1 Coríntios 10

ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs ARC

Sair da comparação
ARC Almeida Revista e Corrigida 2009
1 ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;
1 Ora, irmãos, não quero que ignoreis que nossos pais estiveram todos debaixo da nuvem; e todos passaram pelo mar,
2 ಮೋಶೆಯ ಶಿಷ್ಯರಾಗುವುದಕ್ಕಾಗಿ ಮೋಡದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನ ಹೊಂದಿದರು;
2 e todos foram batizados em Moisés, na nuvem e no mar,
3 ಒಂದೇ ಆತ್ಮಿಕ ಆಹಾರವನ್ನು ಊಟ ಮಾಡಿದರು;
3 e todos comeram de um mesmo manjar espiritual,
4 ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.
4 e beberam todos de uma mesma bebida espiritual, porque bebiam da pedra espiritual que os seguia; e a pedra era Cristo.
5 ಆದರೂ ಅವರಲ್ಲಿ ಅನೇಕರು ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಅವರು ಮರುಭೂಮಿಯಲ್ಲಿ ಕೊಲ್ಲಲ್ಪಟ್ಟರು.
5 Mas Deus não se agradou da maior parte deles, pelo que foram prostrados no deserto.
6 ಅವರು ಮಾಡಿದಂತೆ ನಾವು ಕೆಟ್ಟವುಗಳನ್ನು ಆಶಿಸಬಾರದೆಂಬುದಕ್ಕೆ ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ.
6 E essas coisas foram-nos feitas em figura, para que não cobicemos as coisas más, como eles cobiçaram.
7 ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
7 Não vos façais, pois, idólatras, como alguns deles; conforme está escrito: O povo assentou-se a comer e a beber e levantou-se para folgar.
8 ಅವರಲ್ಲಿ ಕೆಲವರು ಮಾಡಿದಂತೆ ನಾವು ಲೈಂಗಿಕ ಪಾಪಗಳನ್ನು ಮಾಡಬಾರದು. ಅವರಲ್ಲಿ ಇಪ್ಪತ್ತಮೂರು ಸಾವಿರ ಮಂದಿ ತಮ್ಮ ಆ ಪಾಪದ ಫಲವಾಗಿ ಒಂದೇ ದಿನದಲ್ಲಿ ಸತ್ತುಹೋದರು.
8 E não nos prostituamos, como alguns deles fizeram e caíram num dia vinte e três mil.
9 ಅವರಲ್ಲಿ ಕೆಲವರು ಮಾಡಿದಂತೆ ನಾವು ಪ್ರಭುವನ್ನು ಪರೀಕ್ಷಿಸಬಾರದು. ಅದರ ಫಲವಾಗಿ ಅವರು ಹಾವುಗಳಿಂದ ಮರಣಹೊಂದಿದರು.
9 E não tentemos a Cristo, como alguns deles também tentaram e pereceram pelas serpentes.
10 ಅವರಲ್ಲಿ ಕೆಲವರು ಮಾಡಿದಂತೆ ಗುಣುಗುಟ್ಟಬೇಡಿ. ಆ ಜನರು ಸಂಹಾರಕ ದೂತನಿಂದ ಕೊಲ್ಲಲ್ಪಟ್ಟರು.
10 E não murmureis, como também alguns deles murmuraram e pereceram pelo destruidor.
11 ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.
11 Ora, tudo isso lhes sobreveio como figuras, e estão escritas para aviso nosso, para quem já são chegados os fins dos séculos.
12 ಆದ್ದರಿಂದ ತಾನು ದೃಢವಾಗಿ ನಿಂತಿದ್ದೇನೆ ಎಂದು ಯೋಚಿಸುವ ವ್ಯಕ್ತಿಯು ಬೀಳದಂತೆ ಎಚ್ಚರಿಕೆಯಿಂದಿರಬೇಕು.
12 Aquele, pois, que cuida estar em pé, olhe que não caia.
13 ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.
13 Não veio sobre vós tentação, senão humana; mas fiel é Deus, que vos não deixará tentar acima do que podeis; antes, com a tentação dará também o escape, para que a possais suportar.
14 ಆದ್ದರಿಂದ, ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಗಳ ಪೂಜೆಯ ಬಗ್ಗೆ ಯೋಚಿಸಲೂಬೇಡಿ.
14 Portanto, meus amados, fugi da idolatria.
15 ನೀವು ಬುದ್ಧಿವಂತರೆಂದು ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾನು ಹೇಳುವುದನ್ನು ಸ್ವತಃ ನೀವೇ ವಿಚಾರಣೆ ಮಾಡಿ.
15 Falo como a sábios; julgai vós mesmos o que digo.
16 ನಾವು ದ್ರಾಕ್ಷಾರಸದ ಪಾತ್ರೆಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಕುಡಿಯುವಾಗ ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಲಿಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಲಿಲ್ಲವೇ?
16 Porventura, o cálice de bênção que abençoamos não é a comunhão do sangue de Cristo? O pão que partimos não é, porventura, a comunhão do corpo de Cristo?
17 ರೊಟ್ಟಿಯು ಒಂದೇ. ಆದ್ದರಿಂದ ನಮ್ಮಲ್ಲಿ ಅನೇಕರಿದ್ದರೂ ನಾವು ಒಂದೇ ದೇಹವಾಗಿದ್ದೇವೆ. ಯಾಕೆಂದರೆ ನಾವೆಲ್ಲಾ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಳ್ಳುತ್ತೇವೆ.
17 Porque nós, sendo muitos, somos um só pão e um só corpo; porque todos participamos do mesmo pão.
18 ಇಸ್ರೇಲ್ ಜನರ ಬಗ್ಗೆ ಯೋಚಿಸಿ. ಯಜ್ಞವಾಗಿ ಅರ್ಪಿತವಾದುದನ್ನು ತಿನ್ನುವ ಆ ಜನರು ಯಜ್ಞವೇದಿಕೆಯಲ್ಲಿ ಪಾಲುಗಾರರಾಗಿಲ್ಲವೇ?
18 Vede a Israel segundo a carne; os que comem os sacrifícios não são, porventura, participantes do altar?
19 ವಿಗ್ರಹಕ್ಕೆ ಅರ್ಪಿತವಾದ ಆಹಾರಪದಾರ್ಥವು ಮುಖ್ಯವಾದದ್ದೆಂದು ನಾನು ಹೇಳುತ್ತಿಲ್ಲ. ಅಲ್ಲದೆ ವಿಗ್ರಹವು ಮುಖ್ಯವಾದದ್ದು ಎಂಬ ಅಭಿಪ್ರಾಯವೂ ನನಗಿಲ್ಲ.
19 Mas que digo? Que o ídolo é alguma coisa? Ou que o sacrificado ao ídolo é alguma coisa?
20 ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ.
20 Antes, digo que as coisas que os gentios sacrificam, as sacrificam aos demônios e não a Deus. E não quero que sejais participantes com os demônios.
21 ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.
21 Não podeis beber o cálice do Senhor e o cálice dos demônios; não podeis ser participantes da mesa do Senhor e da mesa dos demônios.
22 ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!
22 Ou irritaremos o Senhor? Somos nós mais fortes do que ele?
23 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ.
23 Todas as coisas me são lícitas, mas nem todas as coisas convêm; todas as coisas me são lícitas, mas nem todas as coisas edificam.
24 ಪ್ರತಿಯೊಬ್ಬನೂ ತನಗೆ ಮಾತ್ರ ಹಿತಕರವಾದ ಕಾರ್ಯಗಳನ್ನು ಮಾಡದೆ ಬೇರೆಯವರಿಗೂ ಹಿತಕರವಾದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಬೇಕು.
24 Ninguém busque o proveito próprio; antes, cada um, o que é de outrem.
25 ಮಾಂಸದ ಮಾರುಕಟ್ಟೆಯಲ್ಲಿ ಮಾರುವ ಯಾವ ಮಾಂಸವನ್ನಾದರೂ ತಿನ್ನಿರಿ. ನೀವು ತಿನ್ನಬಾರದೆಂದು ಯೋಚಿಸುವ ಮಾಂಸದಂತೆ ಅದು ತೋರಿದರೂ ಆ ಮಾಂಸದ ಬಗ್ಗೆ ಯಾವ ಪ್ರಶ್ನೆಗಳನ್ನೂ ಕೇಳಬೇಡಿರಿ.
25 Comei de tudo quanto se vende no açougue, sem perguntar nada, por causa da consciência.
26 ನೀವು ಅದನ್ನು ತಿನ್ನಿರಿ. ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಪ್ರಭುವಿನದಾಗಿದೆ.”
26 Porque a terra é do Senhor e toda a sua plenitude.
27 ಕ್ರಿಸ್ತ ವಿಶ್ವಾಸಿಯಲ್ಲದ ಒಬ್ಬನು ನಿಮ್ಮನ್ನು ಊಟಕ್ಕೆ ಆಹ್ವಾನಿಸಿದರೆ, ಹೋಗುವುದಕ್ಕೆ ನಿಮಗೆ ಇಷ್ಟವಿದ್ದರೆ, ಅವನು ನಿಮಗೆ ಏನು ಬಡಿಸಿದರೂ ತಿನ್ನಿರಿ. ನೀವು ಆ ಪದಾರ್ಥವನ್ನು ತಿನ್ನಬೇಕೇ ಅಥವಾ ತಿನ್ನಬಾರದೇ ಎಂದು ನಿರ್ಧರಿಸಲು ಪ್ರಶ್ನೆಗಳನ್ನು ಕೇಳಬೇಡಿ.
27 E, se algum dos infiéis vos convidar e quiserdes ir, comei de tudo o que se puser diante de vós, sem nada perguntar, por causa da consciência.
28 ಆದರೆ ಒಬ್ಬನು ನಿಮಗೆ, “ಆ ಪದಾರ್ಥವು ವಿಗ್ರಹಗಳಿಗೆ ಅರ್ಪಿತವಾದದ್ದು” ಎಂದು ಹೇಳಿದರೆ, ನೀವು ಅದನ್ನು ತಿನ್ನಬೇಡಿ. ನಿಮಗೆ ಹೇಳಿದ ವ್ಯಕ್ತಿಯ ನಂಬಿಕೆಯನ್ನು ಹಾಳುಮಾಡಲು ನಿಮಗೆ ಇಷ್ಟವಿಲ್ಲದ್ದರಿಂದ ಮತ್ತು ಆ ಮಾಂಸವನ್ನು ತಿನ್ನುವುದು ತಪ್ಪೆಂದು ಜನರು ಭಾವಿಸಿಕೊಂಡಿರುವುದರಿಂದ ನೀವು ಅದನ್ನು ತಿನ್ನಬಾರದು.
28 Mas, se alguém vos disser: Isto foi sacrificado aos ídolos, não comais, por causa daquele que vos advertiu e por causa da consciência; porque a terra é do Senhor e toda a sua plenitude.
29 ಆದರೆ ನೀವೇ ಆ ರೀತಿ ಭಾವಿಸಿಕೊಂಡಿದ್ದೀರಿ ಎಂದು ನಾನು ಹೇಳುತ್ತಿಲ್ಲ. ಆದರೆ ಮತ್ತೊಬ್ಬ ವ್ಯಕ್ತಿಯು ಅದನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವುದರಿಂದ ಅವನ ಮನಸ್ಸಾಕ್ಷಿಯ ದೆಸೆಯಿಂದ ನಮ್ಮ ಸ್ವಾತಂತ್ರ್ಯವು ವಿಚಾರಣೆಗೆ ಗುರಿಯಾಗಬಾರದು.
29 Digo, porém, a consciência, não a tua, mas a do outro. Pois por que há de a minha liberdade ser julgada pela consciência de outrem?
30 ನಾನು ದೇವರಿಗೆ ಕೃತಜ್ಞತೆ ಸಲ್ಲಿಸಿ ಊಟಮಾಡಿದ ಪದಾರ್ಥದಿಂದಾಗಿ ಖಂಡನೆಗೆ ಗುರಿಯಾಗಲು ನನಗೆ ಇಷ್ಟವಿಲ್ಲ.
30 E, se eu com graça participo, por que sou blasfemado naquilo por que dou graças?
31 ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.
31 Portanto, quer comais, quer bebais ou façais outra qualquer coisa, fazei tudo para a glória de Deus.
32 ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.
32 Portai-vos de modo que não deis escândalo nem aos judeus, nem aos gregos, nem à igreja de Deus.
33 ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ.
33 Como também eu em tudo agrado a todos, não buscando o meu próprio proveito, mas o de muitos, para que assim se possam salvar.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Coríntios 10, comparar traduções ou montar um estudo — tudo direto pelo WhatsApp.