canta e exulta, ó filha de Sião, porque eis que venho e habitarei no meio de ti, diz o Senhor .
11 ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
11 Naquele dia, muitas nações se ajuntarão ao Senhor e serão o meu povo; habitarei no meio de ti, e saberás que o Senhor dos Exércitos é quem me enviou a ti.
12 ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.
12 Então, o Senhor herdará a Judá como sua porção na terra santa e, de novo, escolherá a Jerusalém.
13 ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
13 Cale-se toda carne diante do Senhor , porque ele se levantou da sua santa morada.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Zacarias 2, comparar traduções ou montar um estudo — tudo direto pelo WhatsApp.