Zacarias 3
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
1 Ele me mostrou o sumo sacerdote Josué, o qual estava diante do anjo do Senhor, e Satanás estava à sua mão direita, para se lhe opor.
2 ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
2 Mas o anjo do Senhor disse a Satanás: Que o Senhor te repreenda, ó Satanás; sim, o Senhor, que escolheu Jerusalém, te repreenda! Não é este um tição tirado do fogo?
3 ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.
3 Ora Josué, vestido de trajes sujos, estava em pé diante do anjo.
4 ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
4 Então falando este, ordenou aos que estavam diante dele, dizendo: Tirai-lhe estes trajes sujos. E a Josué disse: Eis que tenho feito com que passe de ti a tua iniqüidade, e te vestirei de trajes festivos.
5 ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
5 Também disse eu: Ponham-lhe sobre a cabeça uma mitra limpa. Puseram-lhe, pois, sobre a cabeça uma mitra limpa, e vestiram-no; e o anjo do Senhor estava ali de pe.
6 ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ--
6 E o anjo do Senhor protestou a Josué, dizendo:
7 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
7 Assim diz o Senhor dos exércitos: Se andares nos meus caminhos, e se observares as minhas ordenanças, também tu julgarás a minha casa, e também guardarás os meus átrios, e te darei lugar entre os que estão aqui.
8 ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
8 Ouve, pois, Josué, sumo sacerdote, tu e os teus companheiros que se assentam diante de ti, porque são homens portentosos; eis que eu farei vir o meu servo, o Renovo.
9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
9 Pois eis aqui a pedra que pus diante de Josué; sobre esta pedra única estão sete olhos. Eis que eu esculpirei a sua escultura, diz o Senhor dos exércitos, e tirarei a iniqüidade desta terra num só dia.
10 ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
10 Naquele dia, diz o Senhor dos exércitos, cada um de vós convidará o seu vizinho para debaixo da videira e para debaixo da figueira.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Zacarias 3, comparar traduções ou montar um estudo — tudo direto pelo WhatsApp.