1 Coríntios 15
ಪವಿತ್ರ ಬೈಬಲ್, ಈಸಿ ಓದುವಿಕೆ ಆವೃತ್ತಿ (KAN2010) vs BKJ
1 ಸಹೋದರ ಸಹೋದರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನೀವು ಜ್ಞಾಪಿಸಿಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿಕೊಂಡಿರಿ ಮತ್ತು ಅದರಲ್ಲಿ ದೃಢವಾಗಿದ್ದೀರಿ.
1 Além disso, irmãos, eu vos declaro o evangelho que vos tenho pregado, o qual também recebestes, e no qual também estais firmes;
2 ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು.
2 pelo qual também sois salvos, se o guardardes na memória o que vos preguei, se não crestes em vão.
3 ನಾನು ಸ್ವೀಕರಿಸಿಕೊಂಡ ಸಂದೇಶವನ್ನು ನಾನು ನಿಮಗೆ ತಿಳಿಸಿದೆನು. ಆ ಸಂಗತಿಗಳು ಬಹಳ ಮುಖ್ಯವಾದುವುಗಳಾಗಿವೆ. ಪವಿತ್ರ ಗ್ರಂಥವು ಹೇಳುವಂತೆ, ಕ್ರಿಸ್ತನು ನಮ್ಮ ಪಾಪಗಳಿಗೋಸ್ಕರವಾಗಿ ಸತ್ತು
3 Porque eu vos entreguei primeiramente o que também recebi; como que Cristo morreu por nossos pecados, de acordo com as escrituras;
4 ಹೂಳಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬಂದನು.
4 e que foi sepultado, e que ele ressuscitou ao terceiro dia, de acordo com as escrituras;
5 ಬಳಿಕ ಕ್ರಿಸ್ತನು ಪೇತ್ರನಿಗೆ ಕಾಣಿಸಿಕೊಂಡನು. ಅನಂತರ ಹನ್ನೆರಡು ಮಂದಿ ಅಪೊಸ್ತಲರಿಗೆ ಕಾಣಿಸಿಕೊಂಡನು.
5 e que ele foi visto por Cefas, e então pelos doze;
6 ತರುವಾಯ, ಒಂದೇ ಸಮಯದಲ್ಲಿ ಐನೂರಕ್ಕಿಂತಲೂ ಹೆಚ್ಚು ಮಂದಿ ಸಹೋದರರಿಗೆ ಕಾಣಿಸಿಕೊಂಡನು. ಈ ಸಹೋದರರಲ್ಲಿ ಬಹುಮಂದಿ ಇಂದಿನವರೆಗೂ ಬದುಕಿದ್ದಾರೆ. ಆದರೆ ಕೆಲವರು ಸತ್ತುಹೋದರು.
6 após isto, ele foi visto por cerca de quinhentos irmãos de uma vez, dos quais grande parte permanece até agora mas alguns já dormem.
7 ಬಳಿಕ ಕ್ರಿಸ್ತನು ಯಾಕೋಬನಿಗೆ ಕಾಣಿಸಿಕೊಂಡನು. ಅನಂತರ ಮತ್ತೊಮ್ಮೆ ಎಲ್ಲಾ ಅಪೊಸ್ತಲರಿಗೆ ಕಾಣಿಸಿಕೊಂಡನು.
7 Após isto, ele foi visto por Tiago, então por todos os apóstolos.
8 ಕಟ್ಟಕಡೆಗೆ, ಕ್ರಿಸ್ತನು, ದಿನ ತುಂಬುವ ಮೊದಲೇ ಹುಟ್ಟಿದಂತಿದ್ದ ನನಗೆ ಕಾಣಿಸಿಕೊಂಡನು.
8 E, por último de todos, ele também foi visto por mim, como a alguém nascido fora do tempo devido.
9 ಉಳಿದೆಲ್ಲಾ ಅಪೊಸ್ತಲರು ನನಗಿಂತಲೂ ಶ್ರೇಷ್ಠರಾಗಿದ್ದಾರೆ. ಇದಕ್ಕೆ ಕಾರಣವೇನೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ಆದ್ದರಿಂದ ಅಪೊಸ್ತಲನೆಂದು ಕರೆಸಿಕೊಳ್ಳುವುದಕ್ಕೂ ನಾನು ಯೋಗ್ಯನಲ್ಲ.
9 Porque eu sou o menor dos apóstolos, que não sou digno para ser chamado apóstolo, porque eu persegui a igreja de Deus.
10 ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)
10 Mas pela graça de Deus, sou o que sou; e a sua graça que foi concedida a mim não foi em vão; mas eu trabalhei muito mais do que todos eles; todavia não eu, mas a graça de Deus que está comigo.
11 ಆದ್ದರಿಂದ ನಾನು ಬೋಧನೆ ಮಾಡಿದೆನೊ ಅಥವಾ ಇತರ ಅಪೊಸ್ತಲರು ಬೋಧನೆ ಮಾಡಿದರೊ ಎಂಬುದು ಮುಖ್ಯವಲ್ಲ. ನಾವೆಲ್ಲರೂ ಒಂದೇ ಸಂದೇಶವನ್ನು ಬೋಧಿಸುತ್ತೇವೆ ಮತ್ತು ನೀವು ನಂಬಿರುವುದೂ ಅದನ್ನೇ.
11 Portanto, quer seja eu ou eles, assim nós pregamos, e assim tendes crido.
12 ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ನಾವು ಬೋಧಿಸಿದ್ದೇವೆ. ಹೀಗಿರಲಾಗಿ, ಜನರಿಗೆ ಪುನರುತ್ಥಾನವಿಲ್ಲವೆಂದು ನಿಮ್ಮಲ್ಲಿ ಕೆಲವರು ಹೇಳುತ್ತಿರುವುದೇಕೆ?
12 Ora, embora se pregue que Cristo ressuscitou dos mortos, como dizem alguns dentre vós que não há ressurreição de mortos?
13 ಜನರಿಗೆ ಪುನರುತ್ಥಾನವಿಲ್ಲದಿದ್ದರೆ ಕ್ರಿಸ್ತನು ಸಹ ಸತ್ತವರೊಳಗಿಂದ ಎದ್ದೇಬಂದಿಲ್ಲ.
13 Mas se não há ressurreição de mortos, então Cristo não ressuscitou;
14 ಕ್ರಿಸ್ತನು ಎದ್ದೇಬಂದಿಲ್ಲವಾದರೆ ನಮ್ಮ ಬೋಧನೆಗೂ ನಿಮ್ಮ ನಂಬಿಕೆಗೂ ಯಾವ ಬೆಲೆಯೂ ಇಲ್ಲ.
14 e, se Cristo não ressuscitou, então é vã a nossa pregação, e também é vã a vossa fé.
15 ಅಲ್ಲದೆ, ದೇವರ ಬಗ್ಗೆ ನಾವು ಸುಳ್ಳುಸಾಕ್ಷಿ ಹೇಳಿದಂತಾಗುವುದು. ಏಕೆಂದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಿದನೆಂದು ನಾವು ದೇವರ ಬಗ್ಗೆ ಬೋಧಿಸಿದೆವು. ಜನರು ಜೀವಂತವಾಗಿ ಎದ್ದುಬರದಿದ್ದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಲೇ ಇಲ್ಲ.
15 Sim, e somos considerados como falsas testemunhas de Deus, pois testificamos de Deus, que ressuscitou a Cristo, ao qual ele não ressuscitou, se é que os mortos não ressuscitam.
16 ಸತ್ತುಹೋದ ಜನರು ಎಬ್ಬಿಸಲ್ಪಡದಿದ್ದರೆ, ಕ್ರಿಸ್ತನು ಸಹ ಎಬ್ಬಿಸಲ್ಪಡಲೇ ಇಲ್ಲ.
16 Porque, se os mortos não ressuscitam, então Cristo não ressuscitou;
17 ಕ್ರಿಸ್ತನು ಜೀವಂತವಾಗಿ ಎಬ್ಬಿಸಲ್ಪಟ್ಟಿಲ್ಲದಿದ್ದರೆ, ನಿಮ್ಮ ನಂಬಿಕೆಯು ನಿಷ್ಪ್ರಯೋಜಕವಾಗಿದೆ ಮತ್ತು ನೀವು ನಿಮ್ಮ ಪಾಪಗಳಿಂದ ಇನ್ನೂ ಅಪರಾಧಿಗಳಾಗಿದ್ದೀರಿ.
17 e, se Cristo não ressuscitou, a vossa fé é vã, e ainda estais nos vossos pecados.
18 ಇದಲ್ಲದೆ ಕ್ರಿಸ್ತನಲ್ಲಿದ್ದು ಸತ್ತುಹೋದವರು ನಾಶವಾಗಿದ್ದಾರೆ.
18 E também os que dormiram em Cristo pereceram.
19 ನಮಗೆ ಕ್ರಿಸ್ತನಲ್ಲಿರುವ ನಿರೀಕ್ಷೆಯು ಈ ಲೋಕಕ್ಕೆ ಮಾತ್ರ ಸೀಮಿತವಾಗಿದ್ದರೆ, ನಾವು ಬೇರೆಲ್ಲ ಜನರಿಗಿಂತಲೂ ದುಃಖಕ್ಕೆ ಪಾತ್ರರಾಗಿದ್ದೇವೆ.
19 Se apenas nesta vida temos esperança em Cristo, somos os mais miseráveis de todos os homens.
20 ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.
20 Mas, agora é Cristo ressuscitado dos mortos, tornando-se as primícias dos que dormem.
21 ಒಬ್ಬ ಮನುಷ್ಯನು (ಆದಾಮನು) ಮಾಡಿದ ಕಾರ್ಯದಿಂದಾಗಿ ಜನರು ಮರಣ ಹೊಂದುವಂತೆಯೇ ಒಬ್ಬ ಮನುಷ್ಯನ (ಕ್ರಿಸ್ತನ) ಮೂಲಕವಾಗಿಯೇ ಜನರು ಜೀವಂತವಾಗಿ ಎದ್ದುಬರುವರು.
21 Pois desde que a morte veio por um homem, também por um homem veio a ressurreição dos mortos.
22 ಆದಾಮನ ಸಂಬಂಧದಿಂದ ಎಲ್ಲರೂ ಸಾಯುತ್ತಾರೆ. ಇದೇರೀತಿ ಕ್ರಿಸ್ತನ ಸಂಬಂಧದಿಂದ ನಾವೆಲ್ಲರೂ ಮತ್ತೆ ಜೀವಂತರಾಗುತ್ತೇವೆ.
22 Porque, assim como em Adão todos morrem, igualmente também em Cristo todos serão vivificados.
23 ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದುಬರುವರು.
23 Mas cada homem em sua própria ordem: Cristo, as primícias; depois os que são de Cristo, na sua vinda.
24 ಅನಂತರ ಅಂತ್ಯ ಬರುವುದು. ಕ್ರಿಸ್ತನು ಎಲ್ಲಾ ಅಧಿಪತಿಗಳನ್ನು, ಅಧಿಕಾರಗಳನ್ನು ಮತ್ತು ಶಕ್ತಿಗಳನ್ನು ನಾಶಮಾಡುವನು. ಬಳಿಕ ಕ್ರಿಸ್ತನು ತಂದೆಯಾದ ದೇವರಿಗೆ ರಾಜ್ಯವನ್ನು ಕೊಡುವನು.
24 Então virá o fim, quando ele tiver entregue o reino a Deus, ao Pai, e quando ele tiver derrubado todo o governo, e toda a autoridade, e poder.
25 ದೇವರು ಎಲ್ಲಾ ಶತ್ರುಗಳನ್ನು ಕ್ರಿಸ್ತನಿಗೆ ಅಧೀನಗೊಳಿಸುವ ತನಕ ಕ್ರಿಸ್ತನು ಆಳಲೇಬೇಕು.
25 Pois ele deve reinar, até que ele tenha colocado todos os inimigos debaixo de seus pés.
26 ನಾಶವಾಗುವ ಕಡೆಯ ಶತ್ರುವೆಂದರೆ ಮರಣವೇ.
26 O último inimigo que será destruído é a morte.
27 “ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ.
27 Porque ele colocou todas as coisas debaixo de seus pés. Mas, quando ele diz que todas as coisas lhe estão sujeitas, está claro que exclui-se aquele que colocou todas as coisas sob ele.
28 ಸಮಸ್ತವು ತನ್ನ ಅಧೀನಕ್ಕೆ ಬಂದ ಮೇಲೆ, ಕ್ರಿಸ್ತನು ತನ್ನನ್ನೇ ದೇವರಿಗೆ ಅಧೀನಪಡಿಸಿಕೊಳ್ಳುವನು. ಸಮಸ್ತವನ್ನು ಕ್ರಿಸ್ತನಿಗೆ ಅಧೀನಪಡಿಸಿದಾತನು ದೇವರೇ. ಹೀಗೆ ದೇವರು ಸಮಸ್ತಕ್ಕೂ ಸರ್ವಾಧಿಪತಿಯಾಗುವನು.
28 E, quando todas as coisas lhe estiverem sujeitas, então o mesmo Filho também se sujeitará àquele que todas as coisas lhe sujeitou, para que Deus possa ser tudo em todos.
29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತುಹೋದವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಂಡ ಜನರು ಏನು ಮಾಡುವರು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಜನರು ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದೇಕೆ?
29 Do contrário, o que farão os que são batizados pelos mortos, se de modo algum os mortos ressuscitam? Por que então eles são batizados pelos mortos?
30 ನಮ್ಮ ವಿಷಯವೇನು? ನಾವು ನಮ್ಮನ್ನು ಪ್ರತಿ ತಾಸಿನಲ್ಲಿಯೂ ಅಪಾಯಕ್ಕೆ ಒಡ್ಡುವುದು ಏಕೆ?
30 E por que estamos nós em perigo a toda hora?
31 ನಾನು ಪ್ರತಿದಿನವೂ ಸಾಯುತ್ತೇನೆ. ಸಹೋದರರೇ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ಬಗ್ಗೆ ಹೆಮ್ಮೆಪಡುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಅದಾಗಿದೆ.
31 Eu protesto pela alegria que eu tenho em Cristo Jesus, Senhor nosso, cada dia morro.
32 ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.”
32 Se da maneira do homem eu lutei contra animais em Éfeso, que vantagem tenho, se os mortos não são ressuscitados? Comamos e bebamos, pois amanhã morreremos.
33 ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.”
33 Não se engane: As comunicações malignas corrompem as boas maneiras.
34 ಸ್ವಸ್ಥಚಿತ್ತರಾಗಿರಿ ಮತ್ತು ಪಾಪಮಾಡುವುದನ್ನು ನಿಲ್ಲಿಸಿರಿ. ನಿಮ್ಮಲ್ಲಿ ಕೆಲವರು ದೇವರನ್ನು ಅರಿತುಕೊಂಡಿಲ್ಲ. ನಿಮಗೆ ನಾಚಿಕೆ ಆಗಲೆಂದು ಇದನ್ನು ಹೇಳುತ್ತಿದ್ದೇನೆ.
34 Despertai para a justiça e não pequeis; porque alguns não têm o conhecimento de Deus; eu falo isto para vossa vergonha.
35 “ಸತ್ತವರು ಹೇಗೆ ಎದ್ದುಬರುವರು? ಅವರಿಗೆ ಯಾವ ಬಗೆಯ ದೇಹವಿರುತ್ತದೆ?” ಎಂದು ಕೆಲವರು ಕೇಳಬಹುದು.
35 Mas alguns homens dirão: Como são ressuscitados os mortos, e com que corpo eles virão?
36 ಅವು ಮೂಢ ಪ್ರಶ್ನೆಗಳು. ನೀವು ಬೀಜವನ್ನು ಬಿತ್ತಿದಾಗ, ಆ ಬೀಜವು ಜೀವ ಹೊಂದಿಕೊಂಡು ಬೆಳೆಯುವುದಕ್ಕಿಂತ ಮುಂಚೆ ಸಾಯಲೇಬೇಕು.
36 Tolo; o que tu semeias não é despertado, se não morrer;
37 ನೀವು ಬೀಜವನ್ನು ಬಿತ್ತುವಾಗ, ಆ ಬೀಜವು ಕೇವಲ ಕಾಳಾಗಿರುತ್ತದೆಯೇ ಹೊರತು ಮುಂದೆ ಹುಟ್ಟಿ ಬರಲಿರುವ ಗಿಡವಾಗಿರುವುದಿಲ್ಲ. ನೀವು ಬಿತ್ತುವ ಬೀಜವು ಕೇವಲ ಕಾಳಷ್ಟೆ. ಅದು ಗೋಧಿಯಾಗಿರಬಹುದು ಅಥವಾ ಬೇರೆ ಕಾಳಾಗಿರಬಹುದು.
37 e, quando tu semeias, não semeias o corpo que será; mas um grão desnudo, pode ser de trigo ou de algum outro grão;
38 ಅದರೆ ದೇವರು ತನ್ನ ಯೋಜನೆಗನುಸಾರವಾಗಿ ಅದಕ್ಕೆ ದೇಹವನ್ನು ಕೊಡುತ್ತಾನೆ ಮತ್ತು ದೇವರು ಪ್ರತಿಯೊಂದು ಬಗೆಯ ಬೀಜಕ್ಕೆ ಅದರದೇ ಆದ ದೇಹವನ್ನು ಕೊಡುತ್ತಾನೆ.
38 mas Deus dá-lhe o corpo como lhe agrada, e a cada semente o seu próprio corpo.
39 ಎಲ್ಲಾ ಶರೀರಗಳು ಒಂದೇ ರೀತಿಯ ಮಾಂಸವನ್ನು ಹೊಂದಿರುವುದಿಲ್ಲ. ಜನರಿಗೆ ಒಂದು ಬಗೆಯ ಮಾಂಸವಿರುತ್ತದೆ; ಪ್ರಾಣಿಗಳಿಗೆ ಮತ್ತೊಂದು ಬಗೆಯ ಮಾಂಸವಿರುತ್ತದೆ; ಪಕ್ಷಿಗಳಿಗೆ ಇನ್ನೊಂದು ಬಗೆಯ ಮಾಂಸವಿರುತ್ತದೆ. ಮೀನುಗಳು ಬೇರೊಂದು ರೀತಿಯ ಮಾಂಸವನ್ನು ಹೊಂದಿರುತ್ತವೆ.
39 Nem toda carne é a mesma carne; mas há um tipo de carne dos homens, e outra carne dos animais, outra dos peixes, e outra das aves.
40 ಇದಲ್ಲದೆ ಪರಲೋಕದ ಶರೀರಗಳಿವೆ ಮತ್ತು ಭೂಲೋಕದ ಶರೀರಗಳಿವೆ. ಪರಲೋಕದ ಶರೀರಗಳಿಗೆ ಒಂದು ಬಗೆಯ ಸೌಂದರ್ಯವಿರುತ್ತದೆ. ಭೂಲೋಕದ ಶರೀರಗಳಿಗೆ ಮತ್ತೊಂದು ಬಗೆಯ ಸೌಂದರ್ಯವಿರುತ್ತದೆ.
40 Há também corpos celestes, e corpos terrestres, mas a glória dos celestes é uma, e a glória dos terrestres é outra.
41 ಸೂರ್ಯನಿಗೆ ಒಂದು ಬಗೆಯ ಸೌಂದರ್ಯವಿದೆ; ಚಂದ್ರನಿಗೆ ಮತ್ತೊಂದು ಬಗೆಯ ಸೌಂದರ್ಯವಿದೆ. ನಕ್ಷತ್ರಗಳಿಗೆ ಇನ್ನೊಂದು ಬಗೆಯ ಸೌಂದರ್ಯವಿದೆ. ಪ್ರತಿಯೊಂದು ನಕ್ಷತ್ರವು ತನ್ನದೇ ಆದ ಸೌಂದರ್ಯವನ್ನು ಹೊಂದಿದೆ.
41 Há uma glória do sol, e outra glória da lua, e outra glória das estrelas; porque uma estrela difere de outra estrela em glória.
42 ಸತ್ತವರಿಗಾಗುವ ಪುನರುತ್ಥಾನವು ಅದೇ ರೀತಿಯಾಗಿರುವುದು. ಬಿತ್ತಲ್ಪಟ್ಟ ದೇಹವು ಹಾಳಾಗುವುದು ಮತ್ತು ಕೊಳೆತು ಹೋಗುವುದು. ಆದರೆ ಜೀವಂತವಾಗಿ ಎದ್ದುಬರುವ ಆ ದೇಹವನ್ನು ನಾಶಮಾಡಲು ಸಾಧ್ಯವೇ ಇಲ್ಲ.
42 Assim também é a ressurreição dos mortos. É semeado na corrupção, e ressuscitado em incorrupção;
43 ದೇಹವು ಹೀನಾವಸ್ಥೆಯಲ್ಲಿ ಬಿತ್ತಲ್ಪಡುವುದು, ಆದರೆ ಮಹಿಮೆಯೊಡನೆ ಎದ್ದುಬರುವುದು. ದೇಹವು ಬಿತ್ತಲ್ಪಟ್ಟಾಗ, ಅದು ಬಲಹೀನವಾಗಿರುತ್ತದೆ. ಆದರೆ ಅದು ಎದ್ದುಬಂದಾಗ ಅದಕ್ಕೆ ಶಕ್ತಿಯಿರುತ್ತದೆ.
43 é semeado na desonra, e ressuscitado em glória. É semeado na fraqueza, e ressuscitado em poder;
44 ಬಿತ್ತಲ್ಪಟ್ಟ ದೇಹವು ಭೌತಿಕವಾದದ್ದು. ಆದರೆ ಅದು ಎದ್ದುಬಂದಾಗ, ಆತ್ಮಿಕ ದೇಹವಾಗಿರುತ್ತದೆ.
44 é semeado no corpo natural, e ressuscitado no corpo espiritual. Se há um corpo natural, há corpo espiritual.
45 “ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.
45 E assim está escrito: O primeiro homem, Adão, foi feito em alma vivente; o último Adão, foi feito em espírito vivificante.
46 ಮೊದಲು ಬಂದವನು ಆತ್ಮಿಕ ಮನುಷ್ಯನಲ್ಲ, ಅವನು ಪ್ರಾಕೃತ ಮನುಷ್ಯ. ಅನಂತರ ಆತ್ಮಿಕ ಮನುಷ್ಯನು ಬಂದನು.
46 Mas não é primeiro o que é espiritual, mas o que é natural; e depois o que é espiritual.
47 ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು.
47 O primeiro homem é da terra, terreno; o segundo homem é o Senhor, do céu.
48 ಜನರು ಭೂಮಿಗೆ ಸಂಬಂಧಪಟ್ಟವರು. ಅವರು ಭೂಮಿಯ ಮೊದಲನೆ ಮನುಷ್ಯನಂತಿದ್ದಾರೆ. ಆದರೆ ಪರಲೋಕಕ್ಕೆ ಸಂಬಂಧಪಟ್ಟವರು ಪರಲೋಕದ ಮನುಷ್ಯನಂತಿದ್ದಾರೆ.
48 Tal qual o terreno, tais são também os terrenos; e tal qual o celestial, tais são também os celestiais.
49 ಭೂಮಿಯ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಂಡೆವು. ಆದ್ದರಿಂದ ಪರಲೋಕದ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಳ್ಳುವೆವು.
49 E assim como temos portado a imagem do terreno, assim também portaremos a imagem do celestial.
50 ಸಹೋದರ ಸಹೋದರಿಯರೇ, ನಾನು ಹೇಳುವುದೇನೆಂದರೆ, ಮಾಂಸ ಮತ್ತು ರಕ್ತ (ಭೌತಿಕ ದೇಹ) ಪರಲೋಕ ರಾಜ್ಯದಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. ನಾಶವಾಗುವಂಥದ್ದು ಎಂದಿಗೂ ನಾಶವಾಗದ ಒಂದರಲ್ಲಿ ಪಾಲುಹೊಂದಲು ಸಾಧ್ಯವಿಲ್ಲ.
50 Agora digo-vos isto, irmãos: Que carne e sangue não podem herdar o reino de Deus, nem a corrupção herdar a incorrupção.
51 ಆದರೆ ಕೇಳಿರಿ, ನಾನು ನಿಮಗೆ ಈ ರಹಸ್ಯವೊಂದನ್ನು ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಆದರೆ ನಾವೆಲ್ಲರೂ ಮಾರ್ಪಾಟಾಗುವೆವು.
51 Eis aqui vos digo um mistério: Nem todos dormiremos, mas todos seremos transformados,
52 ಇದಕ್ಕೆ ಕೇವಲ ಒಂದು ಕ್ಷಣಕಾಲ ಸಾಕು. ರೆಪ್ಪೆಬಡಿಯುವಷ್ಟು ವೇಗವಾಗಿ ನಾವು ಮಾರ್ಪಾಟಾಗುವೆವು. ಕಡೇ ತುತ್ತೂರಿಯನ್ನು ಊದಿದಾಗ ಇದು ಸಂಭವಿಸುವುದು. ತುತ್ತೂರಿಯನ್ನು ಊದಲಾಗುವುದು; ಆಗ ಸತ್ತುಹೋಗಿದ್ದ ವಿಶ್ವಾಸಿಗಳು ಸದಾಕಾಲ ಜೀವಿಸುವುದಕ್ಕಾಗಿ ಎಬ್ಬಿಸಲ್ಪಡುವರು ಮತ್ತು ನಾವು ಮಾರ್ಪಾಟಾಗುವೆವು.
52 em um momento, em um piscar de olhos, ante a última trombeta; porque a trombeta soará, e os mortos serão ressuscitados incorruptíveis, e nós seremos transformados.
53 ಅಳಿದುಹೋಗುವ ಈ ದೇಹವು ಅಳಿದುಹೋಗದ್ದನ್ನು ಧರಿಸಿಕೊಳ್ಳುವುದು. ಮರಣಾಧೀನವಾದ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು.
53 Porque é necessário que este corruptível seja revestido de incorruptibilidade, e que isto que é mortal se revista da imortalidade.
54 ಅಳಿದುಹೋಗುವ ಈ ದೇಹ ಅಮರತ್ವವನ್ನು ಧರಿಸಿಕೊಂಡಾಗ ಪವಿತ್ರಗ್ರಂಥದ ಈ ಮಾತುಗಳು ನೆರವೇರುತ್ತವೆ:
54 E, quando este corruptível tiver sido revestido de incorruptibilidade, e isto que é mortal tiver sido revestido de imortalidade, então se cumprirá provérbio, que está escrito: A morte foi tragada em vitória.
55 “ಮರಣವೇ, ನಿನ್ನ ಜಯವೆಲ್ಲಿ?
55 Ó morte, onde está o teu ferrão? Ó sepultura, onde está a tua vitória?
56 ಕೇಡುಮಾಡಲು ಮರಣಕ್ಕಿರುವ ಶಕ್ತಿಯು ಪಾಪವೇ. ಪಾಪದ ಶಕ್ತಿಯು ಧರ್ಮಶಾಸ್ತ್ರವೇ.
56 O aguilhão da morte é o pecado, e a força do pecado é a lei.
57 ಆದರೆ ನಾವು ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನು ನಮಗೆ ಜಯವನ್ನು ಕೊಡುತ್ತಾನೆ.
57 Mas graças a Deus que nos dá a vitória por nosso Senhor Jesus Cristo.
58 ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.
58 Portanto, meus amados irmãos, sede firmes, inabaláveis, sempre abundantes na obra do Senhor, sabendo que o vosso trabalho não é vão no Senhor.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Coríntios 15, comparar traduções ou montar um estudo — tudo direto pelo WhatsApp.